ಮೈಸೂರು : ‘ರಾಜಕೀಯ ಜೀವನದಲ್ಲಿ ಒಂದೂ ಕಪ್ಪು ಚುಕ್ಕೆ ಇಲ್ಲದೇ ಜನರ ಧ್ವನಿಯಾದವರು ಧ್ರುವನಾರಾಯಣ. ರಾಜಕಾರಣ ಕ್ಷೇತ್ರವನ್ನು ಆಯ್ದುಕೊಳ್ಳುವವರಿಗೆ ಮಾದರಿ ವ್ಯಕ್ತಿತ್ವ ಅವರದ್ದಾಗಿದೆ’ ಎಂದು ಕಾಂಗ್ರೆಸ್ ಮುಖಂಡ ಪುರುಷೋತ್ತಮ್ ಹೇಳಿದರು.
ನಗರದ ಇಂಜಿನಿಯರುಗಳ ಸಂಸ್ಥೆಯಲ್ಲಿ ‘ಕರ್ನಾಟಕ ದಲಿತ ವೇದಿಕೆ’ ಆಯೋಜಿಸಿದ್ದ ಆರ್.ಧ್ರುವನಾರಾಯಣ ನುಡಿನಮನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ಕೇವಲ ಒಂದು ಜಾತಿಗೆ ಸೀಮಿತರಾಗದೇ ಎಲ್ಲ ವರ್ಗದ ಜನರ ಏಳಿಗೆಗೆ ಶ್ರಮಿಸಿದರು. ಭ್ರಷ್ಟಾಚಾರವನ್ನು ಎಂದೂ ನಡೆಸಲಿಲ್ಲ. ಚುನಾವಣೆಯಲ್ಲಿ ಸೋತರೂ ಪ್ರವಾಸ ಮಾಡಿ ಕಾರ್ಯಕರ್ತರಿಗೆ ಸ್ಫೂರ್ತಿ ತುಂಬಿದ್ದರು’ ಎಂದರು.
‘ರಾಜಕೀಯ ಜೀವನ ಸಾರ್ಥಕವಾಗಬೇಕೆಂದರೆ ಧ್ರುವ ಅವರ ದಾರಿ ನಮ್ಮದಾಗಬೇಕು. ಶೋಷಿತ ಸಮುದಾಯಗಳು ಒಂದಾಗಬೇಕು ಎನ್ನುತ್ತಿದ್ದ ಅವರು, ಸೈದ್ಧಾಂತಿಕವಾಗಿ ರಾಜಕೀಯಕ್ಕೆ ಶಕ್ತಿ ಕೊಡಬೇಕು ಎಂದು ಪ್ರತಿಪಾದಿಸುತ್ತಿದ್ದರು. ದೊಡ್ಡ ಸ್ಥಾನಕ್ಕೇರುವ ಕನಸು ಕಂಡಿದ್ದ ನಮ್ಮೆಲ್ಲರಿಗೂ ಅವರ ಹಠಾತ್ ನಿಧನ ಶೂನ್ಯ ಮೂಡಿಸಿದೆ’ ಎಂದು ಬೇಸರ ವ್ಯಕ್ತಪಡಿಸಿದರು.
‘ಚಾಮರಾಜನಗರ ಅಭಿವೃದ್ಧಿ ಪಥದಲ್ಲಿ ಸಾಗಿದ್ದರೆ ಧ್ರುವನಾರಾಯಣ ಕೊಡುಗೆ ಅನನ್ಯ. ಶಿಕ್ಷಣ, ಕುಡಿಯುವ ನೀರು, ಮೂಲಸೌಕರ್ಯದಲ್ಲಿ ಮುಂದಿದೆ. ಅವರ ಪುತ್ರ ದರ್ಶನ್ ಕೂಡ ತಂದೆಯ ಮಾರ್ಗದಲ್ಲೇ ಸಾಗಲಿದ್ದಾರೆ. ಅವರಿಗೆ ಶಕ್ತಿ ತುಂಬುವ ಕೆಲಸವನ್ನು ಮಾಡಬೇಕು’ ಎಂದರು.
ಮುಖಂಡರಾದ ಮಂಜುಳಾ ಮಂಜುನಾಥ್, ಜವರಪ್ಪ, ಕೃಷ್ಣಮೂರ್ತಿ ಚಮರಂ, ಅಮ್ಮ ರಾಮಚಂದ್ರ ಇದ್ದರು.
ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…
ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…
ದೆಹಲಿ : ನೈಋತ್ಯ ದೆಹಲಿಯ ಸತ್ಯ ನಿಕೇತನದಲ್ಲಿ ಇಂದು ಮಧ್ಯಾಹ್ನ ಆರು ಅಂತಸ್ತಿನ ಕಟ್ಟಡ ಕುಸಿದು ಹಲವರು ಅವಶೇಷಗಳಡಿ ಸಿಲುಕಿರುವ…
ಬೆಂಗಳೂರು : ತಮಗೆ ಅಶ್ಲೀಲ ಸಂದೇಶ ಕಳಿಸಿದವರ ವಿರುದ್ಧ ನಟಿ ರಮ್ಯಾ ಅವರು ಕಾನೂನು ಸಮರ ಸಾರಿದ್ದು, ರಾಜಿಯಾಗುವ ಪ್ರಶ್ನೆಯೇ…
ಸಿದ್ದಾಪುರ: ಪಟ್ಟಣದೊಳಗೆ ಭಾನುವಾರ ಬೆಳಗಿನ ಜಾವ ಐದು ಕಾಡಾನೆಗಳು ಸಂಚರಿಸಿರುವ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ಸಿದ್ದಾಪುರದಿಂದ ಮೈಸೂರು ಕಡೆಗೆ…
ಸೋಮವಾರಪೇಟೆ: ಪಟ್ಟಣದ ಎಂ.ಜಿ. ರಸ್ತೆಯಲ್ಲಿರುವ ಎಸ್‌ಬಿಐ ಬ್ಯಾಂಕ್‌ಗೆ ಹೊಂದಿಕೊಂಡಿರುವ ಎಟಿಎಂ ಅನ್ನು ದರೋಡೆ ಮಾಡಲು ಖದೀಮರ ತಂಡವೊಂದು ಯತ್ನಿಸಿರುವ ಘಟನೆ…