ಮೈಸೂರು

ಕೆ.ಆರ್.ನಗರದಲ್ಲಿ ತಾಯಿ–ನವಜಾತ ಶಿಶು ಸಾವು, ವೈದ್ಯರ ನಿರ್ಲಕ್ಷ್ಯವೆಂದು ಆರೋಪಿಸಿ ಪ್ರತಿಭಟನೆ

ಕೆ.ಆರ್.ನಗರ: ಇಲ್ಲಿನ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಹೆರಿಗೆಗೆ ದಾಖಲಾಗಿದ್ದ 25 ವರ್ಷದ ಸುಶ್ಮಿತಾ ಹಾಗೂ ಅವರ ನವಜಾತ ಶಿಶು ಮೃತಪಟ್ಟಿದ್ದಾರೆ. ವೈದ್ಯರ ನಿರ್ಲಕ್ಷ್ಯದಿಂದ ತಾಯಿ ಮತ್ತು ಮಗು ಸಾವನ್ನಪ್ಪಿದ್ದಾರೆ ಎಂದು ಆರೋಪಿಸಿ ಸಂಬಂಧಿಕರು ಆಸ್ಪತ್ರೆ ಎದುರು ಪ್ರತಿಭಟನೆ ನಡೆಸಿದರು.

ತಾಲೂಕಿನ ಮಳಲಿ ಗ್ರಾಮದ ಸುಶ್ಮಿತಾ ಅವರನ್ನು ರಾತ್ರಿ ಹೆರಿಗೆಗಾಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಿಗ್ಗೆ ಹೆರಿಗೆ ವೇಳೆ ಸುಶ್ಮಿತಾ ಮತ್ತು ಮಗು ಮೃತಪಟ್ಟಿದ್ದಾರೆ ಎನ್ನಲಾಗಿದೆ. ಇಲ್ಲಿಯೇ ಹೆರಿಗೆ ಮಾಡಿಸಲು ಸಾಧ್ಯವಿಲ್ಲ ಎಂದು ಮೊದಲೇ ತಿಳಿಸಿದ್ದರೆ ಮೈಸೂರಿಗೆ ಕರೆದೊಯ್ಯುತ್ತಿದ್ದೆವು ಎಂದು ಸಂಬಂಧಿಕರು ಅಳಲು ತೋಡಿಕೊಂಡರು. ಸುಶ್ಮಿತಾ ಅವರ ಸ್ಥಿತಿಯ ಬಗ್ಗೆ ಸಮಯಕ್ಕೆ ಸರಿಯಾಗಿ ಮಾಹಿತಿ ನೀಡಲಿಲ್ಲ ಎಂದೂ ಆರೋಪಿಸಿದರು.

ವಿಷಯ ತಿಳಿದ ಬಳಿಕ ಶಾಸಕ ಡಿ. ರವಿಶಂಕರ್ ಆಸ್ಪತ್ರೆಗೆ ಭೇಟಿ ನೀಡಿ ವೈದ್ಯರೊಂದಿಗೆ ಚರ್ಚೆ ನಡೆಸಿದರು. ಈ ವೇಳೆ ಸಂಬಂಧಿಕರು ತಮ್ಮ ಆರೋಪಗಳನ್ನು ಶಾಸಕರ ಮುಂದಿಟ್ಟರು.

ಪಟ್ಟಣದ ಪೊಲೀಸ್ ಇನ್‌ಸ್ಪೆಕ್ಟರ್ ಶಿವಪ್ರಕಾಶ್ ಆಸ್ಪತ್ರೆಗೆ ಭೇಟಿ ನೀಡಿ ಮಾಹಿತಿ ಪಡೆದಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತಾಯಿ ಮತ್ತು ಮಗುವಿನ ಸಾವಿಗೆ ನಿಖರ ಕಾರಣ ತನಿಖೆಯ ಬಳಿಕ ತಿಳಿಯಬೇಕಿದೆ.

ಆಂದೋಲನ ಡೆಸ್ಕ್

Recent Posts

ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ ಸಾವು

ಮೈಸೂರು: ಅರಮನೆ ಸಮೀಪದ ಚಾಮರಾಜ ವೃತ್ತದ ಬಳಿ ಸ್ಕೂಟರ್‌ಗೆ ಸಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ 17 ವರ್ಷದ ವಿದ್ಯಾರ್ಥಿನಿ…

7 mins ago

ಹಸಗೂಲಿಯಲ್ಲಿ ಸರಣಿ ಕಳ್ಳತನ: 500 ಮೀಟರ್‌ಗೂ ಹೆಚ್ಚು ಮೋಟಾರ್ ಕೇಬಲ್ ಕಳವು

ಗುಂಡ್ಲುಪೇಟೆ: ತಾಲ್ಲೂಕಿನ ಹಸಗೂಲಿ ಗ್ರಾಮದಲ್ಲಿ ಸರಣಿ ಕಳ್ಳತನದಿಂದ ರೈತರು ಆತಂಕಕ್ಕೀಡಾಗಿದ್ದಾರೆ. ಗ್ರಾಮದ ಹಲವು ಜಮೀನುಗಳಲ್ಲಿ ಹತ್ತಕ್ಕೂ ಹೆಚ್ಚು ಮೋಟಾರ್‌ಗಳ ಕೇಬಲ್‌ಗಳನ್ನು…

32 mins ago

ಓದುಗರ ಪತ್ರ: ಡಿಜಿಟಲ್ ವಂಚನೆ: ಸುಪ್ರೀಂ ಆದೇಶ ಸ್ವಾಗತಾರ್ಹ

ಇಂದಿನ ಡಿಜಿಟಲ್ ಯುಗದಲ್ಲಿ ಆನ್‌ಲೈನ್ ವಹಿವಾಟು ಜನಜೀವನದ ಅವಿಭಾಜ್ಯ ಅಂಗವಾಗಿದೆ. ಆದರೆ ಡಿಜಿಟಲ್ ತಂತ್ರಜ್ಞಾನದ ಬೆಳವಣಿಗೆಯೊಂದಿಗೆ ಸೈಬರ್ ವಂಚನೆಗಳೂ ಹೆಚ್ಚುತ್ತಿವೆ.…

2 hours ago

ಓದುಗರ ಪತ್ರ: ದರ ಇಳಿಸಿದ ಸಚಿವರ ನಡೆ ಶ್ಲಾಘನೀಯ

ವರ್ಷಕ್ಕೊಮ್ಮೆ ಅವಕಾಶ ಸಿಗುವ ಹಾಸನಾಂಬೆ ದೇವಿಯ ದರ್ಶನಕ್ಕೆ ಲಕ್ಷಾಂತರ ಭಕ್ತರು ಆಗಮಿಸುತ್ತಾರೆ. ಈ ಮಧ್ಯೆ ಹಾಸನ ಜಿಲ್ಲಾಡಳಿತ ಮತ್ತು ದೇವಾಲಯದ…

2 hours ago

ಓದುಗರ ಪತ್ರ: ನಾಡಧ್ವಜಕ್ಕೆ ಅಧಿಕೃತ ಸ್ಥಾನಮಾನ ಸಿಗಲಿ

ಕನ್ನಡ ನಾಡಿನ ಅಸ್ಮಿತೆಯ ಪ್ರತೀಕವಾದ ನಾಡಧ್ವಜಕ್ಕೆ ಇದುವರೆಗೂ ಅಧಿಕೃತ ಸ್ಥಾನಮಾನ ದೊರೆಯದಿರುವುದು ನೋವಿನ ಸಂಗತಿಯಾಗಿದೆ. ವಿವಿಧ ರಾಜ್ಯಗಳಲ್ಲಿ ಅಲ್ಲಿನ ಧ್ವಜಗಳಿಗೆ…

2 hours ago

ಓದುಗರ ಪತ್ರ: ಸೂಚನಾ ಫಲಕ, ಬೀದಿ ದೀಪ ಅಳವಡಿಸಿ

ಕುವೆಂಪುನಗರದ ವಿಶ್ವಮಾನವ ಜೋಡಿ ರಸ್ತೆಯಲ್ಲಿ ಕಳೆದ ಒಂದು ವಾರದಿಂದ ಕಾಮಗಾರಿ ನಡೆಯುತ್ತಿದ್ದು, ಪ್ರತಿದಿನ ಈ ರಸ್ತೆಯಲ್ಲಿ ಸಂಚರಿಸುವ ಸಾರ್ವಜನಿಕರು ಹಾಗೂ…

2 hours ago