ಎಂಎಲ್‌ಸಿ ಕೆ.ಶಿವಕುಮಾರ್ ಮನವಿಗೆ ಸ್ಪಂದಿಸಿದ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ
ಮೈಸೂರು : ಬುಡಕಟ್ಟು ಕುಟುಂಬಗಳಿಗೆ ಸರ್ಕಾರದಿಂದ ವಿತರಿಸುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ಪೂರೈಕೆ ಒಪ್ಪಂದದ ಪ್ರಕ್ರಿಯೆಯನ್ನು ತ್ವರಿತವಾಗಿ ಪೂರ್ಣಗೊಳಿಸಿ ಶೀಘ್ರದಲ್ಲೇ ಪೌಷ್ಟಿಕ ಆಹಾರದ ಕಿಟ್ ವಿತರಿಸಲಾಗುವುದು ಎಂದು ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಟಿ.ರಘುಮೂರ್ತಿ ಅವರು ಭರವಸೆ ನೀಡಿದರು.
ಬೆಂಗಳೂರಿನ ವಿಧಾನಸೌಧದ ಕಚೇರಿಯಲ್ಲಿ ಸಚಿವರನ್ನು ಭೇಟಿ ಮಾಡಿದ ವಿಧಾನ ಪರಿಷತ್ ಸದಸ್ಯರಾದ ಕೆ.ಶಿವಕುಮಾರ್ ಅವರು, ಕಳೆದ ಆರು ತಿಂಗಳಿಂದ ಪೌಷ್ಟಿಕ ಆಹಾರದ ಕಿಟ್ ವಿತರಣೆಯು ಸ್ಥಗಿತಗೊಂಡಿದ್ದು, ಇದರಿಂದ ಸಾವಿರಾರು ಆದಿವಾಸಿ ಕುಟುಂಬಗಳ ಸಂಕಷ್ಟಕ್ಕೆ ಸಿಲುಕಿವೆ ಎಂದು ಪತ್ರ ಸಲ್ಲಿಸಿ ಸಚಿವರ ಗಮನಕ್ಕೆ ತಂದರು.
ಈ ಕುರಿತು ಪ್ರತಿಕ್ರಿಯಿಸಿದ ಸಚಿವರು, ಪೌಷ್ಟಿಕ ಆಹಾರದ ಕಿಟ್ ವಿತರಣೆಗೆ ಕ್ರಮ ಕೈಗೊಳ್ಳಲಾಗುವುದು. ಮುಂದಿನ ದಿನಗಳಲ್ಲಿ ಹಾಡಿಗಳಿಗೆ ಭೇಟಿ ನೀಡಿ ಆದಿವಾಸಿ ಜನರ ಸಮಸ್ಯೆಗಳನ್ನು ಆಲಿಸಿ ಪರಿಹರಿಸಲಾಗುವುದು ಎಂದು ಆಶ್ವಾಸನೆ ನೀಡಿದರು.
ಮೈಸೂರು, ಚಾಮರಾಜನಗರ, ಕೊಡಗು, ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಕಾಡು ಮತ್ತು ಕಾಡಂಚಿನಲ್ಲಿ ಸುಮಾರು 48 ಸಾವಿರ ಬುಡಕಟ್ಟು ಕುಟುಂಬಗಳು ವಾಸಿಸುತ್ತಿದ್ದು, ಇವರ ಅಪೌಷ್ಟಿಕತೆ ನಿವಾರಣೆಗಾಗಿ ರಾಜ್ಯ ಸರ್ಕಾರವು ಆದಿವಾಸಿಗಳಿಗೆ 2008 ರಿಂದ ಉಚಿತವಾಗಿ ಪೌಷ್ಟಿಕ ಆಹಾರದ ಕಿಟ್ ವಿತರಿಸುವ ಯೋಜನೆ ಜಾರಿಗೆ ತಂದಿದೆ.
ಅರಣ್ಯ ಉತ್ಪನ್ನಗಳನ್ನು ಅವಲಂಬಿಸಿ ಜೀವನ ಸಾಗಿಸುತ್ತಿರುವ ಆದಿವಾಸಿ ಕುಟುಂಬಗಳಿಗೆ ಸರ್ಕಾರದ ಪೌಷ್ಟಿಕ ಆಹಾರದ ಕಿಟ್ ಸಹಕಾರಿಯಾಗಿದ್ದು, ಈ ಕಿಟ್‌ನಲ್ಲಿ ನೀಡುತ್ತಿದ್ದ ರಾಗಿ, ಮೊಟ್ಟೆ, ತುಪ್ಪ, ಅಡುಗೆ ಎಣ್ಣೆ ಮತ್ತು ಬೇಳೆಕಾಳು ಸೇರಿದಂತೆ ಪೌಷ್ಟಿಕಾಂಶಯುಕ್ತ ಆಹಾರ ಸಾಮಗ್ರಿಗಳು ಆದಿವಾಸಿ ಜನರ ಅಪೌಷ್ಟಿಕತೆ ನಿವಾರಣೆಗೆ ಪೂರಕವಾಗಿದ್ದವು.
ಆದರೆ, ಕಳೆದ ಆರು ತಿಂಗಳಿಂದ ಸರ್ಕಾರ ವಿತರಿಸುತ್ತಿದ್ದ ಪೌಷ್ಟಿಕ ಆಹಾರದ ಕಿಟ್ ವಿತರಣೆಯು ಸ್ಥಗಿತಗೊಂಡಿದ್ದು, ಬುಡಕಟ್ಟು ಕುಟುಂಬಗಳು ದಿನನಿತ್ಯದ ಅಗತ್ಯತೆಗಾಗಿ ಪರದಾಡುತ್ತಿದ್ದಾರೆ. ಈ ಕಾರಣದಿಂದ ಕುಟುಂಬಗಳು ವಲಸೆ ಹೋಗುತ್ತಿದ್ದು, ಇದು ಆತಂಕಕಾರಿ ಬೆಳವಣಿಗೆಯಾಗಿದೆ. ಆದ್ದರಿಂದ ಈ ಕೂಡಲೇ ಪೌಷ್ಟಿಕ ಆಹಾರದ ಕಿಟ್ ವಿತರಿಸಬೇಕು ಎಂದು ಕೆ.ಶಿವಕುಮಾರ್ ಅವರು ಮನವರಿಕೆ ಮಾಡಿದ್ದಾರೆ.
ಕೋಲ್ಕತ್ತಾ: ದುರ್ಗಾಪೂಜೆ ಸಂಭ್ರಮದ ನಡುವೆ ಭೀಕರ ದುರಂತ ಸಂಭವಿಸಿದೆ. ಉತ್ತರ ಕೋಲ್ಕತ್ತಾದ ಚೋರ್ಬಗಾನ್ನ ಜನಪ್ರಿಯ ದುರ್ಗಾಪೂಜೆ ಪೆಂಡಾಲ್ನಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ…
ದಕ್ಷಿಣ ಕನ್ನಡ: ಜಿಲ್ಲೆಯ ಪುತ್ತೂರು ತಾಲೂಕಿನ ಪಾಣಾಜೆಯಲ್ಲಿ ಭಾರೀ ಮಳೆಯಾಗಿದ್ದು, ರಾಜ್ಯದಲ್ಲೇ ಅತ್ಯಧಿಕ 16.7 ಸೆಂಟಿಮೀಟರ್ ಮಳೆ ದಾಖಲಾಗಿದೆ. ಶನಿವಾರ…
ಗುಂಡ್ಲುಪೇಟೆ: ಅಕ್ರಮವಾಗಿ ಕೇರಳ ಲಾಟರಿ ಟಿಕೆಟ್ಗಳನ್ನು ಮಾರಾಟ ಮಾಡುತ್ತಿದ್ದ ವ್ಯಕ್ತಿಯೊಬ್ಬರನ್ನು ಗುಂಡ್ಲುಪೇಟೆ ಠಾಣೆ ಪೊಲೀಸರು ಬಂಧಿಸಿ, ಲಾಟರಿ ಟೆಕೆಟ್ಗಳನ್ನು ವಶಕ್ಕೆ…
ಮೈಸೂರು: ಇಲ್ಲಿನ ಜೆಕೆ ಮೈದಾನದಲ್ಲಿ ಆಯೋಜಿಸಿರುವ ಶ್ವಾನ ಪ್ರದರ್ಶನವು ಶ್ವಾನಪ್ರಿಯರ ಗಮನ ಸೆಳೆಯುತ್ತಿದೆ. ಪ್ರದರ್ಶನದಲ್ಲಿ 50ಕ್ಕೂ ಹೆಚ್ಚು ತಳಿಗಳ ಸಾವಿರಕ್ಕೂ…
ಮೈಸೂರು: ದಸರಾದ ಏರ್ ಶೋ ವೀಕ್ಷಿಸಲು ಕಾತುರದಿಂದ ಕಾಯುತ್ತಿದ್ದ ಸಾವಿರಾರು ಪ್ರೇಕ್ಷಕರಿಗೆ ಹವಾಮಾನ ವೈಪರೀತ್ಯ ನಿರಾಸೆ ಉಂಟುಮಾಡಿದೆ. ಭಾರತೀಯ ವಾಯುಪಡೆಯ…
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರು ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಇತ್ತೀಚೆಗೆ ಪತ್ರಿಕಾಗೋಷ್ಠಿಯಲ್ಲಿ ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ಏಕವಚನ…