ಮೈಸೂರು: ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಬಿಜೆಪಿ ಅವನನ್ನು ಡಿಜಿಪಿ ಮಾಡಿದ್ಯಾ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರ ಮುಂದಿಟ್ಟುಕೊಂಡು ಈ ಭಾಗದಲ್ಲಿ ಕೋಮು ಗಲಭೆ ಹರಡಲು ಸಾಧ್ಯವಿಲ್ಲ. ಇದು ಕರಾವಳಿ ಭಾಗವಲ್ಲ, ಇಲ್ಲಿ ನೀವು ಕೋಮು ಭಾವನೆ ಕೆರಳಿಸಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.
ನಗರದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಾಂತಿ ಕದಡಲು ಮುಂದಾಗಿರುವ ಆರೋಪದಡಿ ಪೊಲೀಸರ ಬಳಿ ಪ್ರಕರಣ ದಾಖಲಿಸುತ್ತೇವೆ. ಕೊಲೆಯ A4 ಆರೋಪಿ ಬಿಜೆಪಿ ಪಾಲಿಕೆ ಸದಸ್ಯೆಯ ತಮ್ಮನಾಗಿದ್ದು ಇದಕ್ಕೇನು ಹೇಳುತ್ತೀರಿ? A4 ಆರೋಪಿಯೇ ಚಕ್ರವರ್ತಿ ಸೂಲಿಬೆಲೆಯನ್ನು ರಾತ್ರೋರಾತ್ರಿ ಕರೆಸಿದ್ದಾನೆ. ಚಕ್ರವರ್ತಿ ಸೂಲಿಬೆಲೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.
ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಸದಸ್ಯನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಹತಾಶರಾಗಿದ್ದಾರೆ. ಕಾಂಗ್ರೆಸ್ ವರ್ಚಸ್ಸು ದಿನೇ ದಿನೇ ವೃದ್ದಿಯಾಗುತ್ತಿದೆ. ಕೇಂದ್ರ ನಾಯಕರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ.
ಬಿಜೆಪಿಗೆ ಜನರೇ ಪಾಠ ಕಲಿಸ್ತಾರೆ
ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾವಿರಾರು ಕೊಲೆಗಳಾಗಿವೆ. ಆದರೂ ಆಯ್ದ ಕೆಲವರಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಟಿ ನರಸೀಪುರ ಕೊಲೆ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ.
ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ. ಸುನಿಲ್ ಬೋಸ್ ಜೊತೆ ಫೋಟೋ ತೆಗೆಸಿಕೊಂಂಡ ಮಾತ್ರಕ್ಕೆ ಆರೋಪ ಹೊರಿಸುವುದು ಎಷ್ಟು ಸರಿ? ಪ್ರಧಾನಿ ಮೋದಿ ಮಂಡ್ಯಗೆ ಬಂದಿದ್ದಾಗ ರೌಡಿ ಶೀಟರ್ ಫೈಟರ್ ರವಿ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾದ್ರೇ ಫೈಟರ್ ರವಿ ಮಾಡಿರುವ ತಪ್ಪುಗಳಿಗೆ ಮೋದಿಯನ್ನು ಹೊಣೆ ಮಾಡುತ್ತೀರಾ ಎಂದು ಎಂ ಲಕ್ಷ್ಮಣ್ ಪ್ರಶ್ನೆ ಮಾಡಿದರು.
ಸಿಟಿ ರವಿ ಒಬ್ಬ ರೌಡಿಶೀಟರ್
ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ದವೂ ಕಿಡಿಕಾರಿದ ಎಂ.ಲಕ್ಷ್ಮಣ್, ಸಿಟಿ ರವಿ ಒಬ್ಬ ರೌಡಿಶೀಟರ್. ಸಿ ಟಿ ರವಿ ಕಾರು ಹರಿಸಿ ನಾಲ್ವರನ್ನು ಕೊಂದ ಆರೋಪ ಹೊತ್ತಿದ್ದಾರೆ. ಅವರನ್ನು ಬಿಜೆಪಿ ಸತ್ಯಶೋಧನಾ ಸಮಿತಿಗೆ ಮುಖ್ಯಸ್ಥನನ್ನಾಗಿ ನೇಮಿಸಲಾಗಿದೆ.
ಇನ್ನು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೂಡ ಹಲವಾರು ಪ್ರಕರಣ ದಾಖಲಾಗಿವೆ. ಅವರನ್ನು ಸತ್ಯಶೋಧನಾ ನಮಿತಿ ಸದಸ್ಯನಾಗಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಆರೋಪಕ್ಕೆ ಗುರಿಯಾಗಿರುವ ಇಂತಹವರು ಯಾವ ಸತ್ಯಶೋಧನೆ ಮಾಡುತ್ತಾರೆ? ಎಂದು ಲೇವಡಿ ಮಾಡಿದರು.
ಬೆಂಗಳೂರು: ರಾಜ್ಯದ ಹಲವು ಜಿಲ್ಲೆಗಳಲ್ಲಿ ಇಂದು ಸಂಜೆಯ ವೇಳೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯ…
ಟೆಹರಾನ್: ಕುವೈತ್ ವಿದ್ಯುತ್ ಸ್ಥಾವರದ ಮೇಲೆ ಇರಾನ್ ಭೀಕರ ದಾಳಿ ನಡೆಸಿದ ಪರಿಣಾಮ ಭಾರತೀಯ ಕಾರ್ಮಿಕರೊಬ್ಬರು ಸಾವನ್ನಪ್ಪಿದ್ದಾರೆ. ಇದು ದೇಶದ…
ನಂಜನಗೂಡು: ದಕ್ಷಿಣ ಕಾಶಿ ನಂಜನಗೂಡಿನಲ್ಲಿ ಇಂದು ನಡೆದ ಗೌತಮ ಪಂಚಮಹಾರಥೋತ್ಸವದಲ್ಲಿ ದುರಂತವೊಂದು ಸಂಭವಿಸಿದ್ದು, ಜಗಜಂಗುಳಿಯಲ್ಲಿ ಸಿಲುಕಿ ಓರ್ವ ಭಕ್ತ ಸಾವನ್ನಪ್ಪಿರುವ…
ಹುಣಸೂರು: ಒಣಗಿದ್ದ ದಾಸವಾಳ ಹೂ ನುಂಗಿ ಮಗು ಉಸಿರುಗಟ್ಟಿ ಸಾವನ್ನಪ್ಪಿರುವ ಮನಕಲಕುವ ಘಟನೆ ಹುಣಸೂರು ತಾಲ್ಲೂಕಿನ ದೊಡ್ಡಹೆಜ್ಜೂರಿನಲ್ಲಿ ನಡೆದಿದೆ. ದೊಡ್ಡಹೆಜ್ಜೂರಿನ…
ಜಾತಿ ಆಧಾರಿತ ಅಪರಾಧಕ್ಕೆ ತಡೆ, ಅಂತರ್ಜಾತಿ ವಿವಾಹಿತರಿಗೆ ರಕ್ಷಣೆ ಒದಗಿಸುವ ಮಹತ್ವಪೂರ್ಣವಾದ ‘ಇವ ನಮ್ಮವ ಇವ ನಮ್ಮವ’ ಮಸೂದೆಯನ್ನು ರಾಜ್ಯ…
ನಾಳೆ ಸೇವೆಯಿಂದ ನಿವೃತ್ತಿ ಹೊಂದಲಿರುವ ಮೇಷ್ಟ್ರು ಸಿ.ಹರಕುಮಾರ್, ಬರಹಗಾರ ಮೂರ್ನಾಲ್ಕು ದಶಕಗಳ ಹಿಂದೆ ಮ್ಯಾನೇಜ್ಮೆಂಟ್ ಕೋರ್ಸ್ ಅಥವಾ ಎಂಬಿಎ ಪದವಿ…