ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದಿಂದ ಸಹಿ ಸಂಗ್ರಹ ಅಭಿಯಾನ
ಮೈಸೂರು: ನಗರದ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಆಗ್ರಹಿಸಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನಗರದ ಎಂ.ಜಿ.ರಸ್ತೆಯಲ್ಲಿರುವ ತರಕಾರಿ ಮಾರ್ಕೆಟ್ ಮುಂಭಾಗ ರಸ್ತೆಗುಂಡಿಗಳ ಬಳಿ ವಾಹನ ಸವಾರರಿಂದ ಸಹಿ ಸಂಗ್ರಹಿಸಲಾಯಿತು.
ಘಟಕದ ಅಧ್ಯಕ್ಷ ರವಿಶಂಕರ್ ಮಾತನಾಡಿ, ನಗರದಲ್ಲಿ ಎಲ್ಲೆಲ್ಲಿ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆಯೋ ಆ ಸ್ಥಳಗಳಲ್ಲಿ ವಾಹನ ಸವಾರರಿಂದ ಸಹಿ ಸಂಗ್ರಹಿಸಲಾಗುವುದು. ಮೈಸೂರು ಜಿಲ್ಲಾಧಿಕಾರಿಗಳಿಗೆ ಹಾಗೂ ಮಹಾಪೌರರಿಗೆ ನೀಡಲಾಗುವುದು ಎಂದು ಹೇಳಿದರು.
ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್ ಸಾಮಾಜಿಕ ಹೋರಾಟಗಾರ ಅಜಯ್ ಶಾಸ್ತ್ರೀ ಚಕ್ರಪಾಣಿ ಹಾಗೂ ಆಟೋ ಚಾಲಕರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಹಾಜರಿದ್ದರು.





