ಮೈಸೂರು

ಮಾಜಿ ಶಾಸಕ ವಾಸುರನ್ನು ಕಾಂಗ್ರೆಸ್‌ ನಿಂದ ವಜಾಗೊಳಿಸಿ : ಸಿಎಂ ಬೆಂಬಲಿಗರ ಆಗ್ರಹ

ಮೈಸೂರು : ಚಾಮರಾಜ ಕ್ಷೇತ್ರದ ಮಾಜಿ ಶಾಸಕ ವಾಸು ಅವರನ್ನು ಕಾಂಗ್ರೆಸ್‌ ಪಕ್ಷದಿಂದ ವಜಾಗೊಳಿಸುವಂತೆ ಸಿಎಂ ಸಿದ್ದರಾಮಯ್ಯ ಅವರ ಬೆಂಬಲಿಗರಿಂದ ಆಗ್ರಹ ಕೇಳಿಬಂದಿದೆ.

ಡಿ.ಕೆ ಶಿವಕುಮಾರ್ ಸಿಎಂ ಆಗಲಿ ಎಂದು ಬಹಿರಂಗ ಹೇಳಿಕೆ ಕೊಟ್ಟಿದ್ದ ಮಾಜಿ ಶಾಸಕ ವಾಸುಗೆ ಚಾಮರಾಜ ಕ್ಷೇತ್ರದ ಟಿಕೆಟ್ ಕೈ ತಪ್ಪಿಸಿ ತಮ್ಮ ಬೆಂಬಲಿಗನಿಗೆ ಕೊಡಿಸುವಲ್ಲಿ ಸಿದ್ದರಾಮಯ್ಯ ಯಶಸ್ವಿಯಾಗಿದ್ದರು. ಇದೀಗ ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಸಿದ್ದರಾಮಯ್ಯ ಬೆಂಬಲಿಗ ಮೈಸೂರು ನಗರ ಕಾಂಗ್ರೆಸ್ ಅಧ್ಯಕ್ಷ ಆರ್. ಮೂರ್ತಿಗೆ ಪತ್ರ ಬರೆದಿದ್ದಾರೆ. ನಗರ ಪಾಲಿಕೆ ಮಾಜಿ ಸದಸ್ಯ ಆರ್. ಸುನಂದಕುಮಾರ್ ಪತ್ರ ಬರೆದಿದ್ದು ವಾಸು ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಒತ್ತಾಯಿಸಿದ್ದಾರೆ.

ವಿಧಾನಸಭಾ ಚುನಾವಣೆಯಲ್ಲಿ ವಾಸು ಪಕ್ಷ ವಿರೋಧಿ ಕೆಲಸ ಮಾಡಿದ್ದಾರೆ. ಕಾಂಗ್ರೆಸ್‌ನಲ್ಲಿ ಇದ್ದುಕೊಂಡೇ ಬಿಜೆಪಿ ಪರವಾಗಿ ಮತಯಾಚನೆ ಮಾಡಿದ್ದಾರೆ. ಕುರುಬರು ಹಾಗೂ ದಲಿತರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿದ್ದಾರೆ. ತಮ್ಮ ಬೆಂಬಲಿಗರಿಗೆ ಹಣ ಕೊಟ್ಟು ಬಿಜೆಪಿ ಪರ ಕೆಲಸ ಮಾಡಿಸಿದ್ದಾರೆ. ಬಿಜೆಪಿಯಲ್ಲಿ ತಮ್ಮ ಮಗ ಸ್ಪರ್ಧಿಸಿದ್ದ ಕಾರಣ ಅವರ ಪರ ಕೆಲಸ ಮಾಡಿದ್ದಾರೆ. ಚಾಮರಾಜ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ವಿರುದ್ಧ ಕೆಲಸ ಮಾಡಿದ್ದು ಸಿದ್ದರಾಮಯ್ಯ ವಿರುದ್ಧವೂ ವಾಸು ಕೆಲಸ ಮಾಡಿದ್ದಾರೆ. ಹೀಗಾಗಿ ಅವರನ್ನ ಪಕ್ಷದಿಂದ ವಜಾ ಮಾಡುವಂತೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ.

 

lokesh

Recent Posts

ದಸರಾ ಚಿತ್ರೋತ್ಸವ ರದ್ದಾಗದಿರಲಿ

ಮೊದಲ ವಿಶ್ವಕನ್ನಡ ಸಮ್ಮೇಳನದ ಸಿದ್ಧತೆಯ ಸಂದರ್ಭ. ಬರಗಾಲದ ವೇಳೆ ದುಬಾರಿ ವೆಚ್ಚದ ಇಂತಹ ಸಮ್ಮೇಳನ ಅಗತ್ಯ ಇಲ್ಲ ಎಂದು ಇದರ…

2 hours ago

ಚಲನೆ ಕೇವಲ ವ್ಯಾಯಾಮವಲ್ಲ ಆರೋಗ್ಯದ ಶಕ್ತಿ

ಇಂದು ನಮ್ಮ ದೇಶದ ಆರೋಗ್ಯ ಕ್ಷೇತ್ರದಲ್ಲಿ ಒಂದು ‘ನಿಶ್ಯಬ್ದ ಕ್ರಾಂತಿ’ ಸಂಭವಿಸುತ್ತಿದೆ. ಒಂದು ಕಾಲದಲ್ಲಿ ಪ್ಲೇಗ್, ಕಾಲರಾದಂತಹ ಸಾಂಕ್ರಾಮಿಕ ರೋಗಗಳು…

2 hours ago

ಒಂದು ಸೈನ್ಯದ ಆತ್ಮಾಹುತಿ ತಡೆದಿದ್ದರು ಅರಸು

ಆರ್.ಟಿ.ವಿಠ್ಠಲಮೂರ್ತಿ ಅವರ ವಾರದ ಅಂಕಣ  ಮಾಜಿ ಮುಖ್ಯಮಂತ್ರಿ ದೇವರಾಜ ಅರಸರನ್ನು ಇತಿಹಾಸ ಪದೇ ಪದೇ ಸ್ಮರಿಸುತ್ತದೆ. ಅಂದ ಹಾಗೆ ಮುಖ್ಯಮಂತ್ರಿಗಳಾದವರು…

2 hours ago

ಜಮೀನು ಕಬಳಿಸಲು ಸಂಚು ; ಚಿಕ್ಕಕೆರೆಯೂರು ಹಾಡಿಯ ಗಿರಿಜನರಿಂದ ಆಹೋರಾತ್ರಿ ಪ್ರತಿಭಟನೆ

ಎಚ್.ಡಿ.ಕೋಟೆ : ಪ್ರಭಾವಿಗಳು ಮತ್ತು ಅಧಿಕಾರಿಗಳು ನಕಲಿ ದಾಖಲೆ ಸೃಷ್ಟಿಸಿ, ಮುಗ್ಧ ಆದಿವಾಸಿ ಜನರ ೮ ಎಕರೆ ಜಮೀನು ಕಬಳಿಸಲು…

12 hours ago

ಮೈಸೂರು | ಪೇದೆ ನೇಮಕಾತಿ ಪರೀಕ್ಷೆ ಸುಸೂತ್ರ ; 13,166 ಹಾಜರ್‌, 3,424 ಮಂದಿ ಗೈರು

ಮೈಸೂರು : ಸಿಎಆರ್, ಡಿಎಆರ್ ಪೇದೆಗಳ ನೇಮಕಾತಿಗಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ ನಡೆಸಿದ ಸ್ಪರ್ಧಾತ್ಮಕ ಪರೀಕ್ಷೆಯು ಸುಗಮವಾಗಿ ನಡೆಯಿತು.…

14 hours ago