ಮೈಸೂರು : ಜಿಲ್ಲೆಯಲ್ಲಿ ಭತ್ತ ಮತ್ತು ಜೋಳ ಖರೀದಿ ಕೇಂದ್ರವನ್ನು ತೆರೆಯಲು ಒತ್ತಾಯಿಸಿ ಕರ್ನಾಟಕ ರಾಜ್ಯ ರೈತ ಸಂಘದ ವತಿಯಿಂದ ನಗರದ ನಜರ್‌ಬಾದ್‌ನಲ್ಲಿರುವ ತಾಲ್ಲೂಕು ಕಚೇರಿ ಮುಂಭಾಗ ಪ್ರತಿಭಟನೆ ನಡೆಸಲಾಯಿತು.
ರೈತರು ಜಿಲ್ಲೆಯ ಎಲ್ಲಾ ತಾಲ್ಲೂಕುಗಳಲ್ಲೂ ಭತ್ತ ಬೆಳೆದಿದ್ದಾರೆ. ಕೆ.ಆರ್.ನಗರ ತಾಲ್ಲೂಕು ಭತ್ತದ ಕಣಜ ಎಂದೇ ಹೆಸರಾಗಿದ್ದು, ಈಗಾಗಲೇ ಕಟಾವು ಆರಂಭವಾಗಿದೆ. ಆದರೆ, ಇನ್ನೂ ಖರೀದಿ ಕೇಂದ್ರ ಆರಂಭವಾಗಿಲ್ಲ. ಇದರಿಂದ ರೈತರು ದಲ್ಲಾಳಿಗಳಿಗೆ ಭತ್ತ ಮಾರಿ ನಷ್ಟ ಅನುಭವಿಸುವಂತಾಗಿದೆ. ಹೀಗಾಗಿ ಕೂಡಲೇ ಖರೀದಿ ಕೇಂದ್ರ ಆರಂಭಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ಜಿಲ್ಲಾಧ್ಯಕ್ಷ ಹೊಸೂರು ಕುಮಾರ್, ಪ್ರಧಾನ ಕಾರ್ಯದರ್ಶಿ ಪಿ.ಮರಂಕಯ್ಯ, ವಿಭಾಗೀಯ ಸಂಘಟನಾ ಕಾರ್ಯದರ್ಶಿ ಹೊಸಕೋಟೆ ಬಸವರಾಜು, ತಾಲ್ಲೂಕು ಅಧ್ಯಕ್ಷ ಆನಂದೂರು ಪ್ರಭಾಕರ್, ಮಂಡಕಳ್ಳಿ ಮಹೇಶ್, ನಾಗನಹಳ್ಳಿ ಚಂದ್ರಶೇಖರ್ ಸೇರಿದಂತೆ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ಇದನ್ನೂ ಓದಿ:-ರೇಷ್ಮೆ ಕೃಷಿಯಿಂದ ಆರ್ಥಿಕವಾಗಿ ಅಭಿವೃದ್ಧಿ ಸಾಧ್ಯ : ವೈ.ಟಿ.ತಿಮ್ಮಯ್ಯ
ಪ್ರಮುಖ ಹಕ್ಕೊತ್ತಾಯಗಳು
* ಸರ್ಕಾರ ಎಲ್ಲಾ ತಾಲ್ಲೂಕುಗಳಲ್ಲಿ ಅಗತ್ಯವಿರುವ ಕಡೆಗಳಲ್ಲಿ ಖರೀದಿ ಕೇಂದ್ರಗಳನ್ನು ತೆರೆದು ಭತ್ತವನ್ನು ಕನಿಷ್ಠ ಬೆಂಬಲ ಬೆಲೆಯಲ್ಲಿ ಖರೀದಿಸಬೇಕು
* ರಾಜ್ಯದ ಪಡಿತರ ವ್ಯವಸ್ಥೆಗೆ ಬೇಕಾದ ಅಕ್ಕಿ ಪೂರೈಕೆಗೆ ಅಗತ್ಯವಿರುವ ಭತ್ತವನ್ನು ರೈತರಿಂದಲೇ ನೇರವಾಗಿ ಖರೀದಿ ಮಾಡಬೇಕು
* ಈ ಹಿಂದೆ ರೈಸ್ ಮಿಲ್‌ಗಳಿಗೂ ಕನಿಷ್ಠ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಗೆ ಅವಕಾಶವಿತ್ತು. ಅದನ್ನು ಮತ್ತೆ ಜಾರಿಗೆ ತರಬೇಕು
* ಜಿಲ್ಲೆಯಲ್ಲಿ ಮುಸುಕಿನ ಜೋಳ ಬೆಳೆದಿದ್ದು, ಬೆಲೆ ಕುಸಿತದಿಂದ ರೈತರು ಕಂಗಾಲಾಗಿದ್ದಾರೆ. ಹೀಗಾಗಿ ಕೂಡಲೇ ಜೋಳ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆಯಡಿ ಸರ್ಕಾರವೇ ಖರೀದಿಸಬೇಕು
* ಖರೀದಿ ಕೇಂದ್ರಗಳಲ್ಲಿ ಅವ್ಯವಹಾರ ನಡೆಯದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು.
ಹುಣಸೂರು: ಮೈಸೂರು ಜಿಲ್ಲೆಯ ಹುಣಸೂರು ತಾಲ್ಲೂಕಿನ ಗುರುಪುರದ ಬಳಿಯ ಜಮೀನೊಂದರಲ್ಲಿ ಓಡಾಡುತ್ತಿದ್ದ ಒಂದು ವರ್ಷದ ಹುಲಿ ಮರಿಯನ್ನು ಅರಣ್ಯಾಧಿಕಾರಿಗಳು ಸೆರೆ…
ಬೆಂಗಳೂರು: ನ್ಯಾಷನಲ್ ಹೆರಾಲ್ಡ್ ಹಾಗೂ ಯಂಗ್ ಇಂಡಿಯಾ ಸಂಸ್ಥೆಗಳಿಗೆ ದೇಣಿಗೆ ನೀಡಿದ್ದಕ್ಕೆ ಇಡಿ ಸಮನ್ಸ್ ನೀಡಿದೆ. ಆ ಮೂಲಕ ನಮಗೆ…
ಚಿಕ್ಕಮಗಳೂರು: ಜಿಲ್ಲೆಯ ಕಡೂರು ತಾಲ್ಲೂಕಿನ ಸಖರಾಯಪಟ್ಟಣದಲ್ಲಿ ಕಾಂಗ್ರೆಸ್ ಕಾರ್ಯಕರ್ತನ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವ ಕೆ.ಜೆ.ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ. ಕೊಲೆಯಾದ…
ಚಿಕ್ಕಮಗಳೂರು: ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದು ಕಾಂಗ್ರೆಸ್ ಕಾರ್ಯಕರ್ತ ಮೃತಪಟ್ಟ ಘಟನೆ ಕಡೂರು ತಾಲ್ಲೂಕಿನ ಸಖರಾಪಟ್ಟಣದ ಸಮೀಪದ ಕಲ್ಮುರುಡೇಶ್ವರ…
ಬೆಂಗಳೂರು: ಬಿಜೆಪಿ ಜೊತೆ ಸೇರಿಕೊಂಡ ಮೇಲೆ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಕೂಡ ಮನುವಾದಿ ಆಗಿಬಿಟ್ಟಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಕಿಡಿಕಾರಿದರು.…
ಬೆಂಗಳೂರು: ಅಂಬೇಡ್ಕರ್ ಅವರೊಬ್ಬ ಮಹಾನ್ ವ್ಯಕ್ತಿ ಹಾಗೂ ದೇಶ ಕಂಡ ಒಬ್ಬ ಅಪರೂಪದ ನಾಯಕ. ದಲಿತರಿಗೆ ಮಾತ್ರವಲ್ಲದೆ ಎಲ್ಲಾ ಶೋಷಿತರಿಗೆ…