ಮೈಸೂರು

ನಂಜನಗೂಡಿನಲ್ಲಿ 46 ಮರಗಳ ಹನನ: ಯಶಸ್ವಿಯಾಗಿ ನಡೆದ ಪ್ರತಿಭಟನೆ

ನಂಜನಗೂಡು: ದಿನಾಂಕ 7-3-26 ರಂದು ನಂಜನಗೂಡಿನ ಹೆಜ್ಜಿಗೆ ಗ್ರಾಮದ ಬಳಿ ಕಪಿಲಾ ನದಿ ದಂಡೆಯ ಮೇಲೆ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವ ಘಟನೆ ವಿರುದ್ಧ, ವಿವಿಧ ಸಂಘಟನೆಗಳಿಂದ, ಇಂದು ಅರಣ್ಯ ಭವನದ ಮುಂದೆ ನಡೆದ ಪ್ರತಿಭಟನೆ ಯಶಸ್ವಿಯಾಗಿ ನಡೆಯಿತು.

ಈ ಸಂದರ್ಭದಲ್ಲಿ ಮಾತನಾಡಿದ ‘ಪರಿಸರಕ್ಕಾಗಿ ನಾವು’ ಸಂಘಟನೆಯ ಪ್ರಧಾನ ಕಾರ್ಯದರ್ಶಿ ಪರಶುರಾಮೇಗೌಡ, ಘಟನೆ ನಡೆದು ಎರಡು ವಾರಗಳಾದರೂ ತನಿಖೆಯಲ್ಲಿ ಯಾವುದೇ ಪ್ರಗತಿ ಆಗಿಲ್ಲ. ತಲೆಮರೆಸಿಕೊಂಡಿರುವ ಆರೋಪಿಯನ್ನು ಬಂಧಿಸಿಲ್ಲ. ಮರಗಳನ್ನು ಅಕ್ರಮವಾಗಿ ಕಡಿಯಲು ಕಾರಣರಾದವರನ್ನು ಇನ್ನೂ ಪತ್ತೆ ಹಚ್ಚಿಲ್ಲ. ಇಷ್ಟು ಗಂಭೀರವಾದ ಘಟನೆಯನ್ನು ಅರಣ್ಯ ಇಲಾಖೆ ಮತ್ತು ಜಿಲ್ಲಾಡಳಿತ ಹಗುರವಾಗಿ ತೆಗೆದುಕೊಂಡಿದೆ.

ಹಾಡುಹಗಲೇ ರಾಜಾರೋಷವಾಗಿ ಸರ್ಕಾರಿ ಜಾಗದಲ್ಲಿ 46 ಬೃಹತ್ ಮರಗಳನ್ನು ಅಕ್ರಮವಾಗಿ ಕಡಿದಿರುವುದು ಅರಣ್ಯ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನಿಷ್ಕ್ರಿಯತೆನ್ನು ತೋರಿಸುತ್ತದೆ. ಈ ಘಟನೆ ಬಗ್ಗೆ ವಿಶೇಷ ತನಿಖಾ ತಂಡದಿಂದ ತನಿಖೆ ಮಾಡಿಸಿ ಮರಗಳನ್ನು ಕಡಿದರವರಿಗೆ, ಕಡಿಯಲು ಕಾರಣರಾದವರಿಗೆ ಮತ್ತು ಇವರ ಜೊತೆಗೆ ಶಾಮೀಲಾಗಿರುವವರಿಗೆ ಕಠಿಣ ಶಿಕ್ಷೆ ವಿಧಿಸಲು ತಕ್ಷಣ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಈ ಘಟನೆ ನಡೆದಿರುವುದು ಮುಖ್ಯ ಮಂತ್ರಿಗಳ ತವರು ಜಿಲ್ಲೆಯಲ್ಲಿ ಅಷ್ಟೇ ಅಲ್ಲ. ಅವರೇ ಪ್ರತಿನಿಧಿಸುವ ವರುಣಾ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ . ಮಾನ್ಯ ಮುಖ್ಯ ಮಂತ್ರಿಗಳೇ ಖುದ್ದು ಆಸಕ್ತಿ ವಹಿಸಿ ಈ ಅಕ್ರಮ ಘಟನೆಗೆ ಕಾರಣರಾದವರಿಗೆ ಕಠಿಣ ಶಿಕ್ಷೆ ಆಗುವಂತೆ ಕ್ರಮಗಳನ್ನು ವಹಿಸುವ ಮೂಲಕ ಇಂತಹ ಘಟನೆಗಳನ್ನು ಸರ್ಕಾರ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನು ನೀಡಬೇಕು ಎಂದು ಹೇಳಿದರು.

ಕೆಂಡಗಣ್ಣಸ್ವಾಮಿ

ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಹಂಚೀಪುರ ಗ್ರಾಮದವನಾದ ನಾನು ಮೈಸೂರಿನ ಮಹಾರಾಜ ಕಾಲೇಜಿನಲ್ಲಿ ಪದವಿ ಪಡೆದಿದ್ದೇನೆ. ಪದವಿ ನಂತರದಲ್ಲಿ ಪತ್ರಿಕೋದ್ಯಮ ಕ್ಷೇತ್ರದಲ್ಲಿ 5 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಸದ್ಯ ಮೈಸೂರಿನ ಪ್ರತಿಷ್ಠಿತ ಆಂದೋಲನ ಪತ್ರಿಕೆಯ ಡಿಜಿಟಲ್‌ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ನಾನು ನೈಸರ್ಗಿಕ ಕೃಷಿ ಹಾಗೂ ಪಶು ಸಂಗೋಪನೆಗೆ ಹೆಚ್ಚು ಒತ್ತು ಕೊಡುತ್ತೇನೆ.‌ ಪರಿಸರ ಸಂರಕ್ಷಣೆ ಜೊತೆ ಜೊತೆಗೆ ಪ್ರಾಣಿ ಪಕ್ಷಿಗಳ ಉಳಿವಿಗಾಗಿ ನಾನು ಶ್ರಮ ವಹಿಸುತ್ತಿದ್ದೇನೆ.‌ ನನ್ನ ಮೊಬೈಲ್‌ ಸಂಖ್ಯೆ: 9964859626, 9606570286

Recent Posts

ಎಚ್ಚರಿಕೆ ನೀಡಿದ್ದಕ್ಕೆ ಟ್ರಂಪ್‌ ಕದನ ವಿರಾಮ ಘೋಷಣೆ: ಇರಾನ್‌ ಖಡಕ್‌ ತಿರುಗೇಟು

ಟೆಹರಾನ್: ನಾವು ನೀಡಿದ ಎಚ್ಚರಿಕೆಗೆ ತಲೆಬಾಗಿ ಅಮೇರಿಕಾ ಈಗ ಕದನ ವಿರಾಮ ಘೋಷಣೆ ಮಾಡಿದ ಎಂದು ಇರಾನ್‌ ತಿರುಗೇಟು ನೀಡಿದೆ.…

12 mins ago

ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕ ಸಾವು

ಮಂಡ್ಯ: ಕೃಷಿ ಹೊಂಡದಲ್ಲಿ ಈಜಲು ಹೋಗಿ ಬಾಲಕನೊಬ್ಬ ಸಾವನ್ನಪ್ಪಿರುವ ಘಟನೆ ಮಂಡ್ಯ ಜಿಲ್ಲೆ ಮಳವಳ್ಳಿ ತಾಲ್ಲೂಕಿನ ನಂದೀಪುರ ಗ್ರಾಮದಲ್ಲಿ ನಡೆದಿದೆ.…

18 mins ago

ಕೆಪಿಎಸ್‌ಸಿ ಬದಲಿಗೆ ಕೆಇಎ ಮೂಲಕ ಸಹಾಯಕ ಕೃಷಿ ಅಧಿಕಾರಿಗಳ ಹುದ್ದೆಗೆ ನೇಮಕಾತಿ: ಸಚಿವ ಚಲುವರಾಯಸ್ವಾಮಿ

ಬೆಂಗಳೂರು: ಕಳೆದ ವರ್ಷ ಕೃಷಿ ಇಲಾಖೆಯ ಸಮಾರು 945 ಕೃಷಿ ಅಧಿಕಾರಿ ಹಾಗೂ ಸಹಾಯಕ ಕೃಷಿ ಅಧಿಕಾರಿ ಹುದ್ದೆಗಳ ನೇಮಕಾತಿಯನ್ನು…

33 mins ago

ಗುಂಡ್ಲುಪೇಟೆ: ಬೇರಂಬಾಡಿ ಬಳಿ ಅರಣ್ಯ ಇಲಾಖೆಯಿಂದ ಹುಲಿ ಸೆರೆ

ಮಹೇಂದ್ರ ಹಸಗೂಲಿ: ಗುಂಡ್ಲುಪೇಟೆ ತಾಲ್ಲೂಕು ವರದಿಗಾರರು  ಗುಂಡ್ಲುಪೇಟೆ: ತಾಲ್ಲೂಕಿನ ಬೇರಂಬಾಡಿ ಗ್ರಾಮದ ಜಮೀನೊಂದರಲ್ಲಿ ಉಪಟಳ ನೀಡುತಿದ್ದ ಹುಲಿಯನ್ನು ಅರಣ್ಯ ಇಲಾಖೆ…

47 mins ago

ಮಂಡ್ಯ: ಯುವಕನ ಮೇಲೆ ಮಾರಣಾಂತಿಕ ಹಲ್ಲೆ: ಗ್ರಾಮಸ್ಥರಿಂದ ದೂರು

ಮಂಡ್ಯ: ಯುಗಾದಿ ಹಬ್ಬದ ದಿನ ಪಚ್ಚಿ ಆಟವಾಡುತ್ತಿದ್ದ ನೂರಾರು ಮಂದಿ ಮೇಲೆ ದಾಳಿ ನಡೆಸಿದ್ದೂ ಅಲ್ಲದೆ ಯುವಕನ ಮೇಲೆ ಮಾರಣಾಂತಿಕ…

59 mins ago

ಇರಾನ್‌ ಯುದ್ಧ: 5 ದಿನಗಳ ಕದನ ವಿರಾಮ ಘೋಷಣೆ ಮಾಡಿದ ಟ್ರಂಪ್‌

ವಾಷಿಂಗ್ಟನ್:‌ ಅಮೇರಿಕಾ ಅಧ್ಯಕ್ಷ ಡೊನಾಲ್ಡ್‌ ಟ್ರಂಪ್‌ ಐದು ದಿನಗಳ ಕಾಲ ಕದನ ವಿರಾಮ ಘೋಷಣೆ ಮಾಡಿದ್ದಾರೆ. ಅಮೇರಿಕಾ ಅಧ್ಯಕ್ಷ ಟ್ರಂಪ್‌…

1 hour ago