ಮೈಸೂರು

ದಿಲ್ಲಿ ಚಲೋ : ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಧ್ವನಿ

ಫೆ.7ರಿಂದ ರೈತ ಜಾಗೃತಿ ಯಾತ್ರೆ ಆರಂಭ

ಮಾ.19ರಂದು ದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ಬೃಹತ್‌ ಸಮಾವೇಶ

ಮೈಸೂರು : ಕೃಷಿ ಉತ್ಪನ್ನಗಳಿಗೆ ಕನಿಷ್ಠ ಬೆಂಬಲ ಬೆಲೆ, ಖಾತರಿ ಕಾನೂನು ಜಾರಿಗೆ ಆಗ್ರಹಿಸಿ ಸಂಯುಕ್ತ ಕಿಸಾನ್ ಮೋಚಾದ ವತಿಯಿಂದ ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ರೈತ ಜಾಗೃತಿ ಯಾತ್ರೆಯನ್ನು ಫೆ.7ರಿಂದ 40 ದಿನಗಳವರೆಗೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘಟನೆಯ ರಾಷ್ಟ್ರೀಯ ಸಹ ಸಂಚಾಲಕ ಕುರುಬೂರು ಶಾಂತಕುಮಾರ್ ತಿಳಿಸಿದರು.

‘ಮಾರ್ಚ್ 19ರಂದು ಹೊಸದಿಲ್ಲಿಯ ರಾಮ್‌ಲೀಲಾ ಮೈದಾನದಲ್ಲಿ ದೇಶದ ಎಲ್ಲಾ ರೈತರ ಬೃಹತ್ ಸಮಾವೇಶ ನಡೆಸಲಾಗುವುದು. ರೈತರ ಸಹಿ ಸಂಗ್ರಹದ ಮನವಿಪತ್ರವನ್ನು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಸಲ್ಲಿಸಲಾಗುವುದು ಎಂದು ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.

ಹೊಸದಿಲ್ಲಿಯ ಗಡಿಯಲ್ಲಿ ರೈತರು ಚಳವಳಿ ನಡೆಸಿ ಸರ್ಕಾರವನ್ನು ಎಚ್ಚರಿಸಿದ್ದರು. ಆದರೂ ಗಂಭೀರವಾದ ಕ್ರಮವಾಗದ ಕಾರಣದಿಂದ ರಾಷ್ಟ್ರೀಯ ಸಂಚಾಲಕ ಜಗಜಿತ್‌ಸಿಂಗ್ ಡಲ್ಲೇವಾಲ್ 131 ದಿನ ಉಪವಾಸ ಸತ್ಯಾಗ್ರಹ ನಡೆಸಿದ ಪರಿಣಾಮ, ಹೈಕೋರ್ಟ್ ನಿವೃತ್ತ ನ್ಯಾಯಾಧೀಶ ನವಾಬ್‌ಸಿಂಗ್ ಅಧ್ಯಕ್ಷತೆಯಲ್ಲಿ ಸಮಿತಿ ರಚಿಸಿ ಸಮಸ್ಯೆ ಪರಿಹಾರಕ್ಕೆ ವರದಿ ನೀಡುವಂತೆ ಸುಪ್ರೀಂ ಕೋರ್ಟ್ ಸೂಚಿಸಿತ್ತು.

ಸಮಿತಿಯು ರೈತರ ಪರವಾಗಿ ವರದಿ ನೀಡಿದೆ. ಕೇಂದ್ರದ 31 ಮಂದಿಯ ಸಂಸದೀಯ ಸಮಿತಿಯೂ, ಎಂಎಸ್‌ಪಿ ಖಾತ್ರಿ ಕಾನೂನು ಜಾರಿಗೆ ಬೆಂಬಲಿಸಿದೆ. ಆದರೆ, ಈ ಬಗ್ಗೆ ಸರ್ಕಾರ ಚಕಾರವನ್ನೇ ಎತ್ತದಿರುವುದನ್ನು ಖಂಡಿಸಿ ಯಾತ್ರೆಗೆ ನಿರ್ಧರಿಸಲಾಗಿದೆ’ ಎಂದು ತಿಳಿಸಿದರು.

ಎಂಎಸ್‌ಪಿ ಖಾತರಿ ಕಾನೂನು ಇಲ್ಲದ ಕಾರಣ ವರ್ಷಕ್ಕೆ 15 ಲಕ್ಷ ಕೋಟಿ ನಷ್ಟವನ್ನು ನಮ್ಮ ದೇಶದ ರೈತರು ಅನುಭವಿಸುತ್ತಿದ್ದಾರೆ ಎಂದರು.

ಗೋಷ್ಠಿಯಲ್ಲಿ ರೈತ ಮುಖಂಡರಾದ ಅತ್ತಹಳ್ಳಿ ದೇವರಾಜ್, ಬರಡನಪುರ ನಾಗರಾಜ್, ಕಿರಗಸೂರು ಶಂಕರ್, ಮಾರ್ಬಳ್ಳಿ ನೀಲಕಂಠಪ್ಪ, ವರಕೋಡು ನಾಗೇಶ್ ಹಾಜರಿದ್ದರು.

 

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಕೇಂದ್ರ ಸಚಿವ ವಿ.ಸೋಮಣ್ಣ ಸಹೋದರಿ ನಿಧನ

ರಾಮನಗರ: ಕೇಂದ್ರ ರೈಲ್ವೆ ಮತ್ತು ಜಲಶಕ್ತಿ ರಾಜ್ಯ ಖಾತೆ ಸಚಿವ ವಿ.ಸೋಮಣ್ಣ ಅವರ ಸಹೋದರಿ ಮಹಾದೇವಮ್ಮ ನಿಧನರಾಗಿದ್ದಾರೆ. ಕನಕಪುರ ತಾಲ್ಲೂಕಿನ…

1 hour ago

ಹಾಸನದಲ್ಲೂ ಭ್ರಷ್ಟ ಅಧಿಕಾರಿ ಮನೆ ಮೇಲೆ ಲೋಕಾಯುಕ್ತ ದಾಳಿ

ಹಾಸನ: ಭ್ರಷ್ಟಾಚಾರದ ಆರೋಪಗಳ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಇಂದು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಬೆಂಗಳೂರು, ಮೈಸೂರು, ಬಾಗಲಕೋಟೆ,…

2 hours ago

ಮಂಡ್ಯದಲ್ಲಿ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ

ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ಬೆಳ್ಳಂಬೆಳಿಗ್ಗೆ ಭ್ರಷ್ಟ ಅಧಿಕಾರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್‌ ನೀಡಿದ್ದಾರೆ. ಪಿಡಬ್ಲ್ಯೂಡಿ ಎಇಇ ಸತೀಶ್ ಮನೆ…

2 hours ago

ಮೈಸೂರು ಮೃಗಾಲಯದಲ್ಲಿ ‘ಕೂಲ್ ಕೂಲ್’ ವಾತಾವರಣ: ಪ್ರಾಣಿಗಳ ರಕ್ಷಣೆಗೆ ವಿಶೇಷ ಕ್ರಮ

ಮೈಸೂರು: ​ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಬೇಸಿಗೆಯ ಬಿಸಿಲು ದಿನದಿಂದ ದಿನಕ್ಕೆ ಏರುತ್ತಿದ್ದು, ಮನುಷ್ಯರಂತೆ ಮೃಗಾಲಯದ ವನ್ಯಜೀವಿಗಳೂ ಕೂಡ ತತ್ತರಿಸಿವೆ. ಪ್ರಾಣಿ-ಪಕ್ಷಿಗಳಿಗೆ…

3 hours ago

ಇರಾನ್‌-ಇಸ್ರೇಲ್‌ ಯುದ್ಧದ ಎಫೆಕ್ಟ್:‌ ದುಬಾರಿಯಾಗಲಿದೆ ಡ್ರೈಫ್ರೂಟ್ಸ್‌

ಬೆಂಗಳೂರು: ಇರಾನ್-ಇಸ್ರೇಲ್‌ ನಡುವಿನ ಯುದ್ಧದಿಂದಾಗಿ ಪ್ರಪಂಚದಾದ್ಯಂತ ತೈಲ ಮಾರುಕಟ್ಟೆಗಳು ಸಂಪೂರ್ಣವಾಗಿ ಅಲುಗಾಡುತ್ತಿವೆ. ಇದರ ಎಫೆಕ್ಟ್‌ ರಾಜ್ಯದ ಮೇಲೂ ತಟ್ಟಿದ್ದು, ಡ್ರೈಫ್ರೂಟ್ಸ್‌…

3 hours ago

ಬರಿಗೈಯಲ್ಲಿ ಚರಂಡಿ ಸ್ವಚ್ಛ ಮಾಡಿದ ಪೌರಕಾರ್ಮಿಕರು

ನಂಜನಗೂಡು: ಸ್ವಚ್ಛತೆಯ ಮೂಲಕವೇ ಗ್ರಾಮದ ಆರೋಗ್ಯ ಕಾಪಾಡುವ ಪೌರ ಕಾರ್ಮಿಕರಿಗೆ ಸರ್ಕಾರ ಅಗತ್ಯ ರಕ್ಷಣಾತ್ಮಕ ಸೌಲಭ್ಯಗಳನ್ನು ನೀಡುವುದರ ಜೊತೆ ಚರಂಡಿಗಳನ್ನು…

3 hours ago