ಮೈಸೂರು : ಜಿಲ್ಲೆಯಲ್ಲಿ ಕಾಡು ಪ್ರಾಣಿ ಮತ್ತು ಮಾನವ ಸಂಘರ್ಷ ಮುಂದುವರೆದಿದ್ದು, ಕಾಡಾನೆಗಳ ದಾಳಿಯಿಂದ ಅಪಾರ ಪ್ರಮಾಣದ ಬೆಳೆ ನಾಶವಾಗಿರುವ ಘಟನೆ ಹೆಚ್ಡಿ ಕೋಟೆ ತಾಲ್ಲೂಕಿನ ನಾಗರಹೊಳೆ ಅಭಯಾರಣ್ಯದ ವೀರನ ಹೊಸಹಳ್ಳಿ ವಲಯದ ಸಿದ್ದಾಪುರ ಗ್ರಾಮದಲ್ಲಿ ನಡೆದಿದೆ. ಕಾಡಾನೆಗಳ ಹಿಂಡು ದಾಳಿ ಮಾಡಿದ್ದರಿಂದ ಸುರೇಶ್ ಎಂಬುವವರ ಎರಡು ಎಕರೆ ಬಾಳೆ, ರೈತ ಸಿದ್ದನಾಯಕ ಎಂಬುವವರ ಒಂದು ಎಕರೆ ಕಬ್ಬು ನಾಶವಾಗಿದೆ. ಸ್ಥಳಕ್ಕೆ ಬಾರದ ಅರಣ್ಯ ಸಿಬ್ಬಂದಿ ವಿರುದ್ಧ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ,
ಕಾಡು ಪ್ರಾಣಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಹುಲಿ ಹಾಗೂ ಆನೆಯ ದಾಳಿಗೆ ಜನ ಜಾನುವಾರು ಸಾವನ್ನಪ್ಪಿತ್ತಿವೆ. ಜೊತೆಗೆ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿ ಉಂಟಾಗಿದೆ. ಅರಣ್ಯ ಇಲಾಖೆ ಸೂಕ್ತ ಕಾವಲುಗಾರರನ್ನು ನೇಮಿಸುತ್ತಿಲ್ಲ. ಕಾವಲುಗಾರರು ಇರದ ಕಾರಣ ಈ ರೀತಿಯಾಗುತ್ತಿದೆ. ಸುಮಾರು 3 ಲಕ್ಷ ರೂ ಖರ್ಚು ಮಾಡಿ ಬೆಳೆ ಬೆಳೆದಿದ್ದು, ಆನೆಗಳ ದಾಳಿಯಿಂದ ಸಂಪೂರ್ಣ ಹಾನಿ ಆಗಿದೆ.
ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಅರಣ್ಯ ಇಲಾಖೆ ಸೂಕ್ತ ಪರಿಹಾರ ನೀಡಬೇಕು. ಕಾಡು ಪ್ರಾಣಿಗಳ ಉಪಟಳವನ್ನು ಶಾಶ್ವತವಾಗಿ ತಪ್ಪಿಸಬೇಕು ಎಂದು ರೈತರು ಮತ್ತು ಗ್ರಾಮಸ್ಥರು ಆಗ್ರಹಿಸಿದ್ದಾರೆ.
ಚಾಮರಾಜನಗರ: ಚಳಿ ಇನ್ನೂ ದೂರ ಸರಿದಿಲ್ಲ. ಆದರೂ ಬಿಸಿಲು ಬೆವರು ಹರಿಯುವ ಮಟ್ಟಿಗೆ ಸುಡುತ್ತಿದೆ. ನೆಲ ದಿನೇ ದಿನೇ ಕಾದ…
ಮಾಗನೂರು ಶಿವಕುಮಾರ್ ಇಂದು,ನಾಳೆ ಗ್ರಾಮ ದೇವತೆಗಳ ಜಾತ್ರಾ ಮಹೋತ್ಸವ ಮಳವಳ್ಳಿ: ಶಾಂತಿ-ಸೌಹಾರ್ದತೆಯ ಸಂದೇಶ ಸಾರುವ ಪಟ್ಟಣದ ಗ್ರಾಮ ದೇವತೆಗಳಾದ ದಂಡಿನ…
ಪ್ರವಾಸಿಗರ ಅಸಮಾಧಾನ; ವಿಡಿಯೋ ವೈರಲ್ ಮಡಿಕೇರಿ: ಕೊಡಗು ಜಿಲ್ಲೆಯ ಪ್ರಸಿದ್ಧ ಪ್ರವಾಸಿ ತಾಣ ಮಾಂದಲ್‌ಪಟ್ಟಿ ಜೀಪ್ ಸಫಾರಿಗೆ ಪ್ರವಾಸಿಗರಿಂದ ದುಪ್ಪಟ್ಟು…
ಕೆ.ಬಿ.ರಮೇಶನಾಯಕ ಮೊದಲ ಹಂತದಲ್ಲಿ ಮೈಸೂರಿನ ಪ್ರಮುಖ ಮೂರು ರಸ್ತೆಗಳ ಗುರುತು ಮೈಸೂರು: ದೇಶದ ಪ್ರಮುಖ ಸ್ಮಾರ್ಟ್ ಸಿಟಿಗಳಲ್ಲಿ ನಿರ್ಮಾಣಗೊಂಡಿರುವ ವಿಶ್ವದರ್ಜೆಯ…
ಗುಂಡ್ಲುಪೇಟೆ : ತಾಲ್ಲೂಕಿನ ಬರಗಿ ಗ್ರಾಮದ ಜಮೀನುಗಳಲ್ಲಿ ಜಾನುವಾರುಗಳ ಮೇಲೆ ದಾಳಿ ನಡೆಸಿ ಕೊಂದುಹಾಕಿದ್ದ ವಿಚಾರವಾಗಿ ಅರಣ್ಯ ಇಲಾಖೆ ಚಿರತೆ…
ಮೈಸೂರು : ಬುಧವಾರವಷ್ಟೇ ಹೆಬ್ಬಾಳ್‌ನಲ್ಲಿ ಶೆಡ್‌ವೊಂದರ ಮೇಲೆ ದಾಳಿ ನಡೆಸಿದ್ದ ಎನ್‌ಸಿಬಿ ಪೊಲೀಸರು, ಮಾದಕ ವಸ್ತು ಮಾರಾಟ ಆರೋಪ ಪ್ರಕರಣದಲ್ಲಿ…