ಮೈಸೂರು: ವರುಣ ಕ್ಷೇತ್ರದ ಕೃಷಿ ಭೂಮಿಯಲ್ಲಿ ನಿಮ್ಹಾನ್ಸ್ ನಿರ್ಮಾಣ ವಿಚಾರಕ್ಕೆ ಸಂಬಂಧಿಸಿದಂತೆ ರೈತರಿಂದ ಪ್ರತಿಭಟನೆ ಜೋರಾದ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಗುಡುಮಾದನಹಳ್ಳಿಯಲ್ಲಿ ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ.
ವರುಣ ಕ್ಷೇತ್ರದ ಗುಡುಮಾದನಹಳ್ಳಿಯಲ್ಲಿ ನಿಮ್ಹಾನ್ಸ್ ಆಸ್ಪತ್ರೆ ನಿರ್ಮಾಣ ಮಾಡಲು ಇಂದು ಬೆಳಿಗ್ಗೆಯಿಂದಲೂ ಜೆಸಿಬಿಯು ಕೃಷಿ ಭೂಮಿ ಅಗೆಯುವ ಕಾರ್ಯದಲ್ಲಿ ತೊಡಗಿತ್ತು. ವಿಷಯ ಗೊತ್ತಾಗುತ್ತಿದ್ದಂತೆ ಸ್ಥಳಕ್ಕೆ ಜಮಾಯಿಸಿದ ರೈತರು ಪ್ರತಿಭಟನೆ ನಡೆಸಿ ರಾಜ್ಯ ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ವಿವಿಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದ್ದರು.
ಸುಮಾರು 40-50 ವರ್ಷಗಳಿಂದ ಕೃಷಿ ಮಾಡುತ್ತ ಬಂದಿರುವ ರೈತರೆಲ್ಲಾ ಜಿಲ್ಲಾಡಳಿತದ ನಿರ್ಧಾರಕ್ಕೆ ರೊಚ್ಚಿಗೆದ್ದಿದ್ದರು. ಕೆಲಸ ಮಾಡುತ್ತಿದ್ದ ಜೆಸಿಬಿ ಮೇಲೆಯೇ ಏರಿದ ಅನ್ನದಾತರು ಯಾವುದೇ ಕಾರಣಕ್ಕೂ ಕೃಷಿ ಭೂಮಿ ಅಗೆಯಲು ಬಿಡಲ್ಲ ಎಂದು ಪಟ್ಟು ಹಿಡಿದಿದ್ದರು.
ಈ ಹಿನ್ನೆಲೆಯಲ್ಲಿ ರೈತರ ಪ್ರತಿಭಟನೆಗೆ ಮಣಿದ ಜಿಲ್ಲಾಡಳಿತವು ಜೆಸಿಬಿ ಕಾರ್ಯವನ್ನು ಸ್ಥಗಿತಗೊಳಿಸಿದೆ ಎಂಬ ಮಾಹಿತಿ ಲಭ್ಯವಾಗಿದೆ.
ಮಡಿಕೇರಿ: ಮದುವೆ ಆದ ಬಳಿಕ ತವರಿಗೆ ಆಗಮಿಸಿದ ರಶ್ಮಿಕಾ ಮಂದಣ್ಣ ಕೊಡಗಿನಲ್ಲಿ ತಮ್ಮ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸಿಕೊಂಡಿದ್ದಾರೆ. ಹುಟ್ಟುಹಬ್ಬದ ಅಂಗವಾಗಿ…
ಬೆಂಗಳೂರು: ಸಮುದಾಯವೊಂದರ ಮೀಸಲಾತಿಗಾಗಿ ರಾಜ್ಯಾದ್ಯಂತ ಹೋರಾಟ ನಡೆಸಿ ಸರ್ಕಾರಕ್ಕೆ ಸೆಡ್ಡು ಹೊಡೆದಿದ್ದ ಕೂಡಲಸಂಗಮ ಪಂಚಮಸಾಲಿ ಪೀಠದ ಶ್ರೀ ಬಸವ ಜಯಮೃತ್ಯುಂಜಯ…
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ -1 ಫಲಿತಾಂಶದ ದಿನಾಂಕ ಪ್ರಕಟಣೆ ಗೊಂದಲಕ್ಕೆ ತೆರೆ ಬಿದ್ದಿದ್ದು, ಕರ್ನಾಟಕ ಪರೀಕ್ಷಾ ಮಂಡಳಿಯು ಇದೇ…
ಬೆಂಗಳೂರು: ರಾಜ್ಯ ಸಾರಿಗೆ ನೌಕರರು ಸರ್ಕಾರದ ವಿರುದ್ಧ ಸೆಡ್ಡು ಹೊಡೆದಿದ್ದು, ಮತ್ತೆ ಪ್ರತಿಭಟನೆ, ಹೋರಾಟಕ್ಕೆ ಮುಂದಾಗಿದ್ದಾರೆ. 38 ತಿಂಗಳ ವೇತನ…
ಮೈಸೂರು: ಪಿಡಬ್ಲ್ಯೂಡಿ ಅಧಿಕಾರಿ ಜಿ.ಕೆ.ರೇವನ್ ಕುಮಾರ್ ಮನೆ ಹಾಗೂ ಕಚೇರಿಗೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ. ಬಂದರು ಮತ್ತು ಒಳನಾಡಿನ…
ಬೆಂಗಳೂರು: ಬೆಂಗಳೂರು ಸೇರಿದಂತೆ ರಾಜ್ಯದ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯ ಅಬ್ಬರ ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.…