Mysore
35
few clouds

Social Media

ಬುಧವಾರ, 08 ಏಪ್ರಿಲ 2026
Light
Dark

ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತ: ಜೆಸಿಬಿ ಕಾರ್ಯ ಸ್ಥಗಿತ

ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್‌ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ.

ವರುಣ ಕ್ಷೇತ್ರದ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್‌ ಆಸ್ಪತ್ರೆ ನಿರ್ಮಾಣ ಮಾಡಲು ಇಂದು ಬೆಳಿಗ್ಗೆಯಿಂದಲೂ ಜೆಸಿಬಿಯು ಕೃಷಿ ಭೂಮಿ ಅಗೆಯುವ ಕಾರ್ಯದಲ್ಲಿ ತೊಡಗಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ರೈತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.

ಸುಮಾರು 40-50 ವರ್ಷಗಳಿಂದ ಕೃಷಿ ಮಾಡುತ್ತ ಬಂದಿರುವ ರೈತರೆಲ್ಲಾ ಜಿಲ್ಲಾಡಳಿತದ ನಿರ್ಧಾರಕ್ಕೆ ರೊಚ್ಚಿಗೆದ್ದಿದ್ದರು. ಕೆಲಸ ಮಾಡುತ್ತಿದ್ದ ಜೆಸಿಬಿ ಮೇಲೆಯೇ ಏರಿದ ಅನ್ನದಾತರು ಯಾವುದೇ ಕಾರಣಕ್ಕೂ ಕೃಷಿ ಭೂಮಿ ಅಗೆಯಲು ಬಿಡಲ್ಲ ಎಂದು ಪಟ್ಟು ಹಿಡಿದಿದ್ದರು.

ಈ ಹಿನ್ನೆಲೆಯಲ್ಲಿ ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತವು ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.

Tags:
error: Content is protected !!