ಮೈಸೂರು

ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಎಬಿವಿಪಿ ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳ ಪ್ರತಿಭಟನೆ

ಮೈಸೂರು: 2021 2022ರ ಶೈಕ್ಷಣಿಕ ಸಾಲಿನ ಬಾಕಿಯಿರುವ ವಿದ್ಯಾರ್ಥಿ ವೇತನವನ್ನು ಈ ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್(ಎಬಿವಿಪಿ) ನೇತೃತ್ವದಲ್ಲಿ ವಿವಿಧ ಕಾಲೇಜುಗಳ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.

ನಗರದ ಜಿಲ್ಲಾಧಿಕಾರಿ ಕಚೇರಿ ಮುಂಭಾಗದಲ್ಲಿ ಜಮಾವಣೆಗೊಂಡ ವಿದ್ಯಾರ್ಥಿಗಳು, ವಿವಿಧ ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳು ಪ್ರತಿ ವರ್ಷ ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ತಮ್ಮ ಶಿಕ್ಷಣಕ್ಕೆ ವಿದ್ಯಾರ್ಥಿವೇತನವನ್ನು ಪೂರಕವಾಗಿ ಬಳಸಿಕೊಳ್ಳುತ್ತಿದ್ದರು.

 ಆದರೆ, ಈ ಬಾರಿ ವಿದ್ಯಾರ್ಥಿವೇತನಕ್ಕೆ ಯು ಯು ಸಿ ಎಂ ಎಸ್ ತಂತ್ರಾಂಶದ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ್ದು, ಕೆಲವರಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಆಗಿರುವುದಾಗಿ ನಮೂದಿಸಲಾಗಿದೆ. ಆದರೆ, ಬಹುತೇಕ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ದೊರೆತಿರುವುದಿಲ್ಲ ಎಂದು ಅವರು ಆರೋಪಿಸಿದರು.

ಈ ಕೂಡಲೇ ಸರ್ಕಾರವು ಇತ್ತ ಗಮನ ಹರಿಸಿ ವಿದ್ಯಾರ್ಥಿ ವೇತನವನ್ನು ಬಿಡುಗಡೆಗೊಳಿಸಬೇಕು. ಹಾಗೂ ವಿದ್ಯಾರ್ಥಿ ವೇತನ ನೀಡುವಲ್ಲಿ ಅವ್ಯವಹಾರ ನಡೆದಿದ್ದು, ಈ ಬಗ್ಗೆಯು ಸೂಕ್ತ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.

ಎನ್‌ಇಪಿ ಜಾರಿಯಾದ ನಂತರ ಎಲ್ಲ ವಿಶ್ವವಿದ್ಯಾನಿಲಯಗಳು ಯು ಯು ಸಿ ಎಂ ಎಸ್ ತಂತ್ರಾಂಶವನ್ನು ಬಳಸುತ್ತಿದ್ದು, ದಾಖಲಾತಿಯಿಂದ ಫಲಿತಾಂಶದವರೆಗೆ ಎಲ್ಲ ರೀತಿಯ ಮಾಹಿತಿಗಳನ್ನೂ ಅಲ್ಲಿ ನಮೂದಿಸಬೇಕಾಗಿದೆ. ಆದರೆ, ಈ ತಂತ್ರಾಂಶದಲ್ಲಿರುವ ಕೆಲವು ಸಮಸ್ಯೆಗಳಿಂದ ಹಾಸ್ಟೆಲ್‌ಗೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು ವಿದ್ಯಾರ್ಥಿವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆ ಉಂಟಾಗಿದೆ. ವಿವಿಗಳು ಸರಿಯಾದ  ಫಲಿತಾಂಶ ನೀಡದೇ ಇರುವುದರಿಂದ ಹಲವಾರು ರೀತಿಯ ಸಮಸ್ಯೆಗಳನ್ನು ವಿದ್ಯಾರ್ಥಿ ಸಮೂಹ ಎದುರಿಸುತ್ತಿದ್ದು, ಈ ಕೂಡಲೇ ತಂತ್ರಾಂಶವನ್ನು ಸರಿಪಡಿಸಬೇಕು ಎಂದು ಆಗ್ರಹಿಸಿದರು.

ನಂತರ ಜಿಲ್ಲಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಅವರಿಗೆ ಮನವಿ ಸಲ್ಲಿಸಲಾಯಿತು. ಎಬಿವಿಪಿ ಜಿಲ್ಲಾ ಸಂಚಾಲಕ ಎಂ.ಶಿವು, ಕಾರ್ಯದರ್ಶಿ ದಿನೇಶ್, ಮುಖಂಡರಾದ ನಮಿತಾ, ನಮ್ರತಾ, ಶ್ರೇಯಸ್‌ ಮೊದಲಾದವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

 

 

andolana

Recent Posts

ಲೋಕಾಯುಕ್ತ ಬಲೆಗೆ ಬಿದ್ದ ಪಿಡಿಒ

ಮೈಸೂರು: ಇ-ಸ್ವತ್ತು ಮಾಡಿ ಕೊಡಲು ಅರ್ಜಿದಾರರಿಗೆ ಹಣ ನೀಡುವಂತೆ ಒತ್ತಾಯ ಮಾಡಿದ ಗ್ರಾಮ ಪಂಚಾಯಿತಿ ಪಿಡಿಒ ಕುಳ್ಳೇಗೌಡ ನಾಲ್ಕು ಸಾವಿರ…

4 hours ago

ಅರ್ಥಪೂರ್ಣವಾಗಿ ಕನ್ನಡ ರಾಜ್ಯೋತ್ಸವ ಆಚರಣೆ – ಡಾ. ಪಿ ಶಿವರಾಜ್

ಮೈಸೂರು: ಕಳೆದ ಬಾರಿಯಂತೆ ಈ ಬಾರಿಯೂ ಅರ್ಥಪೂರ್ಣ ಹಾಗೂ ಅದ್ದೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆ ಮಾಡಲಾಗುವುದು ಎಂದು ಅಪರ ಜಿಲ್ಲಾಧಿಕಾರಿ…

5 hours ago

ನಗರದ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ: ಜಿ ಟಿ ದೇವೇಗೌಡ

ಮೈಸೂರು: ನಗರವನ್ನು ಸ್ವಚ್ಛಗೊಳಿಸುವ ಮೂಲಕ ಜನರ ಆರೋಗ್ಯ ಕಾಪಾಡುವ ಪೌರಕಾರ್ಮಿಕರ ಆರೋಗ್ಯವೂ ಮುಖ್ಯ ವಾಗಿದ್ದು, ಅವರು ಈ ವಿಷಯದಲ್ಲಿ ನಿರ್ಲಕ್ಷ್ಯ…

6 hours ago

ಹನೂರು: ಗುಂಡಿಮಯವಾದ ರಸ್ತೆ, ಸಾಮಾಜಿಕ ಜಾಲತಾಣ ಮೂಲಕ ಯುವಕ ವ್ಯಂಗ್ಯ

ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಅತಿ ದೊಡ್ಡ ಗ್ರಾಮ ಪಂಚಾಯಿತಿ ಎಂದು ಪ್ರಸಿದ್ಧಿ ಪಡೆದಿರುವ ಮಾರ್ಟಳ್ಳಿ ಗ್ರಾಮ ಪಂಚಾಯಿತಿ ಮುಖ್ಯ…

6 hours ago

ಇಶಾ ಫೌಂಡೇಶನ್‌ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂಕೋರ್ಟ್‌

ಹೊಸದಿಲ್ಲಿ: ತಮಿಳುನಾಡಿನ ಕೊಯಮತ್ತೂರಿನಲ್ಲಿರುವ ಸದ್ಗುರು ಜಗ್ಗಿ ವಾಸುದೇವ್‌ ಅವರ ಆಶ್ರಮ ಸೇರಲು ತನ್ನ ಇಬ್ಬರು ಹೆಣ್ಣುಮಕ್ಕಳನ್ನು ಬ್ರೈನ್‌ವಾಶ್‌ ಮಾಡಲಾಗಿದೆ ಎಂಬ…

7 hours ago

ಮಡಿಕೇರಿ: ಮಗನಿಂದಲೇ ತಂದೆಯ ಹತ್ಯೆ..

ಮಡಿಕೇರಿ: ಮಗನಿಂದಲೇ ತಂದೆ ಹತ್ಯೆಯಾದ ಘಟನೆ ಶ್ರೀಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯ ಚಿಕ್ಕಮಂಡೂರು ಗ್ರಾಮದಲ್ಲಿ ನಡೆದಿದೆ. ಸಿ ಎನ್ ನಾಣಯ್ಯ…

8 hours ago