ಮೈಸೂರು

ಲೋಕ ಸಮರ 2024: ಮೈಸೂರು-ಕೊಡಗು ಕ್ಷೇತ್ರದ ಮತದಾನಕ್ಕೆ ಜಿಲ್ಲಾಡಳಿದಿಂದ ಸಿದ್ಧತೆ!

ಮೈಸೂರು: ರಾಜ್ಯದಲ್ಲಿ ನಾಳೆ (ಏ. 26) ರಂದು ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಒಟ್ಟು 14 ಕ್ಷೇತ್ರಗಳು ಸಕಲ ಸಿದ್ದತೆ ಮಾಡಿಕೊಂಡಿವೆ. ಅದರಲ್ಲೂ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಜಿಲ್ಲಾಡಳಿತ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ.

ಮೈಸೂರು-ಕೊಡಗು ಕ್ಷೇತ್ರದಲ್ಲಿ ಶುಕ್ರವಾರ ಬೆಳ್ಳಿಗೆ 7ರಿಂದ ಸಂಜೆ 6 ವರೆಗೆ ಮತದಾನ ನಡೆಯಲಿದ್ದು, ಒಟ್ಟು 20,92,222 ಮಂದಿ ಮತದಾರರಿದ್ದಾರೆ. ಇದರಲ್ಲಿ ಪುರುಷರು 10,26,324ಇದ್ದರೇ, ಮಹಿಳಾ ಮತದಾರರು 10,65,714ಇದ್ದಾರೆ. ಇತರರು 184 ಮಂದಿ ಈ ಬಾರಿ ಮತದಾನದಲ್ಲಿ ಭಾಗವಹಿಸಲಿದ್ದಾರೆ. ಕ್ಷೇತ್ರದಾದ್ಯಂತ ಒಟ್ಟು 2202 ಮತಗಟ್ಟೆಗಳ ಸ್ಥಾಪನೆ ಮಾಡಲಾಗಿದ್ದು, ಅದರಲ್ಲಿ 435 ಸೂಕ್ಷ್ಮ ಮತಗಟ್ಟೆಗಳನ್ನು ಗುರತಿಸಲಾಗಿದೆ. ಒಟ್ಟು 9809 ಮಂದಿ ಮತಗಟ್ಟೆ ಸಿಬ್ಬಂದಿಗಳನ್ನು ಸಹಾ ನೇಮಕ ಮಾಡಲಾಗಿದೆ.

ಇನ್ನು ಮಾಸ್ಟರಿಂಗ್‌ ನಂತರ ವಿವಿಧ ಮತಗಟ್ಟೆಗಳಿಗೆ ತೆರಳಲು 473 ಕೆಎಸ್‌ಆರ್‌ಟಿಸಿ ಬಸ್‌ಗಳು, 33 ಜೀಪ್‌ಗಳು ಮತ್ತು 79 ಮಿನಿ ಬಸ್‌ಗಳನ್ನು ನೇಮಿಸಲಾಗಿದೆ. ವಿಕಲ ಚೇತನರಿಗೆ ನೇರ ಮತಗಟ್ಟೆ ಪ್ರವೇಶ, ಮತಗಟ್ಟೆಯಲ್ಲಿ ಪ್ರಥಮ ಚಿಕಿತ್ಸೆಯ ಮೆಡಿಕಿಟ್‌ ಹಾಗೂ ನೀರು ಸರಬರಾಜು ಸೇರಿದಂತೆ ಎಲ್ಲಾ ಅಗತ್ಯ ಕ್ರಮಗಳನ್ನು ಜಿಲ್ಲಾಡಳಿತ ಕೈಗೊಂಡಿದೆ.

ವಾಸು ವಿ ಹೊಂಗನೂರು

ಮೂಲತಃ ಚಾಮರಾಜನಗರ ಜಿಲ್ಲೆಯ ಹೊಂಗನೂರು ಗ್ರಾಮದವನಾದ ನಾನು ಒಂದು ದಶಕದಿಂದ ಮೈಸೂರಿನಲ್ಲಿ ನೆಲೆಸಿದ್ದೇನೆ. ಪದವಿಯಲ್ಲಿ ಪತ್ರಿಕೋದ್ಯಮ ವಿಭಾಗ ಆಯ್ದುಕೊಂಡು ಅಂದಿನಿಂದಲೇ ಹವ್ಯಾಸಿ ಪತ್ರಕರ್ತನಾಗಿ ವೃತ್ತಿ ಆರಿಸಿಕೊಂಡೆ. ಮೈಸೂರು ವಿಶ್ವವಿದ್ಯಾನಿಲಯದಲ್ಲಿ 2020ರಲ್ಲಿ ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದೆ. ಪತ್ರಿಕೋದ್ಯಮದಲ್ಲಿ 3 ವರ್ಷಗಳ ಅನುಭವವಿದ್ದು, ಕಳೆದ ಒಂದು ವರ್ಷದಿಂದ ಆಂದೋಲನ ದಿನಪತ್ರಿಕೆಯಲ್ಲಿ ವರದಿಗಾರನಾಗಿ ಕೆಲಸ ಮಾಡುತ್ತಿದ್ದೇನೆ. ಕಳೆದ 6 ತಿಂಗಳಿನಿಂದ ಆಂದೋಲನ ಡಿಜಿಟಲ್‌ ವಿಭಾಗದಲ್ಲಿ ತೊಡಗಿಸಿಕೊಂಡಿದ್ದೇನೆ. ಕ್ರಿಕೆಟ್‌ ಮೇಲೆ ಎಲ್ಲಿಲ್ಲದ ಪ್ರೀತಿಯಿದ್ದು, ಪ್ರವಾಸ, ಇತಿಹಾಸ ಅಧ್ಯಯನ ಕಡೆ ಒಲವು ಹೆಚ್ಚು. ಪತ್ರಿಕಾ ರಂಗದಲ್ಲಿ ಕ್ರೀಡಾ ವಿಭಾಗದಲ್ಲಿ ಹೆಚ್ಚು ಆಸಕ್ತಿ ಇದೆ‌. ಮೊಬೈಲ್‌ ನಂಬರ್:‌ 9620318288

Recent Posts

ಗಾಂಧಿ ಅಭಿಯಾನ ಅರಿವಿನ ಯಾನ | ಭಾಷೆ, ಬದುಕು ಕಲಿಸಿದ ನನ್ನಪ್ಪ

ಸಂತೋಷ ಕೌಲಗಿ ಒಬ್ಬ ವ್ಯಕ್ತಿಯ ಜೀವನದಲ್ಲಿ ಅವನ ತಂದೆಯ ಪಾತ್ರ ಬಹಳ ದೊಡ್ಡದು. ಒಬ್ಬ ಆದರ್ಶ ಮನೋಭಾವದ, ಮಕ್ಕಳನ್ನು ಸಮಾನವಾಗಿ…

2 hours ago

ಗಾಂಧಿ ಅಭಿಯಾನ ಅರಿವಿನ ಯಾನ | ಮತಗಳ ಪರಿಚಯ

ನಾನು ಇಂಗ್ಲೆಂಡಿಗೆ ಹೋದ ಎರಡನೆಯ ವರ್ಷದ ಕೊನೆಯಲ್ಲಿ ನನಗೆ ಇಬ್ಬರು ಥಿಯಾಸಫಿಸ್ಟರ ಪರಿಚಯವಾಯಿತು. ಅವರಿಬ್ಬರೂ ಅಣ್ಣ ತಮ್ಮಂದಿರು ಮತ್ತು ಅವಿವಾಹಿತರು.…

3 hours ago

ರೆಟ್ರೋ ಫೋಟೋಗಳ ಹೊಸ ಅಲೆ

ಹಳೆಯ ನೆನಪು, ಹೊಸ ತಂತ್ರಜ್ಞಾನ ೧೯೭೦-೮೦ರ ದಶಕದ ರೂಪದಲ್ಲಿ ಹೊಸ ತಲೆಮಾರು -ಡಾ.ಎಂ.ಲೋಕೇಶ ಒಮ್ಮೆ ಯೋಚಿಸಿ ನೋಡಿ... ಇಂದು ತೆಗೆದ…

3 hours ago

ಮಹಾಪಂಚ್‌ ಕಾರ್ಟೂನ್‌

  ಮಹಾಪಂಚ್‌ ಕಾರ್ಟೂನ್‌ | ಸೆಪ್ಟಂಬರ್‌ 12 ಶನಿವಾರ

3 hours ago

ಒಳ್ಳೆಯತನಕ್ಕೂ ಕೆಟ್ಟತನಕ್ಕೂ ಜಾತಿ ಮಾನದಂಡ ಅಲ್ಲ

ಜಾತಿ ಯಾವುದು?" - ಒಂದು ಪ್ರಶ್ನೆಯ ಹಿಂದೆ ಅಡಗಿರುವ ಮನಸ್ಥಿತಿ ಟಿ.ಕೆ.ಹರೀಶ್ ನೀವು ಯಾವ ಜಾತಿ?... ಪರಿಚಯವಾದ ಕೆಲವೇ ಕ್ಷಣಗಳಲ್ಲಿ…

3 hours ago

ಓದುಗರ ಪತ್ರ | ‘ಅಕ್ಕ’ ಸಮ್ಮೇಳನದಲ್ಲೂ ‘ನಂದಿನಿ’ ಮಿಂಚಿಂಗ್!

ಸೆಪ್ಟೆಂಬರ್ ೪, ೫, ೬ ರಂದು ಅಮೆರಿಕಾದ ಫಿಲಡೆಲಿಯಾದಲ್ಲಿ ನಡೆದ ‘ಅಕ್ಕ’ ಸಮ್ಮೇಳನದಲ್ಲೂ ಕನ್ನಡಿಗರ ಹೆಮ್ಮೆ ನಂದಿನಿ ಅಂಗಡಿ ಇದ್ದದ್ದು…

3 hours ago