ಮೈಸೂರು

ಸಂಸದ ಪ್ರತಾಪ್‌ ಸಿಂಹ ವಿರುದ್ಧ ಅವಹೇಳನಕಾರಿ ಪೋಸ್ಟ್ : ಪೊಲೀಸ್ ಕಾನ್ಸ್‌ಟೇಬಲ್‌ ಸಸ್ಪೆಂಡ್‌

ಮೈಸೂರು : ಮೈಸೂರು-ಕೊಡಗು ಬಿಜೆಪಿ ಸಂಸದ ಪ್ರತಾಪ್‌ ಸಿಂಹ ಅವರ ಬಗ್ಗೆ ಸಾಮಾಜಿಕ ಜಾಲತಾಣ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ ಹಿನ್ನಲೆಯಲ್ಲಿ ಪೊಲೀಸ್ ಮುಖ್ಯ ಪೇದೆಯನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶ ಹೊರಡಿಸಿದ್ದಾರೆ.

ನಗರದ ವಿವಿ.ಪುರಂ ಟ್ರಾಫಿಕ್ ಪೊಲೀಸ್ ಠಾಣೆಯ ಮುಖ್ಯ ಪೇದೆ ಬಿ.ಪ್ರದೀಪ್ ಎಂಬುವರು ಅಮಾನತು ಆಗಿದ್ದಾರೆ. ಸಾಮಾಜಿಕ ಮಾಧ್ಯಮದಲ್ಲಿ ಸಂಸದ ಪ್ರತಾಪ್ ಸಿಂಹ ಹಾಗೂ ಶಾಸಕ ಪ್ರದೀಪ್ ಈಶ್ವರ್ ಅವರ ವಾಕ್ಸಮರದ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋಗೆ ಹೆಡ್ ಕಾನ್‌ಸ್ಟೇಬಲ್ ಪ್ರಕಾಶ್ ಕಾಮೆಂಟ್ ಮಾಡಿದ್ದರು. ಅದರಲ್ಲಿ ಸಂಸದರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದರು.

ಟ್ರಾಫಿಕ್ ಹೆಡ್ ಕಾನ್ಸ್​​ಟೇಬಲ್ ಬಿ.ಪ್ರದೀಪ್, ಬಿಜೆಪಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಫೇಸ್‌ಬುಕ್‌ನಲ್ಲಿ ಅವಹೇಳನಕಾರಿ ಪೋಸ್ಟ್ ಹಾಕಿದ್ದರು. ಇದನ್ನು ಗಮನಿಸಿದ ಸಂಸದ ಪ್ರತಾಪ ಸಿಂಹ ಹಾಕಲಾಗಿದ್ದ ಕಮೆಂಟ್ ಸ್ಕ್ರೀನ್​ಶಾಟ್ ಜೊತೆ ಪೊಲೀಸ್ ಕಮಿಷನರ್​​ಗೆ ದೂರು ನೀಡಿದ್ದರು. ಇಲಾಖಾ ವಿಚಾರಣೆ ಬಾಕಿ ಇರಿಸಿ ಮುಖ್ಯ ಪೇದೆ ಬಿ.ಪ್ರದೀಪ್ ಅವರನ್ನ ಅಮಾನತು ಮಾಡಿ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಆದೇಶಿಸಿದ್ದಾರೆ.

lokesh

Recent Posts

ಓದುಗರ ಪತ್ರ: ‘ಪ್ರತಾಪ’ಕ್ಕೆ ಸವಾಲು ಈ ನೀಲಿ

‘ಪ್ರತಾಪ’ಕ್ಕೆ ಸವಾಲು ಈ ನೀಲಿ ಇದು ನಮ್ಮ ಸೂರು ಆಕಾಶದ ನೀಲಿ ಇದು ನನ್ನವ್ವ ಸುತ್ತಿಕೊಂಡ ಸೀರೆಯ ನೀಲಿ ನನಗೆ…

46 mins ago

ಓದುಗರ ಪತ್ರ: ಟೆಲಿಕಾಂ ಕಂಪೆನಿಗಳ ಹಗಲು ದರೋಡೆ ನಿಯಂತ್ರಿಸಿ

ಪ್ರಸ್ತುತ ಆಂಡ್ರಾಯ್ಡ ಮೊಬೈಲ್‌ನಿಂದಲೇ ದಿನನಿತ್ಯದ ಕೆಲಸಗಳು ಆರಂಭವಾಗಿ ಅವುಗಳಿಂದಲೇ ದಿನ ಮುಕ್ತಾಯ ಅನ್ನುವಷ್ಟರ ಮಟ್ಟಿಗೆ ಅನಿವಾರ್ಯತೆ ನಿರ್ಮಾಣವಾಗಿದೆ. ಮೊಬೈಲ್ ಇಲ್ಲದೆ…

48 mins ago

ಓದುಗರ ಪತ್ರ: ಸರ್ಕಾರಿ ಕಚೇರಿಗಳ ಅನಗತ್ಯ ಬಾಡಿಗೆ ವೆಚ್ಚಗಳನ್ನು ತಪ್ಪಿಸಿ

ಹೆಚ್. ಡಿ. ಕೋಟೆ ತಾಲ್ಲೂಕು ಕೇಂದ್ರ ಸ್ಥಳದಲ್ಲಿ ಕೆಲವು ಸರ್ಕಾರಿ ಇಲಾಖೆಗಳು ಹಾಗೂ ಹಾಸ್ಟೆಲ್‌ಗಳು ಖಾಸಗಿ ಕಟ್ಟಡಗಳಲ್ಲಿ ಕಾರ್ಯನಿರ್ವಣೆ ಮಾಡುತ್ತಿವೆ.…

50 mins ago

ರಂಗದ ಮೇಲೆ ಜಿನುಗಿದ ಜೀವಸೆಲೆ

ಜಿ.ಪಿ.ಬಸವರಾಜು ಯಾಂತ್ರಿಕ ಬದುಕಿನ ಹಲವು ಪ್ರಶ್ನೆಗಳಿಗೆ ಉತ್ತರಗಳನ್ನು ತೋರಿಸುವ ನಾಟಕ ‘ಅಮೃತಬಳ್ಳಿ ಕಷಾಯ’ ಮಾಯಾ ನಗರಿಯಂತೆ ಕಾಣುವ ಮುಂಬೈ ನಗರ…

53 mins ago

ಸಮವಸ್ತ್ರದ ಆತ್ಮಸಾಕ್ಷಿ ಮತ್ತು ಮೂರು ಪ್ರಜ್ಞೆಗಳು

ಎಸ್.ಎಲ್.ಚನ್ನಬಸವಣ್ಣ , ಉಪನಿರ್ದೇಶಕರು ಕರ್ನಾಟಕ ಪೊಲೀಸ್‌ ಅಕಾಡೆಮಿ ಮೈಸೂರು  ಸದಾ ಜಾಗೃತವಾಗಿರುವ ಸಮಯಪಾಲನೆಯ ವಿವೇಚನೆ ಕರ್ನಾಟಕ ಪೊಲೀಸ್ ಅಕಾಡೆಮಿ, ಮೈಸೂರು…

58 mins ago

ದಸರಾ ಕಾರ್ಯಕ್ರಮಕ್ಕೆ ಸವಾಲಾದ ಬಸ್ ಸೇವೆ

ಕೆ.ಬಿ.ರಮೇಶನಾಯಕ ಉತ್ತನಹಳ್ಳಿ ಗ್ರಾಮದ ಬಳಿ ಯುವ ದಸರಾ, ಸಾತಗಳ್ಳಿ ವಿಟಿಯು ಸಮೀಪ ಕಂಬಳ ಕ್ರೀಡೆ ಆಯೋಜನೆ; ವೀಕ್ಷಕರ ಬೇಡಿಕೆಗೆ ತಕ್ಕಂತೆ…

1 hour ago