ಮೈಸೂರು : ರಾಜ್ಯದಲ್ಲಿ ಯಾವುದೇ ಸಂದರ್ಭದಲ್ಲಿ ಚುನಾವಣೆ ನಡೆದರೂ ಬಿಜೆಪಿ ೧೩೦ ಸ್ಥಾನಗಳನ್ನು ಗೆದ್ದು ಅಧಿಕಾರಕ್ಕೆ ತರುವ ಸಂಕಲ್ಪ ಮಾಡಿದ್ದೇನೆ. ಹಳೆಯ ಮೈಸೂರು ಭಾಗದಲ್ಲಿ ನಿರೀಕ್ಷಿತ ಸ್ಥಾನಗಳನ್ನು ಗೆಲ್ಲಲು ಸವಾಲಾಗಿ ಸ್ವೀಕರಿಸಿದ್ದೇನೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಘೋಷಿಸಿದರು.
ನಗರದ ರಾಮಾನುಜ ರಸ್ತೆಯಲ್ಲಿನ ರಾಜೇಂದ್ರ ಕಲಾಮಂದಿರದಲ್ಲಿ ನಗರ ಮತ್ತು ಗ್ರಾಮಾಂತರ ಬಿಜೆಪಿ ವತಿಯಿಂದ ಆಯೋಜಿಸಿದ್ದ ವಿಕಸಿತ ಭಾರತದ ಅಮೃತಕಾಲ ಸೇವೆ, ಬಡವರ ಕಲ್ಯಾಣದ ಮೋದಿ ಸರ್ಕಾರಕ್ಕೆ ೧೧ ವರ್ಷ ಸರ್ವರಿಗೂ ಸಮಪಾಲು ಸರ್ವರಿಗೂ ಸಮಬಾಳು ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿದರು.
ಕೇಂದ್ರದಲ್ಲಿ ನರೇಂದ್ರಮೋದಿ ನೇತೃತ್ವದ ಸರ್ಕಾರದೊಂದಿಗೆ ಕೈ ಜೋಡಿಸಿ ಕೆಲಸ ಮಾಡಲು ಬಿಜೆಪಿ ಅಽಕಾರಕ್ಕೆ ತರಬೇಕಿದೆ. ಮುಂದಿನ ದಿನಗಳಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ತನಕವೂ ನಾನು ವಿರಮಿಸುವುದಿಲ್ಲ. ಎರಡು ವರ್ಷಗಳಿಂದ ಕಾಂಗ್ರೆಸ್ ನಾಯಕರ ದರ್ಪ, ಸೊಕ್ಕು ಸಹಿಸಿಕೊಂಡು ಬಂದಿದ್ದೇವೆ. ಇವರ ಅಹಂಕಾರದ ವರ್ತನೆ ದೂರಾಗುವ ದಿನಗಳು ಬರುತ್ತವೆ. ಜಿಪಂ, ತಾಪಂ ಚುನಾವಣೆಯಲ್ಲಿ ಪಕ್ಷವನ್ನು ಗೆಲ್ಲಿಸಿ ಕಾರ್ಯಕರ್ತರಿಗೆ ಶಕ್ತಿ ತುಂಬುವ ಕೆಲಸ ಮಾಡುತ್ತೇನೆ ಎಂದು ಹೇಳಿದರು.
ಸಿದ್ದರಾಮಯ್ಯ ಲಾಟರಿ ಮುಖ್ಯಮಂತ್ರಿ ಎಂದು ಅವರ ಪಕ್ಷದ ಹಿರಿಯ ಶಾಸಕ ಬಿ.ಆರ್.ಪಾಟೀಲರೇ ಹೇಳಿದ್ದಾರೆ. ರಾಜ್ಯ ಕಾಂಗ್ರೆಸ್ ಉಸ್ತುವಾರಿಗಳು ಮುಂದೆ ಯಾರನ್ನು ಮುಖ್ಯಮಂತ್ರಿ ಮಾಡಬೇಕೆಂದು ಸಲಹೆ ಪಡೆದುಕೊಂಡು ಹೋಗಿದ್ದಾರೆ. ಬಿಜೆಪಿ ಆಡಳಿತ ಮತ್ತು ತಮ್ಮ ಕಾಂಗ್ರೆಸ್ ಸರ್ಕಾರದ ಅವಽಯಲ್ಲಿ ಮೈಸೂರು,ಚಾಮರಾಜನಗರ ಜಿಲ್ಲೆಗಳಿಗೆ ನೀಡಿರುವ ಕೊಡುಗೆಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಬಹಿರಂಗ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.