ಹನಗೋಡು: ಹುಣಸೂರು ತಾಲ್ಲೂಕಿನ ದಾಸನಪುರ ಗ್ರಾಮದ ರೈತ ವೆಂಕಟೇಶ್ (45) ಸಾಲ ಭಾದೆ ತಾಳಲಾರದೆ ತಮ್ಮ ತೋಟದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬುಧವಾರ ರಾತ್ರಿ ನಡೆದಿದೆ.
ಹುಣಸೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹನಗೋಡಿನ ವ್ಯವಸಾಯ ಸೇವಾ ಸಹಕಾರ ಬ್ಯಾಂಕ್‌ನಲ್ಲಿ ತಾಯಿ ಯಶೋದಮ್ಮ ಎಂಬವರ ಹೆಸರಿನಲ್ಲಿ 2.5 ಲಕ್ಷ ರೂ. ಹಾಗೂ ವೆಂಕಟೇಶ್ ತನ್ನ ಹೆಸರಿನಲ್ಲಿ 3 ಲಕ್ಷ ರೂ. ಸಾಲ ಮಾಡಿಕೊಂಡಿದಲ್ಲದೆ, ಕೊಟಕ್ ಮಹೀಂದ್ರ ಬ್ಯಾಂಕ್‌ನಲ್ಲಿ 10 ಲಕ್ಷ ರೂ. ಟ್ರಾಕ್ಟರ್ ಸಾಲ ಮತ್ತು ಮನೆತನದ ಖರ್ಚಿಗಾಗಿ 20 ಲಕ್ಷ ರೂ. ಸಾಲ ಮಾಡಿದ್ದರು ಎಂದು ಕುಟುಂಬದವರು ತಿಳಿಸಿದ್ದಾರೆ.
ಜಮೀನಿನಲ್ಲಿ ಬೆಳೆ ಬೆಳೆದರೂ ಮಾರುಕಟ್ಟೆಯಲ್ಲಿ ಸೂಕ್ತ ಬೆಲೆ ಸಿಗದೆ ಇರುವುದರಿಂದ ಮನನೊಂದು ಆತ್ಮಹತ್ಯೆಗೆ ಶರಣಾಗಿದ್ದಾರೆ. ಕಂದಾಯ ಮತ್ತು ಕೃಷಿ ಅಧಿಕಾರಿಗಳು, ಹುಣಸೂರು ಗ್ರಾಮಾಂತರ ಠಾಣಾ ಪೊಲೀಸ್ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದರು.





