ಹುಣಸೂರು : ಸಾಲ ಬಾಧೆಯಿಂದ ತಾಲ್ಲೂಕಿನ ಬಿಳಿಕೆರೆ ಹೋಬಳಿಯ ಶ್ರವಣಹಳ್ಳಿ ಗ್ರಾಮದ ರೈತ ಪುಟ್ಟಸ್ವಾಮಾಚಾರಿ (50) ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಇವರು ಹೊಗೆಸೊಪ್ಪು ಹಾಗೂ ಇನ್ನಿತರೆ ಬೆಳೆಗಳನ್ನು ಬೆಳೆಯಲು ಒಟ್ಟು 20 ಲಕ್ಷ ರೂ. ಕೈ ಸಾಲ ಪಡೆದಿದ್ದು , ಖಾಸಗಿ ಫೈನ್ಸ್‌ಗಳಿಂದಲೂ 9 ಲಕ್ಷ ರೂ. ಸಾಲ ಪಡೆದಿದ್ದರು. ಸಾಲ ನೀಡಿದ್ದವರು ಮರುಪಾವತಿಸಲು ಒತ್ತಾಯಿಸಿದ್ದರು.
ಆದರೆ, ಸಾಲ ತೀರಿಸಲಾಗದೆ ವಿಷ ಸೇವಿಸಿ ಆತ್ಮಹತ್ಯೆಗೆ ಮುಂದಾಗಿದ್ದರು. ಅವರನ್ನು ಆಸ್ಪತ್ರೆಗೆ ದಾಖಲಿಸಿದರೂ ಚಿಕಿತ್ಸೆಫಲಿಸದೆ ಮೃತಪಟ್ಟಿದ್ದಾರೆ. ಈ ಸಂಬಂಧ ಬಿಳಿಕೆರೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ನಡೆಸಿದ ನಂತರ ವಾರಸುದಾರರಿಗೆ ಪಾರ್ಥಿವ ಶರೀರವನ್ನು ಹಸ್ತಾಂತರಿಸಲಾಯಿತು. ಇವರಿಗೆ ಪತ್ನಿ ಹಾಗೂ ಇಬ್ಬರು ಮಕ್ಕಳಿದ್ದಾರೆ.