ಮೈಸೂರು

ದೀಪಾಲಂಕಾರ ಮತ್ತು ಡ್ರೋನ್‌ ಶೋ ಸಿದ್ಧತೆ ಪರಿಶೀಲಿಸಿದ ಜಿಲ್ಲಾಧಿಕಾರಿ

* ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ

* ಸೆಸ್ಕ್‌ ಅಧಿಕಾರಿಗಳೊಂದಿಗೆ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆ 

ಮೈಸೂರು : ವಿಶ್ವವಿಖ್ಯಾತ ನಾಡಹಬ್ಬ ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾದ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನವನ್ನು ಸೆ.28 ಮತ್ತು 29ರಂದು ನಡೆಸಲು ಸಮಯ ನಿಗದಿಪಡಿಸಿದ ಜಿಲ್ಲಾಧಿಕಾರಿ ಲಕ್ಷ್ಮೀಕಾಂತ ರೆಡ್ಡಿ ಅವರು, ದಸರಾ ವಿದ್ಯುತ್‌ ದೀಪಾಲಂಕಾರ ಹಾಗೂ ಡ್ರೋನ್‌ ಶೋ ಕಾರ್ಯಕ್ರಮ ಯಶಸ್ವಿಯಾಗಿ ನಡೆಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವಂತೆ ಚಾಮುಂಡೇಶ್ವರಿ ವಿದ್ಯುತ್‌ ಸರಬರಾಜು ನಿಗಮ ನಿಯಮಿತ(ಸೆಸ್ಕ್‌)ದ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ದಸರಾ ಮಹೋತ್ಸವದ ವಿದ್ಯುತ್‌ ದೀಪಾಲಂಕಾರಕ್ಕೆ ಸಂಬಂಧಿಸಿದಂತೆ ವಿಜಯನಗರ 2ನೇ ಹಂತದಲ್ಲಿರುವ ನಿಗಮದ ಪ್ರಧಾನ ಕಚೇರಿಯಲ್ಲಿ ಶುಕ್ರವಾರ ನಡೆದ ಪೂರ್ವಭಾವಿ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

“ನಗರದ ಬನ್ನಿಮಂಟಪದ ಪಂಜಿನ ಕವಾಯತು ಮೈದಾನದಲ್ಲಿ ಈ ಬಾರಿ ಏರ್‌ ಶೋ ಸಹ ನಡೆಯಲಿದೆ. ಇದರ ನಡುವೆ ಡ್ರೋನ್‌ ಶೋ ನಡೆಸಬೇಕಿದೆ. ಅಲ್ಲದೆ, ಪಂಜಿನ ಕವಾಯತು ಕಾರ್ಯಕ್ರಮದ ತಾಲೀಮು ಸಹ ನಡೆಯುವ ಹಿನ್ನೆಲೆಯಲ್ಲಿ ಯಾವುದೇ ಅಡಚಣೆ ಆಗದಂತೆ ಮೂರು ಕಾರ್ಯಕ್ರಮಗಳನ್ನು ನಡೆಸಬೇಕಾಗಿದೆ. ಈ ಹಿನ್ನೆಲೆಯಲ್ಲಿ ಸೆ.28 ಮತ್ತು 29ರಂದು ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ನಡೆಸುವುದು ಸೂಕ್ತವಾದ ದಿನಾಂಕವಾಗಿದೆ” ಎಂದರು.

“ಡ್ರೋನ್‌ ಶೋ ಹಾಗೂ ಇನ್ನಿತರ ಕಾರ್ಯಕ್ರಮಗಳಿಗೆ ಅಗತ್ಯವಿರುವ ಧ್ವನಿ ಮತ್ತು ಬೆಳಕಿನ ವ್ಯವಸ್ಥೆಯನ್ನು ಎಂಡಿಎ ವತಿಯಿಂದ ಮಾಡಿಕೊಳ್ಳಬೇಕಿದೆ. ಇದರೊಂದಿಗೆ ಸಂಗೀತ ಸಂಜೆ ಮತ್ತು ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಂಡಿಎ ವತಿಯಿಂದ ನಡೆಸಲು ಕ್ರಮವಹಿಸಬೇಕಿದೆ” ಎಂದು ತಿಳಿಸಿದರು.

ಸಭೆಯ ಆರಂಭದಲ್ಲಿ ಮಾತನಾಡಿದ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್‌ ರಾಜು ಅವರು, ದಸರಾ ಮಹೋತ್ಸವದ ಅಂಗವಾಗಿ ನಗರದ ಪ್ರಮುಖ ವೃತ್ತ, ರಸ್ತೆಗಳು ಹಾಗೂ ಇನ್ನಿತರ ಸ್ಥಳಗಳಲ್ಲಿ ಮಾಡಲಾಗುವ ದಸರಾ ದೀಪಾಲಂಕಾರದ ವಿನ್ಯಾಸ, ವಿವಿಧ ಬಗೆಯ ಕಲಾಕೃತಿಗಳನ್ನು ನಿರ್ಮಿಸಿರುವ ಕುರಿತಂತೆ ಮಾಹಿತಿ ನೀಡಿದರು.

“ಸೆ.28 ಮತ್ತು 29ರಂದು ನಡೆಯುವ ಡ್ರೋನ್‌ ಶೋ ಪ್ರಾಯೋಗಿಕ ಪ್ರದರ್ಶನ ಹಾಗೂ ಅ.1 ಮತ್ತು 2ರಂದು ಡ್ರೋನ್‌ ಶೋ ಪ್ರಮುಖ ಪ್ರದರ್ಶನ ನಡೆಯಲಿದೆ. ಡ್ರೋನ್‌ ಶೋ ಜತೆಗೆ ಖ್ಯಾತ ಗಾಯಕರಿಂದ ಸಂಗೀತ ಸಂಜೆ ನಡೆಸಲು ಚಿಂತನೆ ನಡೆಸಲಾಗಿದೆ” ಎಂದು ತಿಳಿಸಿದರು.

ಸಭೆಯಲ್ಲಿ ಎಂಡಿಎ ಆಯುಕ್ತ ರಕ್ಷಿತ್‌, ನಿಗಮದ ತಾಂತ್ರಿಕ ನಿರ್ದೇಶಕ ಡಿ.ಜೆ. ದಿವಾಕರ್‌, ಮೈಸೂರು ವೃತ್ತದ ಅಧೀಕ್ಷಕ ಇಂಜಿನಿಯರ್‌ ಸುನೀಲ್‌, ಪ್ರಧಾನ ವ್ಯವಸ್ಥಾಪಕ ಎಲ್‌. ಲೋಕೇಶ್‌ ಸೇರಿದಂತೆ ಪ್ರಮುಖ ಅಧಿಕಾರಿಗಳು ಇದ್ದರು.

ಆಂದೋಲನ ಡೆಸ್ಕ್

Recent Posts

ಪೊಲೀಸರ ಮೇಲೆ ಹಲ್ಲೆ: 20 ಜನರ ವಿರುದ್ಧ ಕೇಸ್‌ ದಾಖಲು

ನವದೆಹಲಿ: ಮುಖ್ಯ ಚುನಾವಾಣಾ ಆಯುಕ್ತ ಜ್ಞಾನೇಶ್‌ ಕುಮಾರ್‌ ರಾಜೀನಾಮೆಗೆ ಆಗ್ರಹಿಸಿ ಸಿಜೆಪಿ ನಿನ್ನೆ ಬೃಹತ್‌ ಪ್ರತಿಭಟನೆಗೆ ಕರೆ ನೀಡಿತ್ತು. ಈ…

2 hours ago

ದೇವಿ ಕೃಪೆ ಜನರ ಮೇಲಿರಲಿ, ಜನರ ಕೃಪೆ ನಮ್ಮ ಸರ್ಕಾರದ ಮೇಲಿರಲಿ: ಸಿಎಂ ಡಿಕೆಶಿ

ಮೈಸೂರು:  ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಈ ಹಿನ್ನೆಲೆಯಲ್ಲಿ ಮಾತನಾಡಿರುವ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌, ದೇವಿಯ ಕೃಪೆ…

4 hours ago

ದಸರಾ ಉದ್ಘಾಟಿಸುವಷ್ಟು ದೊಡ್ಡವನು ನಾನಲ್ಲ: ಗವಿಸಿದ್ದೇಶ್ವರ ಶ್ರೀ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಉದ್ಘಾಟನಾ ಕಾರ್ಯಕ್ರಮದಲ್ಲಿ ಕೊಪ್ಪಳದ ಗವಿಮಠದ ಶ್ರೀ ಅಭಿನವ ಗವಿಸಿದ್ದೇಶ್ವರ ಸ್ವಾಮೀಜಿ ವಿನಮ್ರ ಮಾತುಗಳನ್ನಾಡಿದ್ದಾರೆ. “ದಸರಾ…

4 hours ago

ಮನಸೆಳೆವ ಫಲ ಪುಷ್ಪ ಪ್ರದರ್ಶನ

ಪ್ರಕೃತಿಯೊಂದಿಗೆ ನಂಟನ್ನು ನೆನಪಿಸುವ ಒಂದು ಸುಂದರ ಪಯಣ. 15 ಎಕರೆ ವಿಸ್ತೀರ್ಣ, 70 ಸಸ್ಯಶಾಸ್ತ್ರೀಯ ಜಾತಿಯ 327ಕ್ಕೂ ಹೆಚ್ಚಿನ ವೈವಿಧ್ಯಮಯ…

5 hours ago

ಮೈಸೂರು ದಸರಾ ಮಹೋತ್ಸವಕ್ಕೆ ಅಧಿಕೃತ ಚಾಲನೆ

ಮೈಸೂರು: ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಅದ್ಧೂರಿ ಚಾಲನೆ ಸಿಕ್ಕಿದೆ. ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯುತ್ತಿರುವ 416ನೇ ನಾಡಹಬ್ಬ ದಸರಾ…

6 hours ago

ಓದುಗರ ಪತ್ರ: ಬಳಸಿದ ಅಡುಗೆ ಎಣ್ಣೆ: ಯೋಜನೆ ಪ್ರಶಂಸನೀಯ

ಬಳಸಿದ ಅಡುಗೆ ಎಣ್ಣೆಯನ್ನು ಸರಕಾರವೇ ಸಂಗ್ರಹಿಸಿ ಜೈವಿಕ ಇಂಧನವಾಗಿ (ಬಯೋಡೀಸೆಲ) ಪರಿವರ್ತಿಸುವ ಯೋಜನೆ ಪ್ರಶಂಸನೀಯ. ಪುನರಾವರ್ತಿತ ಎಣ್ಣೆ ಬಳಕೆಯಿಂದ ಹೊರಹೊಮ್ಮುವ…

7 hours ago