ಮೈಸೂರು

ಹುಣಸೂರಿನ ಎಂಟು ಕೆರೆಗಳಿಗೆ ನೀರು ಪೂರೈಕೆಗೆ ಸೂಚನೆ

 ಶಾಸಕ ಜಿ.ಡಿ. ಹರೀಶ್‌ ಗೌಡರ ಮನವಿಗೆ ಸರ್ಕಾರದ ಸ್ಪಂದನೆ

ಬೆಂಗಳೂರು : ಹುಣಸೂರು ತಾಲೂಕಿನ ಗಾವಡಗೆರೆ ಹೋಬಳಿ ವ್ಯಾಪ್ತಿಯ ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬೆಳೆಗಳಿಗೆ ಅನುಕೂಲ ಕಲ್ಪಿಸುವಂತೆ ಶಾಸಕ ಜಿ.ಡಿ. ಹರೀಶ್‌ ಗೌಡ ಅವರ ಮನವಿಗೆ ಸರ್ಕಾರ ಸ್ಪಂದಿಸಿ, ಸಂಬಂಧಿಸಿದಂತೆ ಅಧಿಕಾರಿಗಳಿಗೆ ನೀರು ಬಿಡುಗಡೆ ಮಾಡುವಂತೆ ಸೂಚಿಸಿದೆ.

ಬೆಂಗಳೂರಿನ ವಿಕಾಸಸೌಧದಲ್ಲಿ ಸಚಿವ ನರೇಂದ್ರ ಸ್ವಾಮಿ ಅವರ ಅಧ್ಯಕ್ಷತೆಯಲ್ಲಿ ನಡೆದ ಕಾವೇರಿ ನೀರಾವರಿ ನಿಗಮ ನಿಯಮಿತದಿಂದ ಆಯೋಜಿಸಿದ್ದ 2026-27ನೇ ಸಾಲಿನ ಹಾರಂಗಿ ಯೋಜನೆ ನೀರಾವರಿ ಸಲಹಾ ಸಮಿತಿ ಸಭೆಯಲ್ಲಿ ಮಾತನಾಡಿದ ಶಾಸಕ ಜಿ.ಡಿ. ಹರೀಶ್‌ ಗೌಡ, ಹುಣಸೂರು ತಾಲೂಕಿನ ಗಾವಡಗೆರೆ, ಜಾಬಗೆರೆ, ಚಿಕ್ಕಕಾಡನಹಳ್ಳಿ, ಹುಲ್ಯಾಳು, ಮಾಚಾಬಾಯನಹಳ್ಳಿ, ಮುಳ್ಳೂರು, ಅಗ್ರಹಾರ ಕೆರೆ ಸೇರಿದಂತೆ ಇನ್ನೂ ಹಲವು ಕೆರೆಗಳಿಗೆ ನೀರು ಪೂರೈಕೆ ಮಾಡುವಂತೆ ಮನವಿ ಮಾಡಿದರು.

ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿದ ಸಚಿವ ನರೇಂದ್ರ ಸ್ವಾಮಿ, ಕಳೆದ 20 ವರ್ಷಗಳಿಂದ ಹಾರಂಗಿ ಜಲಾಶಯಕ್ಕೆ ಬಂದಿರುವ ಒಳಹರಿವಿನ ಪ್ರಮಾಣವನ್ನು ಪರಿಗಣಿಸಿ, ಹಾರಂಗಿ ಎಡದಂಡೆ ಮತ್ತು ಬಲದಂಡೆ ನಾಲೆಗಳಲ್ಲಿ ವ್ಯವಸಾಯಕ್ಕೆ ಅನುಕೂಲವಾಗುವಂತೆ ಕಟ್ಟು ನೀರಿನ ಪದ್ಧತಿಯನ್ನು ಅಳವಡಿಸಿ ನೀರನ್ನು ಹರಿಸಿ, ನೀರು ನಿರ್ವಹಣೆ ಮಾಡುವಂತೆ ಸೂಚಿಸಿದರು. ಅಲ್ಲದೇ ಈ ಬಗ್ಗೆ ರೈತರಿಗೆ ಸೂಕ್ತ ತಿಳುವಳಿಕೆ ನೀಡಲು ಹಾಗೂ ಸೂಕ್ತ ಪ್ರಕಟಣೆ ಹೊರಡಿಸುವಂತೆ ಹಾಗೂ ಪ್ರಸ್ತುತ ಜಲ ವರ್ಷದಲ್ಲಿ ಬೇಸಿಗೆ ಅವಧಿಯಲ್ಲಿ ನೀರಿನ ಅಭಾವವಿದ್ದಲ್ಲಿ ಜನ-ಜಾನುವಾರುಗಳ ಕುಡಿಯುವ ನೀರಿಗಾಗಿ ಕೆರೆ ಹಾಗೂ ಕಟ್ಟೆಗಳನ್ನು ತುಂಬಿಸಲು ನಾಲೆಗಳ ಮೂಲಕ ನೀರನ್ನು ಹರಿಸಲು ತಿಳಿಸಿದರು.

ಇದಕ್ಕೂ ಮುನ್ನ ಸಭೆಯ ಆರಂಭದಲ್ಲಿ ಮಾತನಾಡಿದ ಹಾರಂಗಿ ಯೋಜನಾ ವೃತ್ತ ಅಧೀಕ್ಷಕ ಇಂಜಿನಿಯರ್‌, ಹಾರಂಗಿ ಜಲಾಶಯ ಭರ್ತಿಯಾಗಿದೆ. ಪ್ರಸ್ತುತ ನೀರಿನ ಮಟ್ಟ 2856.79 ಅಡಿಗಳಿದ್ದು, 7 ಟಿಎಂಸಿ ಉಪಯುಕ್ತ ನೀರಿನ ಸಂಗ್ರಹವಿದೆ. ಈವರೆಗಿನ ಕನಿಷ್ಠ ಒಳಹರಿವು ಪರಿಗಣಿಸಿದರೆ ಜಲಾಶಯಕ್ಕೆ ಕನಿಷ್ಠ 9.51 ಟಿಎಂಸಿ ನೀರು ಬರುವ ಬಗ್ಗೆ ಅಂದಾಜಿಸಲಾಗಿದೆ. ಈ ಆಧಾರದ ಮೇಲೆ ಕಟ್ಟು ನೀರಾವರಿ ಪದ್ಧತಿಯಂತೆ ನೀರು ಹರಿಸಬಹುದು ಎಂದು ತಿಳಿಸಿದರು.

ಸಭೆಯಲ್ಲಿ ಶಾಸಕರಾದ ಕೆ.ವೆಂಕಟೇಶ್‌, ಮಂತರ್‌ಗೌಡ, ಎ. ಮಂಜು, ಭೋಸ್‌ರಾಜ್‌, ಡಿ. ರವಿಶಂಕರ್‌, ಹಾರಂಗಿ ಮಹಾಮಂಡಲದ ನೀರು ಬಳಕೆದಾರರ ಸಹಕಾರ ಸಂಘದ ಅಧ್ಯಕ್ಷ ಎಸ್‌.ಸಿ. ಚೌಡೇಗೌಡ ಸೇರಿದಂತೆ ಇತರರಿದ್ದರು.

ಆಂದೋಲನ ಡೆಸ್ಕ್

Recent Posts

ಸಿಇಸಿ ಜ್ಞಾನೇಶ್​ ಕುಮಾರ್​ರನ್ನು ಹುದ್ದೆಯಿಂದ ಕೆಳಗಿಳಿಸುವ ನಿರ್ಣಯ; ಕೇರಳಂ ವಿಧಾನಸಭೆಯಲ್ಲಿ ಪಾಸ್​​

ಕೇರಳಂ: ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರನ್ನು ಹುದ್ದೆಯಿಂದ ಕೆಳಗಿಳಿಸುವಂತೆ ಆಗ್ರಹಿಸಿ ಕೇರಳಂ ವಿಧಾನಸಭೆಯಲ್ಲಿ ನಿರ್ಣಯ ಅಂಗೀಕರಿಸಲಾಗಿದೆ. ಎಸ್‌ಐಆರ್‌…

14 hours ago

ಧನಂಜಯ ಆನೆಯ ಹೆಗಲಿಗೆ ಶ್ರೀರಂಗಪಟ್ಟಣ ದಸರಾ ಜವಾಬ್ದಾರಿ

ಶ್ರೀರಂಗಪಟ್ಟಣ: ಇಲ್ಲಿ ನಡೆಯುವ ದಸರಾ ಮಹೋತ್ಸವದಲ್ಲಿ ಭಾಗವಹಿಸುವ ಆನೆಗಳನ್ನು ಆಯ್ಕೆ ಮಾಡಲಾಗಿದೆ. ಧನಂಜಯ, ಲಕ್ಷ್ಮಿ ಹಾಗೂ ರೂಪ ಆನೆಗಳು ಈ…

16 hours ago

ದಸರಾ ಗಜಪಡೆಗೆ 3ನೇ ಹಂತದ ಕುಶಾಲತೋಪು ಸಿಡಿಸುವ ತಾಲೀಮು ಯಶಸ್ವಿ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ 2026ರ ಸಿದ್ಧತೆಗಳು ಬಿರುಸುಗೊಂಡಿವೆ. ದಸರಾ ಗಜಪಡೆ ಹಾಗೂ ಅಶ್ವಪಡೆಗೆ ನಡೆದ ಮೂರನೇ ಹಂತದ ಕುಶಾಲತೋಪು…

16 hours ago

ಸತ್ಯಕ್ಕೆ ಅಂತಿಮ ಗೆಲುವಾಗಲಿದೆ: ರಾಹುಲ್‌ ಗಾಂಧಿ

ನವದೆಹಲಿ: ಸತ್ಯಕ್ಕೆ ಅಂತಿಮ ಗೆಲುವಾಗಲಿದೆ. ಈ ಹೋರಾಟದಿಂದ ಯಾವುದೇ ಕಾರಣಕ್ಕೂ ಹಿಂಜರಿಯುವುದಿಲ್ಲ” ಎಂದು ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್…

16 hours ago

ತಾಯಿ ಜೊತೆ ಸುತ್ತೂರು ಮಠಕ್ಕೆ ಭೇಟಿ ನೀಡಿದ ನಟ ಪ್ರಭುದೇವ್

ಮೈಸೂರು: ಬಹುಭಾಷಾ ನಟ ಪ್ರಭುದೇವ್‌ ಅವರು ತಮ್ಮ ತಾಯಿಯೊಂದಿಗೆ ಸುತ್ತೂರು ಮಠಕ್ಕೆ ಭೇಟಿ ನೀಡಿ ಶ್ರೀಗಳ ದರ್ಶನ ಪಡೆದರು. ನಾಳೆ…

16 hours ago

ಹೆಣ ಹಾಕಬೇಕಿದ್ದು ತೋಪಿನಲ್ಲಿ; ಬಿಸಾಕಿದ್ದು…?

ವರದಿ ರೂಪ: ರವಿಚಂದ್ರ ಚಿಕ್ಕೆಂಪಿಹುಂಡಿ ಮಾಗಡಿ ರಸ್ತೆಯಲ್ಲಿತ್ತು ದೊಡ್ಡ ಮೋರಿ, ಮರಗಳ ತೋಪು, ಸುತ್ತಲೂ ಕತ್ತಲಿನಿಂದ ಕೂಡಿದ್ದ ನಿರ್ಜನ ಪ್ರದೇಶ…

20 hours ago