ಮೈಸೂರು: ಪರಿಶಿಷ್ಟ ಪಂಗಡಗಳ ಕಲ್ಯಾಣ ಸಚಿವರಾದ ನಾಗೇಂದ್ರ ಅವರು 187 ಕೋಟಿ ಹಣವನ್ನ ದುರುಪಯೋಗ ಪಡೆಸಿಕೊಂಡು ಭ್ರಷ್ಟಾಚಾರ ಮಾಡಿದ್ದಾರೆ. ಹೀಗಾಗಿ ಸಚಿವ ನಾಗೇಂದ್ರ ಅವರನ್ನು ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿ ಬಿಜೆಪಿ ನಗರ (ಜಿಲ್ಲಾ) ಯುವ ಮೋರ್ಚಾ ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ಇಂದು(ಜೂ.1) ನಗರದ ನೂತನ ಜಿಲ್ಲಾಧಿಕಾರಿ ಬಳಿ ಜಮಾವಣೆಗೊಂಡ ಪ್ರತಿಭಟನಕಾರರು ಸರ್ಕಾರ ಹಾಗೂ ಸಚಿವ ನಾಗೇಂದ್ರ ವಿರುದ್ಧ ಧಿಕ್ಕಾರ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.
ಇದೇ ಸಂದರ್ಭದಲ್ಲಿ ಮಾತನಾಡಿದ ಶಾಸಕರಾದ ಟಿ ಎಸ್ ಶ್ರೀವತ್ಸ, ಕರ್ನಾಟಕ ರಾಜ್ಯ ಸರ್ಕಾರದಲ್ಲಿ ಈಗಾಗಲೇ ನೂರು ಪರ್ಸೆಂಟ್ ಹಗರಣ ನಡೆಯುತ್ತಿರುವುದು ಬೆಳಕಿಗೆ ಬಂದಿದೆ, ಮಹಿಳೆಯರಿಗೆ ಬಸ್ ಫ್ರೀ, 2000 ಹಣ ಫ್ರೀ, ಹಾಗೂ ಕರೆಂಟ್ ಫ್ರೀ, ಕೊಡುವುದರ ಮೂಲಕ ರಾಜ್ಯದ ಖಜಾನೆ ಖಾಲಿಯಾಗಿದೆ, ಆದ್ದರಿಂದ ಸಚಿವರಿಗೆ ದಲಿತರು, ಮತ್ತು ವಾಲ್ಮೀಕಿ ಸಮುದಾಯದ ಮೀಸಲಿಟ್ಟಿರುವ ಹಣವನ್ನು ದುರುಪಯೋಗಿಸಿಕೊಳ್ಳುವ ಮುಖಾಂತರ ಆ ಸಮುದಾಯಗಳಿಗೆ ದ್ರೋಹ ಮಾಡುವ ಕೆಲಸ ಮಾಡಿದೆ ಎಂದು ಆರೋಪಿಸಿದರು.
ಮೈಸೂರು ನಗರ ಯುವ ಮೋರ್ಚಾ ಅಧ್ಯಕ್ಷ ರಾಕೇಶ್ ಗೌಡ ಮಾತನಾಡಿ, ಸಚಿವ ನಾಗೇಂದ್ರರವರು ರಾಜೀನಾಮೆ ನೀಡದಿದ್ದರೆ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ. ಜೊತೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯರವರು ಸಹ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ರಾಜ್ಯ ಅಲ್ಪಸಂಖ್ಯಾತ ಮೋರ್ಚಾ ಅಧ್ಯಕ್ಷರಾದ ಅನಿಲ್ ಥಾಮಸ್, ರಾಜ್ಯ ಬಿಜೆಪಿ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಸಿದ್ದರಾಜು, ರಾಜ್ಯ ಬಿಜೆಪಿ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ ಸಂದೀಪ್, ರಾಜ್ಯ ಬಿಜೆಪಿ ಯುವ ಮೋರ್ಚಾ ಯೋಜನೆ ಹಾಗೂ ಸಂಶೋಧನೆಯ ಸಂಚಾಲಕರಾದ ಪ್ರಣಯ್, ಮೈಸೂರು ನಗರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿಗಳಾದ ಲೋಹಿತ್ ಡಿ, ಸಚಿನ್, ಹಾಗೂ ಮಾಜಿ ನಗರ ಪಾಲಿಕೆ ಸದಸ್ಯರಾದ ಬಿ ವಿ ಮಂಜುನಾಥ್, ಮೈಸೂರು ನಗರ ಪ್ರಧಾನ ಕಾರ್ಯದರ್ಶಿಗಳಾದ ಬಿ ಎಂ ರಘು, ಮೈಸೂರು ಗ್ರಾಮಾಂತರ ಯುವ ಮೋರ್ಚಾ ಪ್ರಧಾನ ಕಾರ್ಯದರ್ಶಿ, ಮಧು ಚಾಮುಂಡೇಶ್ವರಿ ನಗರ ಮಂಡಲ ಅಧ್ಯಕ್ಷರಾದ ರಾಕೇಶ್ ಭಟ್, ಬಿಜೆಪಿ ಮುಖಂಡರಾದ ಮನು,ಧನರಾಜ್,ಬದ್ರಿಶ್ ಹೂಟಗಳ್ಳಿ ನಾಗರಾಜು, ನಿಶಾಂತ್, ನವೀನ್, ಮೋಹನ್, ಮಧು, ಮನೋಹರ್,ಶಿವರಾಜು, ಲೀಲಾ ಶೆಣೈ, ಉಮೇಶ್, ಸಾಗರ್, ಪ್ರಭು,ನವೀನ್ ಶೆಟ್ಟಿ,ಚಂದನ್ ಗೌಡ, ಮೊಟ ರಾಜು, ಮುಂತಾದವರು ಉಪಸ್ಥಿತರಿದ್ದರು.
ಬೆಳಗಾವಿ: ಸಿಎಂ ಆಯ್ಕೆ ಮಾಡುವ ವೇಳೆ ಯಾವುದೇ ಗಡುವು ಕೊಟ್ಟಿಲ್ಲ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಸಿಎಂ ಬದಲಾವಣೆ…
ಬೆಂಗಳೂರು: ಸುಪ್ರೀಂಕೋರ್ಟ್ ತೀರ್ಪು ಬೆನ್ನಲ್ಲೇ ಮೇಕೆದಾಟು ಸಮತೋಲಿತ ಜಲಾನಯನ ಯೋಜನೆ ತ್ವರಿತ ಅನುಷ್ಠಾನಕ್ಕೆ ಕರ್ನಾಟಕ ಇಂಜಿನಿಯರಿಂಗ್ ಸಂಶೋಧನಾ ಕೇಂದ್ರ ನಿರ್ದೇಶಕರ…
ನವದೆಹಲಿ: ಸಾಂಸ್ಕೃತಿಕ ನಗರಿ ಮೈಸೂರು ಸೇರಿದಂತೆ ದೇಶದಲ್ಲಿರುವ ಪಾರಂಪರಿಕ ನಗರಗಳ ಅಭಿವೃದ್ಧಿಗೆ ಪೂರಕವಾದ ಕಾನೂನು ಚೌಕಟ್ಟು ರೂಪಿಸಲು ನಗರಾಭಿವೃದ್ಧಿ ಸಚಿವಾಲಯ…
ಬೆಳಗಾವಿ: ನನ್ನನ್ನು ಸಿಎಂ ಮಾಡುವುದಾದರೆ ಮಾತ್ರ ನಾನು ಬಿಜೆಪಿಗೆ ವಾಪಸ್ ಹೋಗುತ್ತೇನೆ ಎಂದು ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್…
ಬೆಂಗಳೂರು: ಗ್ಯಾರಂಟಿ ಯೋಜನೆ ಅಧ್ಯಕ್ಷ ಹಾಗೂ ಮಾಜಿ ಸಚಿವ ಎಚ್.ಎಂ.ರೇವಣ್ಣ ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿರುವ…
ಮೈಸೂರು: ಯೂನಿಟಿ ಮಾಲ್ ನಿರ್ಮಾಣಕ್ಕೆ ತಡೆ ವಿಚಾರಕ್ಕೆ ಸಂಬಂಧಿಸಿದಂತೆ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಮಾಧ್ಯಮ ಹೇಳಿಕೆ ಬಿಡುಗಡೆ ಮಾಡಿ ಸ್ಪಷ್ಟನೆ…