ಮೈಸೂರು

ಮೈಸೂರಿನಲ್ಲಿ ಮರಗಳ ಹನನ ; ಪರಿಸರ ಪ್ರೇಮಿಗಳ ಸಭೆಯಲ್ಲಿ ಮಹತ್ವದ ತೀರ್ಮಾನ?

ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ 40ಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ನಗರದ ಜನತೆ ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ಸದ್ಯ ಮರ ನಾಶ ಮಾಡಿದ ವಿಚಾರ ಖಂಡಿಸಿ ನಗರದ ವಿವಿಧ ಸಂಘಟನೆಗಳು ಯಾದವಗಿರಿಯ ಚೆಲುವಾಂಬ ಪಾರ್ಕಿನಲ್ಲಿ ಸೋಮವಾರ(ಏ.14) ಸಭೆ ನಡೆಸಿವೆ.

ಪರಿಸರ ಬಳಗ, ಕ್ಲೀನ್ ಮೈಸೂರು ಫೌಂಡೇಷನ್ ಹಾಗೂ ಮೈಸೂರು ಗ್ರಾಹಕ ಪರಿಷತ್ ವತಿಯಿಂದ ಸಭೆ ನಡೆದಿದ್ದು, ಸಭೆಯಲ್ಲಿ ಹಲವು ಮಹತ್ವಗಳನ್ನು ಕೈಗೊಳ್ಳಲಾಗಿದೆ.

ಮೊದಲಿಗೆ ಏ.17 ರಂದು ನಾಶವಾದ ಮರಗಳಿಗೆ ಕ್ಯಾಂಡಲ್ ಲೈಟ್ ಮೂಲಕ ಶ್ರದ್ಧಾಂಜಲಿ ಅರ್ಪಿಸಲು ಸಭೆಯಲ್ಲಿ ನಿರ್ಧಾರ ಕೈಗೊಳ್ಳಲಾಯಿತು. ಏ.18ರಂದು ಪಾಲಿಕೆ, ಡಿಸಿ ಕಚೇರಿ, ಅರಣ್ಯ ಇಲಾಖೆ ಮುಂಭಾಗ ಶಾಂತಿಯುತ ಪ್ರತಿಭಟನೆಗೆ ಕರೆ ನೀಡಲಾಯಿತು.

ಮರ ನಾಶಪಡಿಸಿದ ಅಧಿಕಾರಿಗಳಿಂದಲೇ ಅದೇ ಸ್ಥಳದಲ್ಲೇ 40ಕ್ಕೂ ಹೆಚ್ಚು ಗಿಡಗಳನ್ನು ನೆಡಿಸಲು ತೀರ್ಮಾನ ಮಾಡಲಾಯಿತು. ಇನ್ನೂ ಕಾನೂನು ಹೋರಾಟಕ್ಕೂ ಪರಿಸರವಾದಿಗಳಿಂದ ಒಕ್ಕೊರಲಿನ ತೀರ್ಮಾನ ಕೈಗೊಳ್ಳಲಾಯಿತು.

ಸಭೆಯಲ್ಲಿ ಪರಿಸರ ಬಳಗದ ಸಂಸ್ಥಾಪಕ ಸದಸ್ಯ ಪರುಶುರಾಮೇಗೌಡ, ಮೇಜರ್ ಜನರಲ್ ಸುಧೀರ್ ಒಂಭತ್ತು ಕೆರೆ, ಪ್ರೋ.ಕಾಳಚೆನ್ನೇಗೌಡ, ಕ್ಲೀನ್ ಮೈಸೂರು ಫೌಂಡೇಷನ್ ಲೀಲಾ ವೆಂಕಟೇಶ್, ಲೀಲಾ ಶಿವಕುಮಾರ್ ಪರಿಸರವಾದಿ ಶೈಲಜೇಶ್, ಬರಹಗಾರ್ತಿ ಕುಸುಮ, ಲೆಟ್ಸ್ ಡೂ ಇಟ್ ಸಂಸ್ಥೆಯ ಪ್ರಶಾಂತ್, ಸೇರಿದಂತೆ ಹಲವಾರು ಪರಿಸರ ಪ್ರೇಮಿಗಳು ಭಾಗಿಯಾಗಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಪ್ರಧಾನಿ ಮೋದಿ ಸ್ವಾಗತಕ್ಕೆ ಸಜ್ಜಾದ ಆದಿಚುಂಚನಗಿರಿ : ಬಿಗಿ ಪೊಲೀಸ್‌ ಭದ್ರತೆ

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಅವರು ನಾಳೆ (ಏಪ್ರಿಲ್ 15) ಜಿಲ್ಲೆಯ ನಾಗಮಂಗಲ ತಾಲ್ಲೂಕಿನ ಆದಿಚುಂಚನಗಿರಿ ಶ್ರೀಕ್ಷೇತ್ರಕ್ಕೆ ಮೊದಲ…

1 hour ago

ಶಾಂತಿ ಒಪ್ಪಂದ ಜೀವಂತ | ಅಮೆರಿಕ-ಇರಾನ್ ಮಾತುಕತೆಗೆ ಸಿದ್ಧತೆ

ವಾಷಿಂಗ್ಟನ್ : ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿ ನಡೆದ ಅಮೆರಿಕ-ಇರಾನ್ ಮಾತುಕತೆ ವಿಫಲವಾದ ನಂತರ, ಎರಡು ವಾರಗಳ ಕದನ ವಿರಾಮ ಕೊನೆಗೊಳ್ಳುವ ಮೊದಲು,…

2 hours ago

ಐವರು ಸಾಧಕರಿಗೆ ಅಂಬೇಡ್ಕರ್‌ ಪ್ರಶಸ್ತಿ ; ಪ್ರಶಸ್ತಿ ವಿತರಿಸಿದ ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಅಸ್ಪೃಶ್ಯತೆ ಆಚರಣೆ, ಅಸಮಾನತೆ ವಿರುದ್ಧದ ಹೋರಾಟಗಳಲ್ಲಿ ಪಾಲ್ಗೊಂಡು, ಸಮ ಸಮಾಜ ನಿರ್ಮಾಣದ ಹಾದಿಯಲ್ಲಿ ಛಾಪು ಮೂಡಿಸಿದ ಐವರು…

3 hours ago

ಹಾರ್ಮುಜ್ ಜಲಸಂಧಿ ದಾಟಿದ ಹಡಗುಗಳು ; ಅಮೆರಿಕದ ದಿಗ್ಬಂಧನಕ್ಕೆ ಇರಾನ್ ಸವಾಲು

ಟೆಹ್ರಾನ್‌ : ಅಮೆರಿಕ ಸರ್ಕಾರ ಹೇರಿದ ನೌಕಾ ದಿಗ್ಬಂಧನ ಎದುರಿಸಿ ಇರಾನ್‌ನ ಹಡಗುಗಳು ಹಾರ್ಮುಜ್ ಜಲಸಂಧಿ ದಾಟುವುದನ್ನು ಮುಂದುವರಿಸಿವೆ. ಕನಿಷ್ಠ…

3 hours ago

ಅಂಬೇಡ್ಕರ್‌ ಚಿಂತನೆಗಳ ಬಗ್ಗೆ ಜಾಗೃತಿ ಮೂಡಿಸಿ : ಶಾಸಕ ತನ್ವೀರ್‌ ಸೇಠ್‌

ಮೈಸೂರು : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಹೋರಾಟದ ಬದುಕು ಮತ್ತು ಅವರು ಪ್ರತಿಪಾದಿಸಿದ ಸಮಾನತೆಯ ತತ್ವಗಳನ್ನು ಪ್ರತಿಯೊಬ್ಬರೂ ತಮ್ಮ…

4 hours ago

ಚಾ.ನಗರ | ಹೊಸೂರು ಗ್ರಾಮದಲ್ಲಿ ಮಳೆಗಾಗಿ ವಿಶೇಷ ಪ್ರಾರ್ಥನೆ

ಚಾಮರಾಜನಗರ : ತಾಲ್ಲೂಕಿನ ವಿ.ಸಿ.ಹೊಸೂರು ಗ್ರಾಮಸ್ಥರು ತಮ್ಮ ಊರಿಗೆ ಇನ್ನೂ ಪೂರ್ವ ಮುಂಗಾರು ಮಳೆ ಪ್ರವೇಶ ಆಗದ ಹಿನ್ನೆಲೆಯಲ್ಲಿ ಮಳೆಗಾಗಿ…

5 hours ago