srivathsvaasrivathsvaa
ಮೈಸೂರು : ಧರ್ಮಸ್ಥಳ ಅಸಹಜ ಸಾವು ಪ್ರಕರಣ ಕುರಿತು ರಾಜ್ಯ ಸರ್ಕಾರ ರಚಿಸಿರುವರು ಎಸ್ಐಟಿ ತನಿಖೆಯಿಂದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಧರ್ಮಸ್ಥಳಕ್ಕೆ ಅಪಪ್ರಚಾರವಾಗುತ್ತಿದೆ ಎಂದು ಬಿಜೆಪಿ ಶಾಸಕ ಶ್ರೀವತ್ಸ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.
ಈ ಕುರಿತು ಶುಕ್ರವಾರ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಧರ್ಮಸ್ಥಳಕ್ಕೆ ಅಪ ಪ್ರಚಾರ ಮಾಡಲು ಬಿಡಲ್ಲ. ಮಂಜುನಾಥ್ ಸ್ವಾಮಿ ಅಡಿಯಲ್ಲಿ ಹೆಣ ಇದೆ ಅಂತ ಅಂದ್ರೆ ತಗೆಸಿಬಿಡ್ತಾರಾ.? ಎಂದು ಖಾರವಾಗಿ ಪ್ರತಿಕ್ರಿಯಿದ್ದಾರೆ.
ರಾಜ್ಯ ಸರ್ಕಾರದ ಸಹಾನುಭೂತಿಯಿಂದ ಇಷ್ಟೇಲ್ಲ ನಡೆಯುತ್ತಿದೆ. ಮೈಸೂರು ಮುಡಾ ಹಗರಣ, ಅಕ್ರಮ ರೆಸಾರ್ಟ್ ಹಗರಣ, ಕೋಟ್ಯಾಂತರ ರೂಪಾಯಿ ಡ್ರಗ್ಸ್ ಕೇಸ್ ಆಯಿತು, ಇದೆಲ್ಲವನ್ನ ಎಸ್ಐಟಿಗೆ ವಹಿಸಿದ್ರಾ.? ಇಲ್ಲ ಆದರೆ, ಆದರೆ ಧರ್ಮಸ್ಥಳಕ್ಕೆ ಯಾಕೆ ಇಷ್ಟು ಮುತುವರ್ಜಿ? ಧರ್ಮಸ್ಥಳ ಕ್ಷೇತ್ರಕ್ಕೆ ಅಪಚಾರ ಮಾಡುವವರ ವಿರುದ್ಧ ಸದಾ ನಾವು ನಿಲ್ಲುತ್ತೇವೆ ಎಂದು ಹೇಳಿದ್ದಾರೆ.
ಇನ್ನೂ ಸಚಿವ ರಾಜಣ್ಣ ವಜಾ ವಿಚಾರವಾಗಿ ಪ್ರತಿಕ್ರಿಯಿಸಿದ ಶಾಸಕರು, ಸಚಿವ ರಾಜಣ್ಣ ಸತ್ಯ ಹೇಳಿದ್ದೇ ತಪ್ಪಾ.? ಸತ್ಯ ಹೇಳಿದ್ದಕ್ಕೆ ವಜಾ ಮಾಡಿದ್ದು ಎಷ್ಟರ ಮಟ್ಟಿಗೆ ಸರಿ.? ರಾಜಣ್ಣ ಅವರ ಅಧ್ಯಕ್ಷರು ಹೇಳಿದ್ದನ್ನ ಒಪ್ಪಲಿಲ್ಲ ಎನ್ನುವ ಕಾರಣಕ್ಕೆ ಸಂಪುಟದಿಂದ ಕಿತ್ತು ಹಾಕಿದ್ದಾರೆ. ಇದು ಒಬ್ಬ ಹಿಂದುಳಿದ ನಾಯಕನಿಗೆ ಮಾಡಿದ ಅಪಮಾನ ಎಂದು ಹೇಳಿದರು.
ನಟ ದರ್ಶನ್ ಜಾಮೀನು ಅರ್ಜಿ ವಜಾ ವಿಚಾರ ಮಾತನಾಡಿ, ಇದು ಸತ್ಯಕ್ಕೆ ಸಂದ ಜಯ. ಸುಪ್ರೀಂ ನೀಡಿದ ತೀರ್ಪನ್ನ ಯಾರಾದರು ಪ್ರಶ್ನೆ ಮಾಡಲಿಕ್ಕೆ ಸಾಧ್ಯನಾ? ಸುಪ್ರೀಂ ಕೋರ್ಟ್ ಎಲ್ಲವನ್ನೂ ಅವಲೋಕಿಸಿ ತೀರ್ಪು ನೀಡಿದೆ. ಕಾನೂನಿನ ಮುಂದೆ ಎಲ್ಲರೂ ಒಂದೆ. ಈ ತೀರ್ಪುನ್ನ ನಾನು ಸ್ವಾಗತ ಮಾಡುತ್ತೇನೆ ಎಂದರು.
ಗುಂಡ್ಲುಪೇಟೆ: ಸೋಮವಾರ ಬೆಳಗ್ಗೆ ಬಂಡೀಪುರದ ಸಫಾರಿಗೆ ಹೋಗಿದ್ದ ಪ್ರವಾಸಿಗರು ಏಕಕಾಲದಲ್ಲಿ ಸಫಾರಿಗೆ ತೆರಳಿದ್ದ ವೇಳೆ ಕಿರುಬನ ಕೊಳಚಿ ಕೆರೆಯಲ್ಲಿ ಒಂದು…
ಮಹಾದೇಶ್ ಎಂ ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದಲ್ಲಿ ನಡೆಯುತ್ತಿರುವ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಪ್ರಯುಕ್ತ…
ಮಹಾದೇಶ್ ಎಂ.ಗೌಡ: ಹನೂರು ತಾಲ್ಲೂಕು ವರದಿಗಾರರು ಹನೂರು: ಪಟ್ಟಣದ ಗ್ರಾಮದೇವತೆ ಶ್ರೀ ಬೆಟ್ಟಳ್ಳಿ ಮಾರಮ್ಮ ಜಾತ್ರಾ ಮಹೋತ್ಸವದ ಎರಡನೇ ದಿನ…
ಬೆಂಗಳೂರು: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ರಾಜ್ಯ ಆರೋಗ್ಯ ಇಲಾಖೆ ನೌಕರರು ನಾಳೆಯಿಂದ ಮುಷ್ಕರ ಕೈಗೊಂಡಿದ್ದಾರೆ. ನಾಳೆಯಿಂದ ಆರೋಗ್ಯ ಇಲಾಖೆ…
ನವದೆಹಲಿ: ಇಸ್ರೇಲ್-ಇರಾನ್ ಸಂಘರ್ಷ ಮುಂದುವರಿದಿರುವ ಹಿನ್ನೆಲೆಯಲ್ಲಿ ವಿಮಾನಗಳ ಹಾರಾಟ ಸಂಪೂರ್ಣವಾಗಿ ಬಂದ್ ಆಗಿದೆ. ಸೌದಿ ಅರೇಬಿಯಾ ಸೇರಿದಂತೆ ವಿವಿಧ ದೇಶಗಳಲ್ಲಿ…
ಬೆಂಗಳೂರು: ಇರಾನ್-ಇಸ್ರೇಲ್ ಯುದ್ಧ ಮತ್ತೆ ತೀವ್ರಗೊಂಡ ಪರಿಣಾಮ ಬೆಂಗಳೂರಿಗೆ ಆಗಮಿಸಬೇಕಿದ್ದ 8 ಮತ್ತು ನಿರ್ಗಮಿಸಬೇಕಿದ್ದ 9 ವಿಮಾನಗಳ ಹಾರಾಟ ರದ್ದಾಗಿದೆ.…