ಮೈಸೂರು : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ರಸ್ತೆ ಅಗಲೀಕರಣದ ನೆಪಹೇಳಿ ರಾತ್ರೋರಾತ್ರಿ 40ಕ್ಕೂ ಹೆಚ್ಚು ಮರಗಳನ್ನು ಕಡಿದಿರುವುದು ನಗರದ ಜನತೆ ಹಾಗೂ ಪರಿಸರ ಪ್ರೇಮಿಗಳ ಆಕ್ರೋಶಕ್ಕೆ ಕಾರಣವಾಗಿದೆ.
ಸದ್ಯ ಈ ಬಗ್ಗೆ ಸ್ಪಷ್ಟನೆ ನೀಡಿರುವ ಅರಣ್ಯ ಇಲಾಖೆ ಅಧಿಕಾರಿ ಮೈಸೂರು ಮಹಾನಗರ ಪಾಲಿಕೆ ಕೋರಿಕೆಯಂತೆ ಮರಗಳನ್ನು ಕಡಿಯಲಾಗಿದೆ ಎಂದಿದ್ದಾರೆ.
ನಗರದ ಎಸ್ ಪಿ ಕಚೇರಿ ವೃತ್ತದಿಂದ ಕಾಳಿಕಾಂಬ ದೇವಸ್ಥಾನದವರೆಗೆ ರಸ್ತೆ ವಿಸ್ತರಣೆಗೆ ಸಂಬಂಧಿಸಿದಂತೆ ಮೈಸೂರು ಮಹಾನಗರ ಪಾಲಿಕೆಯು ಸಲ್ಲಿಸಿರುವ ಕೋರಿಕೆಯಂತೆ, 40 ಫೆಲ್ಟೋಫೋರಮ್ ಜಾತಿಯ ಮರಗಳನ್ನು ನಿಯಮಾನುಸಾರ ಕಡಿಯಲಾಗಿದೆ ಎಂದು ಮೈಸೂರು ಪ್ರಾದೇಶಿಕ ವಿಭಾಗದ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.