ಮೈಸೂರು

ಪ್ರಜಾಪ್ರಭುತ್ವ ದಿನಾಚರಣೆ | ಇತಿಹಾಸ ನಿರ್ಮಾಣ ಮಾಡಿದ ಮಾನವ ಸರಪಳಿ ಕಾರ್ಯಕ್ರಮ

  • ಮಾನವ ಸರಪಳಿಯಲ್ಲಿ 60 ಸಾವಿರ ಜನರು ಭಾಗಿ
  • ಮಾನವ ಸರಪಳಿಗೆ ಗಜಪಡೆ ಸಾಥ್
  • ಪ್ರಜಾಪ್ರಭುತ್ವ ಗಟ್ಟಿಗೊಳಿಸಲು ಶಾಸಕ ತನ್ವೀರ್ ಸೇಠ್ ಕರೆ

ಮೈಸೂರು: ಪ್ರಭಾಪ್ರಭುತ್ವದ ಗಟ್ಟಿಗೊಳ್ಳಬೇಕಾದರೆ ಮಾನವೀಯತೆ ಹಾಗೂ ಸಹಾಯ ಮಾಡುವ ಮೌಲ್ಯಗಳನ್ನು ಪ್ರತಿಯೊಬ್ಬರೂ ಅಳವಡಿಸಿಕೊಳ್ಳಬೇಕು ಎಂದು ನರಸಿಂಹರಾಜ ವಿಧಾನಸಭಾ ಕ್ಷೇತ್ರದ ಶಾಸಕರಾದ ತನ್ವೀರ್ ಸೇಠ್ ಕರೆ ನೀಡಿದರು.

ನಗರದ ಅರಮನೆ ಉತ್ತರ ದ್ವಾರದ ಕೋಟೆ ಆಂಜನೇಯಸ್ವಾಮಿ ದೇವಸ್ಥಾನದ ಎದುರು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಸಮಾಜ ಕಲ್ಯಾಣ ಇಲಾಖೆ ಸಹಯೋಗದಲ್ಲಿ ಹಮ್ಮಿಕೊಂಡ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಬೃಹತ್ ಮಾನವ ಸರಪಳಿ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಜಾಗತಿಕ ಮಟ್ಟದಲ್ಲಿ ಗುರುತಿಸಿಕೊಂಡ ಭಾರತ ಇಂದು ಪ್ರಜಾಪ್ರಭುತ್ವದ ಅತೀ ದೊಡ್ಡ ದೇಶವಾಗಿದೆ. ರಾಜ್ಯದ ಬೀದರ್ ನಿಂದ ಹಿಡಿದು ಚಾಮರಾಜನಗರದ ವರೆಗೆ ಮಾನವ ಸರಪಳಿ ನಿರ್ಮಿಸಿ ಇತಿಹಾಸ ಸೃಷ್ಟಿಸುವುದಕ್ಕೆ ಸಾಕ್ಷಿ ಯಾಗಿದ್ದು ಇದರ ಉದ್ದೇಶ ಸಂವಿಧಾನವನ್ನು ಇನ್ನು ಗಟ್ಟಿಗೊಳಿಸುವುದು ಹಾಗೂ ಅರಿವು ಮೂಡಿಸುವುದಾಗಿದೆ ಎಂದರು.

‘ಡಾ.ಬಿ.ಆರ್. ಅಂಬೇಡ್ಕರ್ ದೇಶಕ್ಕೆ ಅತ್ಯುತ್ತಮ ಸಂವಿಧಾನವನ್ನು ನೀಡಿದ್ದಾರೆ. ಅದನ್ನು ನಾವೆಲ್ಲರೂ ನಮಗಾಗಿ ಅರ್ಪಿಸಿಕೊಂಡು ಶಾಸನವಾಗಿ ಒಪ್ಪಿಕೊಂಡಿದ್ದೇವೆ. ಕೈಹಿಡಿದು ನಿಲ್ಲುವುದರೊಂದಿಗೆ, ಪರಸ್ಪರ ಸಹಾಯ ಹಸ್ತ ಚಾಚುವುದನ್ನು ಎಲ್ಲರೂ ಮಾಡಬೇಕು ಎಂದು ಹೇಳಿದರು.

ಜಾತಿ ಯಾವುದೇ ಇರಬಹುದು. ಯಾವ ಮನುಷ್ಯನೂ ಅರ್ಜಿ ಹಾಕಿಕೊಂಡು ಹುಟ್ಟಿಲ್ಲ. ನಾವು ಸೃಷ್ಟಿಸಿರುವ ಜಾತಿಯಲ್ಲಿ ಮಾನವೀಯ ಮೌಲ್ಯಗಳಿಗೆ ಮಾನವ ಸಂಬಂಧಗಳಿಗೆ ಹೆಚ್ಚು ಆದ್ಯತೆ ನೀಡೋಣ ಎಂದು ಹೇಳಿದರು.

ವಿಧಾನಪರಿಷತ್‌ ಸದಸ್ಯ ಡಾ.ಡಿ. ತಿಮ್ಮಯ್ಯ ಮಾತನಾಡಿ, ‘ಸಾಮಾಜಿಕ, ಆರ್ಥಿಕ ಹಾಗೂ ಶೈಕ್ಷಣಿಕ ಸಮಾನತೆಯನ್ನು ಸಂವಿಧಾನ ನೀಡಿದೆ. ಎಲ್ಲರನ್ನೂ ಒಂದೆಂದು ಕಾಣಬೇಕು. ಎಲ್ಲರ ಹಿತವನ್ನೂ ಕಾಪಾಡಲು ನಾವೆಲ್ಲ ಮುಂದಾಗಬೇಕು’ ಎಂದರು.

ಕಾರ್ಯಕ್ರಮದಲ್ಲಿ ಸಂವಿಧಾನ ಪೀಠಿಕೆಯನ್ನು ಸಾಮೂಹಿಕವಾಗಿ ಓದಿಸಲಾಯಿತು. ಮಾನವ ಸರಪಳಿಯಲ್ಲಿ ಪಾಲ್ಗೊಂಡವರು ಕೈ ಕೈ ಹಿಡಿದುಕೊಂಡು ತಮ್ಮ ಎರಡು ಕೈಗಳನ್ನು ಮೇಲಕ್ಕೆ ಎತ್ತಿ ಹಿಡಿದು ಜೈಹಿಂದ್, ಜೈ ಕರ್ನಾಟಕ ಎಂಬ ಘೋಷಣೆಗಳನ್ನು ಕೂಗಲಾಯಿತು.

ಬೆಳಿಗ್ಗೆ ತಾಲೀಮು ಮುಗಿಸಿ ಅರಮನೆಗೆ ವಾಪಸಾಗುತ್ತಿದ್ದ ದಸರಾ ಮಹೋತ್ಸವದ 13 ಆನೆಗಳನ್ನು ಕೂಡ ಸಾಲಿನಲ್ಲಿ ನಿಲ್ಲಿಸಿದ್ದು ವಿಶೇಷವಾಗಿತ್ತು.

ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಹರೀಶ್‌ ಗೌಡ, ಡಿ.ರವಿಶಂಕರ್‌, ಮುಡಾ ಅಧ್ಯಕ್ಷ ಮರಿಗೌಡ, ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರವೀಂದ್ರ ಹೆಗಡೆ, ಸದಸ್ಯ ಕಾರ್ಯದರ್ಶಿ ಬಿ.ಜಿ. ದಿನೇಶ್, ಜಿಲ್ಲಾಧಿಕಾರಿ ಜಿ.ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯಿತಿ ಸಿಇಒ ಕೆ.ಎಂ. ಗಾಯಿತ್ರಿ, ನಗರ ಪೊಲೀಸ್ ಆಯುಕ್ತರಾದ ಸೀಮಾ ಲಾಟ್ಕರ್‌, ಪೊಲೀಸ್ ವರಿಷ್ಠಾಧಿಕಾರಿ ಎನ್. ವಿಷ್ಣುವರ್ಧನ್, ಹೆಚ್ಚುವರಿ ಜಿಲ್ಲಾಧಿಕಾರಿ ಡಾ. ಪಿ.ಶಿವರಾಜು, ಸಮಾಜ ಕಲ್ಯಾಣ ಇಲಾಖೆ ಜಂಟಿ ನಿರ್ದೇಶಕ ಬಿ.ರಂಗೇಗೌಡ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಎಂ.ಡಿ. ಸುದರ್ಶನ್‌ ಹಾಗೂ ವಿವಿಧ ಸಂಘ ಸಂಸ್ಥೆಗಳ ಮುಖಂಡರು ಪದಾಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಚಂದು ಸಿಎನ್

ಮೈಸೂರು ಜಿಲ್ಲೆಯ ಹುಣಸೂರಿನ ಚಲ್ಲಹಳ್ಳಿ ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪಡೆದು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ನಂತರ ಮೈಸೂರು ವಿಶ್ವವಿದ್ಯಾನಿಲಯದಲ್ಲಿ ಪ್ರಾಚೀನ ಇತಿಹಾಸ ಮತ್ತು ಪುರಾತತ್ವ ವಿಷಯದಲ್ಲಿ ಸ್ನಾತಕೋತ್ತರ ಪದವಿ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 2 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ಪ್ರಾಚೀನ ಪಳಿಯುಳಿಕೆ ಹಾಗೂ ಇತಿಹಾಸದ ಕಡೆ ಎಲ್ಲಿಲ್ಲದ ಒಲವು. ಪ್ರವಾಸ, ಪುಸ್ತಕ ಓದುವುದು ನೆಚ್ಚಿನ ಹವ್ಯಾಸಗಳಾಗಿವೆ. ಮೊಬೈಲ್‌ ಸಂಖ್ಯೆ: 9164535321.

Recent Posts

ಬಯಲುಸೀಮೆಗೆ ಭದ್ರಾ ಜೀವಜಲ : ನವೆಂಬರ್ ಅಂತ್ಯಕ್ಕೆ ಎಲ್ಲ ಕೆರೆಗಳಿಗೂ ನೀರು ; ಸಚಿವ ಚಲುವರಾಯಸ್ವಾಮಿ ಭರವಸೆ*

ಚಿತ್ರದುರ್ಗ : ದಶಕಗಳಿಂದ ಬರಗಾಲದ ಬೇಗೆಯಲ್ಲಿ ಬೆಂದ ಬಯಲುಸೀಮೆಗೆ ಭದ್ರಾ ಮೇಲ್ದಂಡೆ ಯೋಜನೆ ಹೊಸ ಭರವಸೆ ಮೂಡಿಸಿದೆ. ಅರಣ್ಯ ಇಲಾಖೆ…

4 hours ago

ಓದುಗರ ಪತ್ರ: ಕರುನಾಡ ಹೆಮ್ಮೆ…

ಭಾರತೀಯ ಚಿತ್ರರಂಗದ ಹಲವಾರು ಭಾಷೆಗಳಲ್ಲಿ ಸಹಜ ನಟನೆಯ ಪ್ರಸದ್ಧಿ ಪಡೆದು... ಮೇರುನಟರಾಗಿ ಕಲಾಸೇವೆಗಾಗಿ ತಮನ್ನು ತಾವು ಮುಡಿಪಿಟ್ಟು ಭಾರತೀಯ ಚಿತ್ರರಂಗದ…

12 hours ago

ಓದುಗರ ಪತ್ರ: ಪಾಲಿಕೆ ಯೋಜನೆ ಸ್ವಾಗತಾರ್ಹ

ಜನನ ಹಾಗೂ ಮರಣ ಪ್ರಮಾಣ ಪತ್ರ ಪಡೆಯಲು ಜನರು ಮೈಸೂರು ಮಹಾ ನಗರ ಪಾಲಿಕೆಗೆ ಅರ್ಜಿ ಸಲ್ಲಿಸಿ ಪದೇ ಪದೇ…

12 hours ago

ಓದುಗರ ಪತ್ರ: ಯುಪಿಐ ಶುಲ್ಕ: ಚರ್ಚೆಯ ನಂತರ ಕ್ರಮ ಕೈಗೊಳ್ಳಿ

ದೇಶದಾದ್ಯಂತ ಸಣ್ಣ ಪುಟ್ಟ ವ್ಯಾಪಾರಗಳಿಂದ ಹಿಡಿದು ದೇಶದ ಬಹುದೊಡ್ಡ ವ್ಯಾಪಾರ ವಹಿವಾಟಿನವರೆಗೆ ಯುಪಿಐ ಮೂಲಕವೇ ಹಣ ಪಾವತಿಸಲು ಕೇಂದ್ರ ಸರ್ಕಾರ…

12 hours ago

ಬದಲಾದ ಜಾಗತಿಕ ಆರ್ಥಿಕ ವ್ಯವಸ್ಥೆಯಲ್ಲಿ ಬ್ರಿಕ್ಸ್ ಪಾತ್ರ

ಡಾ. ಬಸವರಾಜ್ ಇಟ್ನಾಳ ಇತ್ತೀಚೆಗೆ ಬ್ರಿಕ್ಸ್ ಶೃಂಗ ಸಭೆ ದೆಹಲಿಯಲ್ಲಿ ನಡೆಯಿತು. ಬ್ರಿಕ್ಸ್ ದೇಶಗಳ ಪರಸ್ಪರ ಸಹಕಾರ ಮತ್ತು ಸ್ಥಳೀಯ…

12 hours ago

ಬಿಹಾರದಲ್ಲಿ ಯುಸಿಸಿಗೆ ನಿತೀಶ್, ಚಿರಾಗ್ ಪಕ್ಷಗಳ ಭಿನ್ನರಾಗ

ದೆಹಲಿ ಕಣ್ಣೋಟ: ಶಿವಾಜಿ ಗಣೇಶನ್‌  ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ನೇತೃತ್ವದಲ್ಲಿ ಕಳೆದ ಹನ್ನೊಂದು ವರ್ಷಗಳಿಂದ ಆಡಳಿತ ನಡೆಸುತ್ತಿರುವ ಬಿಜೆಪಿ…

12 hours ago