ಮೈಸೂರು

ಅಭಿಮನ್ಯು ಆನೆ ಮಾವುತನ ಪತ್ನಿ ಸಾವು

ಮೈಸೂರು: ದಸರಾ ಗಜಪಡೆಯ ಆನೆ ಅಭಿಮನ್ಯುವಿನ ಮಾವುತ ವಸಂತ ಅವರ ಪತ್ನಿ ಅಂಬಿಕಾ ಅನಾರೋಗ್ಯದಿಂದ ನಿಧನರಾಗಿದ್ದಾರೆ. ಅವರಿಗೆ 35 ವರ್ಷ ವಯಸ್ಸಾಗಿತ್ತು.

ಕಳೆದ ಒಂದು ವರ್ಷದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅಂಬಿಕಾ ಅವರನ್ನು ಚಿಕಿತ್ಸೆಗಾಗಿ ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗಿನ ಜಾವ ಕೊನೆಯುಸಿರೆಳೆದಿದ್ದಾರೆ.

ಅನಾರೋಗ್ಯದ ಹಿನ್ನೆಲೆಯಲ್ಲಿ ಕಳೆದ ಎರಡು ವರ್ಷಗಳಿಂದ ದಸರಾ ಕಾರ್ಯಕ್ರಮಕ್ಕೆ ಆಗಮಿಸದಿದ್ದ ಅಂಬಿಕಾ, ಈ ಬಾರಿಯೂ ಸ್ವಗ್ರಾಮದಲ್ಲೇ ಉಳಿದುಕೊಂಡಿದ್ದರು.

ಪತ್ನಿಯ ಆರೋಗ್ಯ ಹದಗೆಟ್ಟ ಹಿನ್ನೆಲೆಯಲ್ಲಿ ಮಾವುತ ವಸಂತ ಅವರು ಎರಡು ದಿನಗಳ ಹಿಂದೆಯೇ ದಸರಾ ಕ್ಯಾಂಪ್‌ನಿಂದ ಊರಿಗೆ ತೆರಳಿದ್ದರು.

ವಸಂತ ಅವರ ಅನುಪಸ್ಥಿತಿಯಲ್ಲಿ ಕಾವಾಡಿ ರಾಜು ಅವರು ಅಭಿಮನ್ಯುವಿನ ಆರೈಕೆ ಹಾಗೂ ನಿರ್ವಹಣೆಯ ಜವಾಬ್ದಾರಿ ವಹಿಸಿಕೊಂಡಿದ್ದಾರೆ. ಅಭಿಮನ್ಯು ಈ ಬಾರಿಯ ದಸರಾ ಜಂಬೂಸವಾರಿಯಲ್ಲಿ ನಿಶಾನೆ ಆನೆಯಾಗಿ ಆಯ್ಕೆಯಾಗಿದೆ.

 

ಆಂದೋಲನ ಡೆಸ್ಕ್

Recent Posts

ಶ್ರೀರಂಗಪಟ್ಟಣ ದಸರಾ ಜಂಬೂಸವಾರಿಗೆ ನಟ ರವಿಚಂದ್ರನ್‌ ಚಾಲನೆ

ಮಂಡ್ಯ: ಜಿಲ್ಲೆಯ ಐತಿಹಾಸಿಕ ಶ್ರೀರಂಗಪಟ್ಟಣದಲ್ಲಿ ದಸರಾ ಮಹೋತ್ಸವಕ್ಕೆ ವೈಭವದ ಚಾಲನೆ ದೊರೆತಿದೆ. ನಾಡದೇವತೆ ಶ್ರೀ ಚಾಮುಂಡೇಶ್ವರಿ ದೇವಿಗೆ ಭಕ್ತಿಪೂರ್ವಕ ಪುಷ್ಪಾರ್ಚನೆ…

8 hours ago

ಮತದಾರರ ಹೆಸರು ಡಿಲೀಟ್‌ ವಿವಾದ: ಕೇಂದ್ರ ಚುನಾವಣಾ ಆಯೋಗಕ್ಕೆ ಸುಪ್ರೀಂಕೋರ್ಟ್‌ ನೋಟಿಸ್‌

ನವದೆಹಲಿ: ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿವಾದ ಇದೀಗ ಸುಪ್ರೀಂಕೋರ್ಟ್‌ನಲ್ಲಿ ಮಹತ್ವದ ಹಂತ ತಲುಪಿದೆ. ರಾಹುಲ್‌ ಗಾಂಧಿ ಹಾಗೂ ‘ಇಂಡಿಯಾ’…

9 hours ago

ಹೆಣ ಇದ್ದ ಸ್ಕಾರ್ಪಿಯೋ ಓಡಿಸಲು ಯಾರೂ ಸಿದ್ಧರಿಲ್ಲ

ಶೆಡ್‌ನಿಂದ ಹೆಣ ಹಾಕಿಕೊಂಡು ಬಂದ ದೀಪಕ್, ಗೇಟ್ ತನಕ ಬಂದು ಮುಂದಕ್ಕೆ ಹೋಗಲು ಆಗಲ್ಲ ಎಂದು ನಿರಾಕರಣೆ ಹೆಣ ಬಿಸಾಡುವ…

11 hours ago

ರೇಣುಕಾಸ್ವಾಮಿಯ ಹೆಣ ಬಿಸಾಡಲು ಜಾಗ ಹುಡುಕಾಟ

ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ Sattva Apartment ಹಿಂದಿನ ಜನ…

11 hours ago

ನೋಟಿನ ಕಂತೆಗಳನ್ನು ತಂದಿಟ್ಟ ದರ್ಶನ್

ಸರೆಂಡರ್ ಆದವರಿಗೆ ಕೊಡಲು; ಖರ್ಚುವೆಚ್ಚಕ್ಕೆ ಪ್ರದೋಷ್, ವಿನಯ್, ನಾಗರಾಜು ಕೈಗೆ ಕೇಳಿದಷ್ಟು ಹಣ ಕೊಟ್ಟರು ಸಹಾಯ ಮಾಡಿ, ಇಲ್ಲದಿದ್ದರೆ ನೇಣು…

11 hours ago

ಗುಂಪಿನಲ್ಲಿ ಒಬ್ಬರನ್ನು ಸರೆಂಡರ್ ಮಾಡಿಸಲು ಪ್ಲಾನಿಂಗ್

ಹೊಡೆದು ಬಡಿದವರು ಸರೆಂಡರ್ ಆಗಲಿ ಎಂದು ಚಿತ್ರದುರ್ಗದ ಹುಡುಗರ ವಾದ ಚಿತ್ರದುರ್ಗದ ದರ್ಶನ್ ಅಭಿಮಾನಿ ಸಂಘದ ಅಧ್ಯಕ್ಷ ರಾಘವೇಂದ್ರ ಮನವೊಲಿಸಲು…

12 hours ago