ಮೈಸೂರು: ವಿದ್ಯಾರ್ಥಿಗಳು ತಮ್ಮ ಶೈಕ್ಷಣಿಕ ಜೀವನದಲ್ಲಿ ಶಿಕ್ಷಣದ ಜೊತೆಗೆ ಕ್ರೀಡೆಯಲ್ಲೂ ಆಸಕ್ತಿ ಬೆಳೆಸಿಕೊಳ್ಳಬೇಕು ಎಂದು ಆಂಗ್ಲ ಭಾಷಾ ಪ್ರಾಧ್ಯಾಪಕರಾದ ಅಕ್ಷತಾ ಗಣೇಶ್ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು.
ನಗರದ ಸರಸ್ವತಿಪುರಂ ಜೆಎಸ್‌ಎಸ್ ಮಹಿಳಾ ಕಾಲೇಜಿನ ವತಿಯಿಂದ ಸೋಮವಾರ(ಮೇ.20) ಆಯೋಜಿಸಿದ್ದ ಸಾಂಸ್ಕೃತಿಕ, ಸಾಹಿತ್ಯಕ ಮತ್ತು ಕ್ರೀಡಾ ವೇದಿಕೆಗಳ ಸಮಾರೋಪ ಸವಾರಂಭವನ್ನು ಉದ್ಘಾಟಿಸಿ ಮಾತನಾಡಿದ ಅವರು, ಜೆಎಸ್‌ಎಸ್ ಸಂಸ್ಥೆಯಲ್ಲಿರುವ ಪ್ರತಿಯೊಬ್ಬರು ಪ್ರತಿಭೆ ಹೊಂದಿರುವವರೇ, ಇದಕ್ಕೆ ನಮ್ಮ ಗುರುಗಳು ಕಾರಣ, ಪ್ರತಿಯಾಗಿ ನೀವು ಗುರುಗಳಿಗೆ ಕೃತಜ್ಞರಾಗಿರಿ. ಜೆಎಸ್ಎಸ್ ಸಂಸ್ಥೆಯಿಂದ ನಗರದ ಜೊತೆ ಗ್ರಾಮೀಣ ಭಾಗದ ಹೆಣ್ಣು ಮಕ್ಕಳು ವಿದ್ಯಾವಂತರಾಗುತ್ತಿದ್ದಾರೆ. ಉತ್ತಮ ಬೋದಕರು, ಗುಣ ಮಟ್ಟದ ಶಿಕ್ಷಣ ಸಿಗುತ್ತಿದೆ ಎಂದರು.
ಪ್ರತಿಯೊಂದರಲ್ಲೂ ಸ್ಪರ್ದೆ ಇದ್ದರಷ್ಟೆ ನಮಗೆ ಶೈಕ್ಷಣಿಕ ಜೊತೆಗೆ ಕ್ರೀಡೆಗಳಲ್ಲೂ ಹೆಚ್ಚಿನ ಆಸಕ್ತಿ ಬರುತ್ತದೆ. ಸಮಾಜಕೊಸ್ಕರ ಅಥವಾ ಇನ್ನೊಬ್ಬರನ್ನು ಓಲೈಸುವುದಕ್ಕೆ ಓದಬೇಡಿ ನಿಮಗೊಸ್ಕರ ಶಿಕ್ಷಣವನ್ನು ಮಾಡಿ, ಅಲ್ಲದೇ ನಿಮಗೆ ಕೂತಹಲ ಇರುವ ವಿಷಯದ ಬಗ್ಗೆ ಹೆಚ್ಚಿನ ಆಸಕ್ತಿ ತೋರಿ ಸಾಧನೆ ಮಾಡಬೇಕು. ವಿದ್ಯಾರ್ಥಿಗಳು ಫಲಿತಾಂಶದ ವಿಚಾರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಸಾಕಷ್ಟು ನೋಡಿದ್ದೇವೆ. ಆದರೆ ಅಂತಹ ಸನ್ನಿವೇಶಗಳನ್ನು ಎದುರಿಸಿದರೆ ಮುಂದೆ ನಾವು ಸಾಧಾನೆಯತ್ತ ಸಾಗಬಹುದು ಎಂದು ಕಿವಿಮಾತು ಹೇಳಿದರು.
ಕಾರ್ಯಕ್ರಮದಲ್ಲಿ ಕೆನರಾ ಬ್ಯಾಂಕ್ ಸಹಾಯಕ ವ್ಯವಸ್ಥಾಪಕ ಸುದರ್ಶನ್, ಜೆಎಸ್‌ಎಸ್ ಮಹಾವಿದ್ಯಾಪೀಠದ ಕಾಲೇಜಿನ ಶಿಕ್ಷಣ ವಿಭಾಗದ ಸಹಾಯಕ ನಿರ್ದೇಶಕ ಬಿ.ನಿರಂಜನಮೂರ್ತಿ, ಡೀನ್ ರೇಚಣ್ಣ, ಪ್ರಾಂಶುಪಾಲರಾದ ಪೂರ್ಣಿಮಾ, ಸಾಂಸ್ಕೃತಿಕ ವಿಭಾಗದ ಸಂಚಾಲಕರಾದ ಉಷಾರಾಣಿ ಹಾಗೂ ಶಿಕ್ಷಕ ವೃಂದ ಹಾಗೂ ವಿದ್ಯಾರ್ಥಿಗಳು ಇದ್ದರು.
‘ಸ್ಯಾಂಡಲ್ ವುಡ್’ ಎಂದೇ ಹೆಸರಾಗಿರುವ ಕನ್ನಡ ಚಿತ್ರರಂಗ ಇಂದು ಭಾರತದ ಒಂದು ಪ್ರಮುಖ ಚಿತ್ರೋದ್ಯಮವಾಗಿ ಬೆಳೆದಿದೆ. ಈ ಮೊದಲು ಪ್ರತಿ…
ಲಕ್ಷ್ಮಿಕಾಂತ್ ಕೊಮಾರಪ್ಪ ೨೦೨೩ರ ಡಿ.೪ರಂದು ಕಾಡಾನೆ ಕಾರ್ಯಾಚರಣೆ ವೇಳೆ ಮೃತಪಟ್ಟಿದ್ದ ಅರ್ಜುನ; ೨ ವರ್ಷ ಕಳೆದರೂ ಅರ್ಜುನನ ಸ್ಮಾರಕ, ಪ್ರತಿಮೆಗಿಲ್ಲ…
ಮೈಸೂರು: ಸಂಭ್ರಮ, ಸಡಗರ, ವಿಶೇಷ ಪ್ರಾರ್ಥನೆಯೊಂದಿಗೆ ಕ್ರೈಸ್ತ ಧರ್ಮದ ದೈವ ಬಾಲಏಸುವಿನ ಜಯಂತಿಯ ಸ್ಮರಣೆಯು ಅದ್ಧೂರಿಯಾಗಿ ಸಾಂಸ್ಕೃತಿಕ ರಾಜಧಾನಿ ಮೈಸೂರಿನಲ್ಲಿ…
ಪ್ರಶಾಂತ್ ಎಸ್. ಗ್ರಾಮೀಣ ಭಾಗದ ರಸ್ತೆಗಳಲ್ಲಿ ಸಮಸ್ಯೆ ಕಣ್ಣಿಗೆ ದೂಳು ಬಿದ್ದರೆ ಅನಾಹುತ ಸಾಧ್ಯತೆ ವಾಹನ ಸವಾರರಿಗೆ ಸವಾಲು; ಎಚ್ಚರ…
ಹೊಸದಿಲ್ಲಿ : ಕೇಂದ್ರ ಸರ್ಕಾರದ ವಾರ್ತಾ ಮತ್ತು ಪ್ರಸಾರ ಸಚಿವಾಲಯದ ಅಧೀನದಲ್ಲಿ ಮೈಸೂರಿನಲ್ಲಿ ಕಾರ್ಯ ನಿರ್ವಹಿಸುತ್ತಿರುವ ಕೇಂದ್ರೀಯ ಸಂಪರ್ಕ ಬ್ಯೂರೋ…
ಹೊಸದಿಲ್ಲಿ : ಉನ್ನಾವೋ ಅತ್ಯಾಚಾರ ಪ್ರಕರಣದ ಸಂತ್ರಸ್ತೆ ಮತ್ತು ಆಕೆಯ ತಾಯಿ ಬುಧವಾರ ಸಂಜೆ ಕಾಂಗ್ರೆಸ್‌ನ ರಾಹುಲ್ ಗಾಂಧಿ ಅವರನ್ನು…