ಮೈಸೂರು

ಬಿಜೆಪಿ ಚಕ್ರವರ್ತಿ ಸೂಲಿಬೆಲೆಯನ್ನು ಡಿಜಿಪಿ ಮಾಡಿದ್ಯಾ?: ಲಕ್ಷ್ಮಣ್ ಲೇವಡಿ

ಮೈಸೂರು: ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರವಾಗಿ ಚಕ್ರವರ್ತಿ ಸೂಲಿಬೆಲೆ ನೈತಿಕ ಪೊಲೀಸ್ ಗಿರಿ ನಡೆಸುತ್ತಿದ್ದು ಬಿಜೆಪಿ ಅವನನ್ನು ಡಿಜಿಪಿ ಮಾಡಿದ್ಯಾ ಎಂದು ಕಾಂಗ್ರೆಸ್ ವಕ್ತಾರ ಎಂ ಲಕ್ಷ್ಮಣ್ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟಿ ನರಸೀಪುರದ ಹಿಂದೂ ಕಾರ್ಯಕರ್ತ ವೇಣುಗೋಪಾಲ್ ನಾಯಕ್ ಕೊಲೆ ವಿಚಾರ ಮುಂದಿಟ್ಟುಕೊಂಡು ಈ ಭಾಗದಲ್ಲಿ ಕೋಮು ಗಲಭೆ ಹರಡಲು ಸಾಧ್ಯವಿಲ್ಲ. ಇದು ಕರಾವಳಿ ಭಾಗವಲ್ಲ, ಇಲ್ಲಿ ನೀವು ಕೋಮು ಭಾವನೆ ಕೆರಳಿಸಲು ಸಾಧ್ಯವಿಲ್ಲ ಎಂದು ಟಾಂಗ್ ನೀಡಿದ್ದಾರೆ.

ನಗರದಲ್ಲಿ ಮಾತನಾಡಿದ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಚಕ್ರವರ್ತಿ ಸೂಲಿಬೆಲೆ ವಿರುದ್ಧ ಶಾಂತಿ ಕದಡಲು ಮುಂದಾಗಿರುವ ಆರೋಪದಡಿ ಪೊಲೀಸರ ಬಳಿ ಪ್ರಕರಣ ದಾಖಲಿಸುತ್ತೇವೆ. ಕೊಲೆಯ A4 ಆರೋಪಿ ಬಿಜೆಪಿ ಪಾಲಿಕೆ ಸದಸ್ಯೆಯ ತಮ್ಮನಾಗಿದ್ದು ಇದಕ್ಕೇನು ಹೇಳುತ್ತೀರಿ? A4 ಆರೋಪಿಯೇ ಚಕ್ರವರ್ತಿ ಸೂಲಿಬೆಲೆಯನ್ನು ರಾತ್ರೋರಾತ್ರಿ ಕರೆಸಿದ್ದಾನೆ. ಚಕ್ರವರ್ತಿ ಸೂಲಿಬೆಲೆಯನ್ನು ಮಂಪರು ಪರೀಕ್ಷೆಗೆ ಒಳಪಡಿಸಬೇಕು ಎಂದು ಹೇಳಿದರು.

ಟಿ ನರಸೀಪುರದಲ್ಲಿ ನಡೆದಿರುವ ಯುವ ಬ್ರಿಗೇಡ್ ಸದಸ್ಯನ ಕೊಲೆಯನ್ನು ಬಿಜೆಪಿ ರಾಜಕೀಯ ಲಾಭಕ್ಕಾಗಿ ಬಳಸಿಕೊಳ್ಳುವ ಕೆಲಸ ಮಾಡುತ್ತಿದೆ. ಬಿಜೆಪಿಯವರು ಹತಾಶರಾಗಿದ್ದಾರೆ. ಕಾಂಗ್ರೆಸ್ ವರ್ಚಸ್ಸು ದಿನೇ ದಿನೇ ವೃದ್ದಿಯಾಗುತ್ತಿದೆ. ಕೇಂದ್ರ ನಾಯಕರ ಸೂಚನೆ ಮೇರೆಗೆ ರಾಜ್ಯ ಬಿಜೆಪಿ ನಾಯಕರು ಕಾಂಗ್ರೆಸ್ ವಿರುದ್ಧ ಸುಖಾಸುಮ್ಮನೆ ಆರೋಪಗಳನ್ನು ಮಾಡುತ್ತಿದ್ದಾರೆ.

ಬಿಜೆಪಿಗೆ ಜನರೇ ಪಾಠ ಕಲಿಸ್ತಾರೆ

ಮುಂಬರುವ ಲೋಕಸಭಾ ಚುನಾವಣೆ ದೃಷ್ಟಿಯಿಂದ ಕಾಂಗ್ರೆಸ್ ವಿರುದ್ಧ ಇಲ್ಲಸಲ್ಲದ ಆರೋಪ ಮಾಡ್ತಿದಾರೆ. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸಾವಿರಾರು ಕೊಲೆಗಳಾಗಿವೆ. ಆದರೂ ಆಯ್ದ ಕೆಲವರಿಗೆ ಮಾತ್ರ ಪರಿಹಾರ ಕೊಟ್ಟಿದ್ದಾರೆ. ಟಿ ನರಸೀಪುರ ಕೊಲೆ ಪ್ರಕರಣವನ್ನು ರಾಜಕೀಯ ಲಾಭಕ್ಕೆ ಬಳಸಿಕೊಳ್ಳಲು ಮುಂದಾಗಿರುವ ಬಿಜೆಪಿಗೆ ಜನರೇ ತಕ್ಕ ಪಾಠ ಕಲಿಸುತ್ತಾರೆ.

ಸಾವಿನಲ್ಲೂ ಬಿಜೆಪಿ ರಾಜಕೀಯ ಮಾಡ್ತಿದೆ. ಸುನಿಲ್ ಬೋಸ್ ಜೊತೆ ಫೋಟೋ ತೆಗೆಸಿಕೊಂಂಡ ಮಾತ್ರಕ್ಕೆ ಆರೋಪ ಹೊರಿಸುವುದು ಎಷ್ಟು ಸರಿ? ಪ್ರಧಾನಿ ಮೋದಿ ಮಂಡ್ಯಗೆ ಬಂದಿದ್ದಾಗ ರೌಡಿ ಶೀಟರ್ ಫೈಟರ್ ರವಿ ಜೊತೆ ಫೋಟೊ ತೆಗೆಸಿಕೊಂಡಿದ್ದಾರೆ. ಹಾಗಾದ್ರೇ ಫೈಟರ್ ರವಿ ಮಾಡಿರುವ ತಪ್ಪುಗಳಿಗೆ ಮೋದಿಯನ್ನು ಹೊಣೆ ಮಾಡುತ್ತೀರಾ ಎಂದು ಎಂ ಲಕ್ಷ್ಮಣ್ ಪ್ರಶ್ನೆ ಮಾಡಿದರು.

ಸಿಟಿ ರವಿ ಒಬ್ಬ ರೌಡಿಶೀಟರ್

ಇದೇ ವೇಳೆ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ ರವಿ ವಿರುದ್ದವೂ ಕಿಡಿಕಾರಿದ ಎಂ.ಲಕ್ಷ್ಮಣ್, ಸಿಟಿ ರವಿ ಒಬ್ಬ ರೌಡಿಶೀಟರ್. ಸಿ ಟಿ ರವಿ ಕಾರು ಹರಿಸಿ ನಾಲ್ವರನ್ನು ಕೊಂದ ಆರೋಪ ಹೊತ್ತಿದ್ದಾರೆ. ಅವರನ್ನು ಬಿಜೆಪಿ ಸತ್ಯಶೋಧನಾ ಸಮಿತಿಗೆ ಮುಖ್ಯಸ್ಥನನ್ನಾಗಿ ನೇಮಿಸಲಾಗಿದೆ.

ಇನ್ನು ಸಂಸದ ಪ್ರತಾಪ್ ಸಿಂಹ ವಿರುದ್ಧ ಕೂಡ ಹಲವಾರು ಪ್ರಕರಣ ದಾಖಲಾಗಿವೆ. ಅವರನ್ನು ಸತ್ಯಶೋಧನಾ ನಮಿತಿ ಸದಸ್ಯನಾಗಿ ನೇಮಕ ಮಾಡಲಾಗಿದೆ. ಕ್ರಿಮಿನಲ್ ಆರೋಪಕ್ಕೆ ಗುರಿಯಾಗಿರುವ ಇಂತಹವರು ಯಾವ ಸತ್ಯಶೋಧನೆ ಮಾಡುತ್ತಾರೆ? ಎಂದು ಲೇವಡಿ ಮಾಡಿದರು.

andolanait

Recent Posts

ತಂತ್ರಜ್ಞಾನ ಶಸ್ತ್ರಾಸ್ತ್ರೀಕರಣದ ಬಗ್ಗೆ ಕಳವಳಗಳ ವ್ಯಕ್ತಪಡಿಸಿದ ಪ್ರಧಾನಿ ಮೋದಿ

ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…

1 hour ago

ಭಾನುವಾರದ ಹಾಡುಪಾಡು | ಹೊರಗೆ ನಗುವಿನ ಮೇಕಪ್‌, ಒಳಗೆ ಕುದಿಯುವ ಬೇಗುದಿ

ಮೇಘನ ಕೆ.ಆರ್‌ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…

5 hours ago

ಭಾನುವಾರದ ಹಾಡುಪಾಡು | ಮಳೆ ತರುವ ತಾಯಯಿ ಈ ಪುಟ್ಟ ಗೌರಿ

ಡಾ. ಶಿಲಿನಾ ಕೋಟೆ ಎನ್.‌ ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…

5 hours ago

ಗೌರಮ್ಮ ಭೂಮಿಗೆ ಬರುವ ದಿನ

ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…

5 hours ago

ಮಗಳು ಗೌರಿ, ದೇವತೆಯೂ ಗೌರಿ, ಮಳೆಯು ಗೌರಿ, ಬೆಂಕಿಯೂ ಗೌರಿ

ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್‌, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…

5 hours ago

ಗೌರಿ-ಗಣೇಶ ಹಬ್ಬಕ್ಕೆ ಸಕಲ ಸಿದ್ಧತೆ

ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…

6 hours ago