ಮೈಸೂರು

ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಆಗ್ರಹಿಸಿ

ಅಖಿಲ ಭಾರತೀಯ ಗ್ರಾಹಕ ಪಂಚಾಯತ್‌  ಮೈಸೂರು ಘಟಕದಿಂದ ಸಹಿ ಸಂಗ್ರಹ ಅಭಿಯಾನ

ಮೈಸೂರು: ನಗರದ ಹದಗೆಟ್ಟ ರಸ್ತೆಗಳನ್ನು ಸರಿಪಡಿಸಲು ಆಗ್ರಹಿಸಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕ ವತಿಯಿಂದ ಸಹಿ ಸಂಗ್ರಹ ಅಭಿಯಾನ ನಡೆಸಲಾಯಿತು. ನಗರದ ಎಂ.ಜಿ.ರಸ್ತೆಯಲ್ಲಿರುವ ತರಕಾರಿ ಮಾರ್ಕೆಟ್ ಮುಂಭಾಗ ರಸ್ತೆಗುಂಡಿಗಳ ಬಳಿ ವಾಹನ ಸವಾರರಿಂದ ಸಹಿ ಸಂಗ್ರಹಿಸಲಾಯಿತು.

ಘಟಕದ ಅಧ್ಯಕ್ಷ ರವಿಶಂಕರ್ ಮಾತನಾಡಿ, ನಗರದಲ್ಲಿ ಎಲ್ಲೆಲ್ಲಿ ರಸ್ತೆಗಳು ಗುಂಡಿ ಬಿದ್ದು ಹಾಳಾಗಿವೆಯೋ ಆ ಸ್ಥಳಗಳಲ್ಲಿ ವಾಹನ ಸವಾರರಿಂದ ಸಹಿ ಸಂಗ್ರಹಿಸಲಾಗುವುದು. ಮೈಸೂರು ಜಿಲ್ಲಾಧಿಕಾರಿಗಳಿಗೆ ಹಾಗೂ ಮಹಾಪೌರರಿಗೆ ನೀಡಲಾಗುವುದು ಎಂದು ಹೇಳಿದರು.

ಸಂಘಟನಾ ಕಾರ್ಯದರ್ಶಿ ವಿಕ್ರಂ ಅಯ್ಯಂಗಾರ್‌ ಸಾಮಾಜಿಕ ಹೋರಾಟಗಾರ ಅಜಯ್‌ ಶಾಸ್ತ್ರೀ ಚಕ್ರಪಾಣಿ ಹಾಗೂ ಆಟೋ ಚಾಲಕರು ಮತ್ತು ರಸ್ತೆ ಬದಿ ವ್ಯಾಪಾರಿಗಳು ಹಾಜರಿದ್ದರು.

 

andolana

Recent Posts

ಉಪ ಚುನಾವಣೆ | 1ಗಂಟೆ ವೇಳೆಗೆ ಬಾಗಲಕೋಟೆ ಶೇ.43, ದಾವಣಗೆರೆ ಶೇ.28ರಷ್ಟು ಮತದಾನ

ದಾವಣಗೆರೆ : ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ ಹಣಾಹಣಿಗೆ ಸಾಕ್ಷಿಯಾಗಿರುವ ದಾವಣಗೆರೆ ದಕ್ಷಿಣ ಮತ್ತು ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ…

41 mins ago

ಚಾರಣಿಗರ ಸುರಕ್ಷತೆಗಾಗಿ ಟ್ರ್ಯಾಕಿಂಗ್ ಆಪ್, ವಿಮೆ : ಸಚಿವ ಈಶ್ವರ ಖಂಡ್ರೆ

ಬೆಂಗಳೂರು : ರಾಜ್ಯದ ಗಿರಿಶ್ರೇಣಿಗಳಿಗೆ ಬರುವ ಚಾರಣಿಗರ ಸುರಕ್ಷತೆಯ ದೃಷ್ಟಿಯಿಂದ ದೇಶಕ್ಕೆ ಮಾದರಿಯಾಗುವಂತಹ ಪ್ರಮಾಣಿತ ಮಾನದಂಡ (ಎಸ್.ಓ.ಪಿ.) ರೂಪಿಸುವಂತೆ ಅರಣ್ಯ,…

2 hours ago

ಅಡುಗೆ ಅನಿಲ,‌ಪೆಟ್ರೋಲಿಯಂ ಉತ್ಪನ್ನಗಳ ಕೊರತೆಗೆ ಕೇಂದ್ರ ಕಾರಣ ; ಸಚಿವ ಪ್ರಿಯಾಂಕ್ ಖರ್ಗೆ

ಕಲಬುರಗಿ : ದೇಶದಲ್ಲಿ ಅಡುಗೆ ಅನಿಲ, ಪೆಟ್ರೊಲ್ ಡಿಸೇಲ್ ಕೊರತೆಗೆ ಕೇಂದ್ರ ಸರ್ಕಾರವೇ ಹೊಣೆ ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್…

2 hours ago

ಮೈಸೂರು-ಜೋಧ್‌ಪುರ ನಡುವೆ ವಿಶೇಷ ರೈಲು ಸೇವೆ ಆರಂಭ

ಮೈಸೂರು : ಮೈಸೂರು-ಜೋಧ್‌ಪುರ ನಡುವೆ ವಿಶೇಷ ಎಕ್ಸ್‌ಪ್ರೆಸ್ ರೈಲು ಸೇವೆ ಆರಂಭವಾಗಿರುವುದಕ್ಕೆ ಮೈಸೂರು ವಾಣಿಜ್ಯ ಮತ್ತು ಕೈಗಾರಿಕಾ ಸಂಸ್ಥೆ ಅಧ್ಯಕ್ಷ…

2 hours ago

ಓದುಗರ ಪತ್ರ | ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸ್ಮಾರಕ ನಿರ್ಮಾಣ ಸ್ವಾಗತಾರ್ಹ

೨೦೨೫ರ ಐಪಿಎಲ್ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ೧೮ ವರ್ಷಗಳ ನಂತರ ಐಪಿಎಲ್ ಇತಿಹಾಸದಲ್ಲೇ ಮೊದಲ ಬಾರಿಗೆ ಜಯಶೀಲರಾಗಿ…

3 hours ago

ಓದುಗರ ಪತ್ರ | ಆಟೋ ಚಾಲಕರಿಗೆ ಸರ್ಕಾರ ಪರಿಹಾರ ನೀಡಲಿ

ಇರಾನ್ ಮೇಲೆ ಅಮೆರಿಕ ಹಾಗೂ ಇಸ್ರೇಲ್ ಯುದ್ಧ ನಡೆಸುತ್ತಿರುವುದರಿಂದ ಕೊಲ್ಲಿ ರಾಷ್ಟ್ರಗಳಿಂದ ಹಾರ್ಮುಜ್ ಜಲಸಂಧಿಯ ಮೂಲಕ ಪೂರೈಕೆಯಾಗುತ್ತಿದ್ದ ಕಚ್ಚಾ ತೈಲ…

3 hours ago