Mysore
26
scattered clouds

Social Media

ಗುರುವಾರ, 11 ಡಿಸೆಂಬರ್ 2025
Light
Dark

ಕಬಿನಿ,ನುಗು ಜಲಾಶಯಗಳಿಗೆ ಜಿಲ್ಲಾಧಿಕಾರಿ ಭೇಟಿ: ಮುಂಜಾಗ್ರತ ಕ್ರಮ ವಹಿಸುವಂತೆ ಸೂಚನೆ

ಮೈಸೂರು: ಕಬಿನಿ ಜಲಾನಯನ ಪ್ರದೇಶದಲ್ಲಿ ಹೆಚ್ಚು ಮಳೆಯಾಗುತ್ತಿರುವುದರಿಂದ ಕಬಿನಿ ಜಲಾಶಯದಿಂದ ಹೆಚ್ಚು ಪ್ರಮಾಣದ ನೀರು ಹೊರಬಿಡಲಾಗುತ್ತಿದ್ದು, ಈ ಸಂಬಂಧ ಜಿಲ್ಲಾಧಿಕಾರಿ ಜಿ. ಲಕ್ಷ್ಮೀ ಕಾಂತ ರೆಡ್ಡಿ ಬುಧವಾರ(ಜು.17) ಬೀಚನಹಳ್ಳ ಕಬಿನಿ ಜಲಾಶಯ ಹಾಗೂ ನುಗು ಜಲಾಶಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

ನೀರಿನ ಒಳಹರಿವು ಹೆಚ್ಚಿದ್ದು, ಯಾವುದೇ ಸಂದರ್ಭದಲ್ಲಾದರೂ ಮತ್ತೆ ನೀರು ಹೊರ ಬಿಡಬಹುದು. ಪೂರ್ವಭಾವಿಯಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಜನ ಹಾಗೂ ಜಾನುವಾರುಗಳಿಗೆ ತೊಂದರೆ ಆಗದಂತೆ ಅಗತ್ಯ ಕ್ರಮ ವಹಿಸಬೇಕು ಎಂದು ಅಧಿಕಾರಿಗಳಿಗೆ ಸಲಹೆ ಸೂಚನೆ ನೀಡಿದರು.

ಈಗಾಗಲೇ ತಾಲೂಕು ಆಡಳಿತದ ಅಧಿಕಾರಿಗಳು ಮುಳುಗಡೆ ಪ್ರದೇಶದ ಜನರಿಗೆ ಎಚ್ಚರಿಕೆಯನ್ನು ನೀಡಿದ್ದಾರೆ. ಕಬಿನಿ ಜಲಾಶಯದಿಂದ ಹೊರಬಿಡುತ್ತಿರುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿಗಳಾದ ಡಾ ಪಿ.ಶಿವರಾಜು, ಹುಣಸೂರು ಉಪ ವಿಭಾಗಾಧಿಕಾರಿ ವೆಂಕಟರಾಜು, ಹೆಚ್.ಡಿ.ಕೋಟೆ ತಹಶೀಲ್ದಾರ್ ಶ್ರೀನಿವಾಸ್, ಸರಗೂರು ತಹಶೀಲ್ದಾರ್ ರುಕಿಯಾ ಬೇಗಂ ಹಾಗೂ ನೀರಾವರಿ ಇಲಾಖೆಯ ಕಾರ್ಯಪಾಲಕ ಅಭಿಯಂತರರು ಹಾಗೂ ಅಧಿಕಾರಿಗಳು ಉಪಸ್ಥಿತರಿದ್ದರು.

Tags:
error: Content is protected !!