ಮೈಸೂರು: ಮೈಸೂರು ಪ್ರವಾಸದಲ್ಲಿರುವ ಕೇಂದ್ರ ಸಚಿವ ಎಚ್.ಡಿ ಕುಮಾರಸ್ವಾಮಿ ಭಾನುವಾರ ಬೆಳಿಗ್ಗೆ ನಂಜನಗೂಡಿನ ಶ್ರೀಕಂಠೇಶ್ವರ ಸ್ವಾಮಿಯ ದರ್ಶನ ಪಡೆದು ವಿಶ್ರಾಂತಿಗಾಗಿ ಸರ್ಕಾರಿ ಅತಿಥಿಗೃಹಕ್ಕೆ ಆಗಮಿಸಿದ ವೇಳೆ ಅತಿಥಿ ಗೃಹಕ್ಕೆ ಬೀಗ ಹಾಕಲಾಗಿತ್ತು.
ಈ ವೇಳೆ ಪ್ರವಾಸಿ ಮಂದಿರದ ಹೊರ ಭಾಗ ಕಾರಿನಲ್ಲೇ ಕುಳಿತ ಎಚ್‌ಡಿಕೆ 10 ನಿಮಿಷ ಕಾದ್ರೂ ಯಾವೊಬ್ಬ ಸಿಬ್ಬಂದಿ ಬಂದಿರಲಿಲ್ಲ. ಕೊನೆಗೆ ಮುಜುಗರಕ್ಕೊಳಗಾದ ಕುಮಾರಸ್ವಾಮಿ ಮೈಸೂರಿಗೆ ಕಾರಿನಲ್ಲಿ ತೆರಳಿದ್ದಾರೆ.
ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ, ನಂಜನಗೂಡು ಶ್ರೀ ಶ್ರೀಕಂಠೇಶ್ವರ ದೇವಾಲಯಕ್ಕೆ ಭೇಟಿ ನೀಡಿ ನಂಜನಗೂಡಿನ ಸರ್ಕಾರಿ ಅತಿಥಿಗೃಹದಲ್ಲಿ ಲಘು ವಿಶ್ರಾಂತಿಗಾಗಿ ತೆರಳಿದಾಗ ಅತಿಥಿಗೃಹಕ್ಕೆ ಬೀಗ ಹಾಕಿರುವ ಬಗ್ಗೆ ಮಾದ್ಯಮಗಳಲ್ಲಿ ಸುದ್ದಿ ಬಿತ್ತರವಾಗಿರುವುದು ಕಂಡುಬಂದಿರುತ್ತದೆ.
ಈ ಬಗ್ಗೆ ಜಿಲ್ಲಾಡಳಿತದ ಗಮನಕ್ಕೆ ಬಂದಿದ್ದು, ಸದರಿ ವಿಷಯದ ಬಗ್ಗೆ ಗಂಭೀರವಾಗಿ ಪರಿಗಣಿಸಿ ಸದರಿ ವಿಚಾರದಲ್ಲಿ ವಿಚಾರಣೆ ಮಾಡಲಾಗುತ್ತಿದ್ದು, ಕರ್ತವ್ಯ ಲೋಪದಡಿ ತಪ್ಪಿತಸ್ಥರ ವಿರುದ್ಧ ನಿಯಮಾನುಸಾರ ಶಿಸ್ತು ಕ್ರಮ ಜರುಗಿಸಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
ಮೈಸೂರು : ಎಲ್ಲ ಅನುಕೂಲತೆಗಳಿದ್ದರೂ ವಿದ್ಯೆ ತಲೆಗೆ ಹತ್ತುತ್ತಿಲ್ಲ ಎನ್ನುವ ವಿದ್ಯಾರ್ಥಿಗಳ ನಡುವೆ, ಗಾರೆ ಕೆಲಸ ಮಾಡುವವರ ಪುತ್ರಿಯೊಬ್ಬರು ದ್ವಿತೀಯ…
ಮಂಜು ಕೋಟೆ ಎಚ್. ಡಿ. ಕೋಟೆ : ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ತಾಲ್ಲೂಕಿನ ತುಂಬಸೋಗೆಯ ಎಂಎಂಕೆ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿನಿ…
ಮೈಸೂರು : ಚಾಮರಾಜ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ವಾಹನ ದಟ್ಟಣೆ ನಿಯಂತ್ರಣ ಹಾಗೂ ಸುಗಮ ಸಂಚಾರಕ್ಕಾಗಿ ಅಗತ್ಯ ಅಭಿವೃದ್ಧಿ ಕಾಮಗಾರಿಗಳನ್ನು…
ಮೈಸೂರು : ಬೇಸಿಗೆ ರಜೆಯಲ್ಲಿ ಪ್ರಯಾಣಿಕರ ಬೇಡಿಕೆಯನ್ನು ಪೂರೈಸಲು, ನೈರುತ್ಯ ರೈಲ್ವೆಯು ಮೈಸೂರು- ಜಲ್ಪೈಗುರಿ ಜಂಕ್ಷನ್ ನಡುವೆ ವಿಶೇಷ ಎಕ್ಸ್‌ಪ್ರೆಸ್…
ಮಥುರಾ : ಬೃಂದಾವನದ ಕೇಶಿ ಘಾಟ್ ಸಮೀಪ ಯಮುನಾ ನದಿಯಲ್ಲಿ ಪ್ರವಾಸಿಗರಿಂದ ತುಂಬಿದ ದೋಣಿ ಪಲ್ಟಿಯಾಗಿ ಆರು ಮಂದಿ ಸ್ಥಳದಲ್ಲೇ…