DCM DK Shivakumar visits Nadadevate Chamundeshwari
ಮೈಸೂರು: ಆಷಾಢ ಮಾಸದ 2ನೇ ಶುಕ್ರವಾರವಾಗಿರುವ ಹಿನ್ನೆಲೆಯಲ್ಲಿಂದು ಮೈಸೂರಿನ ಚಾಮುಂಡಿಬೆಟ್ಟಕ್ಕೆ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಕುಟುಂಬ ಸಮೇತ ಭೇಟಿ ನೀಡಿ ತಾಯಿಯ ದರ್ಶನ ಪಡೆದರು.
ಇಂದು ಬೆಳ್ಳಂಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಪತ್ನಿ ಉಷಾ, ಮಗಳು ಐಶ್ವರ್ಯ ಜೊತೆಗೂಡಿ ಚಾಮುಂಡಿಬೆಟ್ಟಕ್ಕೆ ಭೇಟಿ ನೀಡಿ ಚಾಮುಂಡಿ ತಾಯಿಯ ದರ್ಶನ ಪಡೆದರು. ಬಳಿಕ ಮಂತ್ರ ಪಠಿಸುತ್ತಾ ಚಾಮುಂಡೇಶ್ವರಿಗೆ ಈಡುಗಾಯಿ ಒಡೆದು ಹರಕೆ ತೀರಿಸಿದ ಅವರು, ನಾಡಿನ ಜನರಿಗೆ ಒಳ್ಳೆದಾಗಲಿ ಎಂದು ಪ್ರಾರ್ಥನೆ ಮಾಡಿದ್ದೇನೆ ಎಂದರು.
ದರ್ಶನದ ಬಳಿಕ ಸಿಎಂ ರೇಸ್‌ನಿಂದ ಹೊರ ಬಿದ್ರಾ ಎಂಬ ಮಾಧ್ಯಮದ ಪ್ರಶ್ನೆಗೆ ಉತ್ತರಿಸಿದ ಅವರು, ಪ್ರಯತ್ನ ವಿಫಲ ಆದ್ರೂ ಪ್ರಾರ್ಥನೆ ವಿಫಲ ಆಗಲ್ಲ. ನಾನು ನನಗೆ ಏನು ಬೇಕು ಅದನ್ನು ದೇವರ ಮುಂದೆ ಪ್ರಾರ್ಥನೆ ಮಾಡಿದ್ದೇನೆ. ಮಲ್ಲಿಕಾರ್ಜುನ ಖರ್ಗೆ ನಮಗೆ ಬುದ್ಧಿವಾದ ಹೇಳಿದ್ದಾರೆ. ಹೈಕಮಾಂಡ್ ಕೂಡ ಕೆಲ ವಿಚಾರ ಹೇಳಿದೆ. ಇಲ್ಲಿ ರಾಜಕೀಯ ಚರ್ಚೆ ಬೇಡ ಎಂದರು.
ಇನ್ನು ನೋಟಿಸ್ ಕೊಟ್ಟರು ಕೆಲ ಶಾಸಕರ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಮಾಧ್ಯಮದವರು ಕೇಳಿದ ಪ್ರಶ್ನೆಗಳಿಗೆ ಏನು ಪ್ರತಿಕ್ರಿಯೆ ನೀಡದೇ ತೆರಳಿದರು.
ಹನೂರು : ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಮಹಿಳೆಯೋರ್ವಳನ್ನು ಮಲೆ ಮಹದೇಶ್ವರ ಬೆಟ್ಟ ಪೊಲೀಸರು ಬಂಧಿಸಿರುವ ಘಟನೆ ಜರುಗಿದೆ. ಹನೂರು…
ಹೊಸದಿಲ್ಲಿ : ದೇಶದ 140 ಕೋಟಿ ಜನರ ಮತದಾನದ ಹಕ್ಕು ಉಳಿಸಲು ನಾವು ಮತಕಳ್ಳತನದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಇದರಲ್ಲಿ…
ಚಿಕ್ಕಮಗಳೂರು : ಅದೊಂದು ಬಹುಕಾಲದ ಪ್ರೀತಿ, ಪ್ರೀತಿ ಮಾಡಿ, ಪ್ರೇಯಸಿಯಿಂದ ಹಣ ಪಡೆದು, ಇದೀಗ ಬೇರೊಂದು ಮದುವೆಗೆ ಸಿದ್ಧವಾಗಿದ್ದ ಹುಡಗ…
ಬಂಡೀಪುರ, ನಾಗರಹೊಳೆಯಲ್ಲಿ ಹೊಸ ವರ್ಷ ಆಚರಿಸಲು ಬಯಸಿದವರಿಗೆ ನಿರಾಸೆ ರೆಸಾರ್ಟ್, ಹೋಟೆಲ್ ಮಾಲೀಕರಿಂದ ಸಫಾರಿ ಪುನಾರಂಭಕ್ಕೆ ಒತ್ತಡ? ಮೈಸೂರು :…
ಎಚ್.ಡಿ.ಕೋಟೆ : ತಾಲ್ಲೂಕಿನ ಕ್ಯಾತನಹಳ್ಳಿ, ಆಲನಹಳ್ಳಿ, ಜಿ. ಬಿ. ಸರಗೂರು ವ್ಯಾಪ್ತಿಯ ಐದು ಕೆರೆಗಳಿಗೆ ನೀರು ತುಂಬಿಸಲು ಅಧಿಕಾರಿಗಳು ನಿರ್ಲಕ್ಷಿ…
ಮೈಸೂರಿನ ರಾಮಕೃಷ್ಣನಗರದಲ್ಲಿರುವ ಸುಯೋಗ್ ಆಸ್ಪತ್ರೆ ಎದುರಿನ ರಸ್ತೆಯು ಸಂಪೂರ್ಣ ಹದಗೆಟ್ಟಿದೆ. ಈ ರಸ್ತೆಯಲ್ಲಿ ಎಲ್ಲೆಡೆ ದೊಡ್ಡ ದೊಡ್ಡ ಗುಂಡಿಗಳು ನಿರ್ಮಾಣವಾಗಿದ್ದು,…