ಪ್ರಶಾಂತ್ ಎಸ್ ಮೈಸೂರು.
ಮೈಸೂರು: ಕಳೆದ ಎರಡು ವರ್ಷಗಳಿಂದ ಕೋವಿಡ್ ಹಿನ್ನೆಲೆಯಲ್ಲಿ ಮಂದವಾಗಿದ್ದ ಬೆಳಕಿನ ಹಬ್ಬ ದೀಪಾವಳಿ ಈ ಬಾರಿ ಜನರ ಸಡಗರಕ್ಕೆ ವೇದಿಕೆಯಾಗಿ ಪರಿಣಮಿಸಿದೆ.
ಜನರು ಉತ್ಸಾಹದಿಂದ ಅಗತ್ಯ ವಸ್ತುಗಳ ಖರೀದಿಯತ್ತ ಆಸಕ್ತಿ ತೋರಿದ್ದಾರೆ. ಹೊಸ ಬಟ್ಟೆ, ಹೂ, ಹಣ್ಣು, ಪಟಾಕಿ ಸೇರಿ ಇತರೆ ವಸ್ತುಗಳ ಖರೀದಿ ಭರಾಟೆ ಜೋರಾಗಿತ್ತು. ಹಿಂದೂಗಳು ವಿಜೃಂಭಣೆಯಿಂದ ಆಚರಿಸುವ ಈ ಹಬ್ಬದ ನಿಮಿತ್ತ ಆಕಾಶಬುಟ್ಟಿ, ಬಾಳೆ-ಕಬ್ಬು, ಚೆಂಡು ಹೂ, ಸೇವಂತಿಗೆ, ಕಾಕಡ ಮುಂತಾದ ಹೂಗಳ ಖರೀದಿಗೆ ಜನ ಮುಗಿಬಿದ್ದಿದ್ದರು. ಕಳೆದ ವರ್ಷಕ್ಕಿಂತ ಈ ಬಾರಿ ಬೆಳಕಿನ ಹಬ್ಬಕ್ಕೆ ಕಳೆ ಬಂದಿದೆ.
ಎಲ್ಲೆಲ್ಲೂ ಜನಜಂಗುಳಿ: ಬೆಳಕಿನ ಹಬ್ಬದ ನಿಮಿತ್ತ ನಗರದ ಗಾಂಧಿಚೌಕ, ಅಗ್ರಹಾರ , ಕೆ.ಆರ್. ಸರ್ಕಲ್, ಚಿಕ್ಕ ಗಡಿಯಾರ ವೃತ್ತ, ಸೇರಿ ನಾನಾ ಕಡೆ ಹೂವಿನ ವ್ಯಾಪಾರ, ಹಣ್ಣು, ತರಕಾರಿ ಹಾಗೂ ಬಾಳೆ ಎಲೆ, ಕಂದುಗಳ ವ್ಯಾಪಾರ ಜೋರಾಗಿತ್ತು. ನಗರದ ಟೌನ್‌ಹಾಲ್ ಸೇರಿದಂತೆ ನಾನಾ ಕಡೆ ಪಟಾಕಿ ಅಂಗಡಿಗಳ ಮುಂದೆ ಗ್ರಾಹಕರು ಸಾಲುಗಟ್ಟಿ ನಿಂತು ನಾನಾ ರೀತಿಯ ಸಿಡಿಮದ್ದು ಹಾಗೂ ಮಣ್ಣಿನ ದೀಪ ಕೊಂಡುಕೊಳ್ಳುವ ದೃಶ್ಯ ಕಂಡುಬಂತು.
ಪಟಾಕಿ ಖರೀದಿ ಜೋರು : ಬೆಳಕಿನ ಹಬ್ಬ ದೀಪಾವಳಿ ಸಂಭ್ರಮ ಎಲ್ಲೆಡೆ ಮನೆ ಮಾಡಿದ್ದು, ಜಿಲ್ಲೆಯಲ್ಲಿ ಪಟಾಕಿ ಖರೀದಿಯೂ ಜೋರಾಗಿದೆ. ನಗರ ಸೇರಿದಂತೆ ಜಿಲ್ಲಾದ್ಯಂತ ದೀಪಾವಳಿ ಹಬ್ಬಕ್ಕೆ ಪಟಾಕಿ ಖರೀದಿ ಭರಾಟೆ ಈಗಾಗಲೇ ಆರಂಭವಾಗಿದ್ದು, ಇದು ಪಟಾಕಿ ವರ್ತಕರನ್ನು ಕೊಂಚ ನೆಮ್ಮದಿಯ ನಿಟ್ಟುಸಿರು ಬಿಡುವಂತೆ ಮಾಡಿದೆ.
ನಗರದ ಪುರಭವನ ಮೈದಾನದಲ್ಲಿ ಪಟಾಕಿ ಮಳಿಗೆಗಳನ್ನು ಹಾಕಲಾಗಿದ್ದು, ವ್ಯಾಪಾರದಲ್ಲಿ ಸ್ವಲ್ಪ ಸುಧಾರಣೆ ಕಂಡಿದೆ. ಒಂದೊಂದು ಮಳಿಗೆಗಳಲ್ಲಿ ವಿವಿಧ ಬಗೆಯ ಪಟಾಕಿಗಳು ಸುರಸುರ ಬತ್ತಿ, ಹೂವಿನ ಬತ್ತಿ, ಚಕ್ಕರ್, ಮಿರ್ಚಿ ಪಟಾಕಿ, ಆಕಾಶ ಬಾಣ ಹಾಗೂ ಇತರೆ ಪಟಾಕಿಗಳಿದ್ದವು. ಪಟಾಕಿಯ ಬೆಲೆ ಕಡಿಮೆ ಮಾಡುವವರ ಬಳಿ ಜನರು ಹೆಚ್ಚಾಗಿ ಹೋಗುತ್ತಿದ್ದರು. ನೂರಕ್ಕೂ ಹೆಚ್ಚು ಅಧಿಕ ಬೆಲೆಯ ಪಟಾಕಿಗಳನ್ನು ಜನರು ಖರೀದಿಸುತ್ತಿದ್ದರು. ಯಾವುದೇ ಅನಾಹುತ ಆಗದಂತೆ ಮಳಿಗೆಗಳಲ್ಲಿ ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದಾರೆ.
ಭೋಪಾಲ್ : ಇಂದೋರ್‌ನ ಭಗೀರಥಪುರದಲ್ಲಿ ಕಲುಷಿತ ಕುಡಿಯುವ ನೀರು ಸೇವನೆಯಿಂದ 11 ಜೀವಗಳು ಬಲಿಯಾಗಿವೆ. ಮತ್ತು 1400ಕ್ಕೂ ಹೆಚ್ಚು ನಿವಾಸಿಗಳ…
ಬೆಂಗಳೂರು : ಬ್ಯಾನರ್ ಕಟ್ಟುವ ವಿಷಯದಲ್ಲಿ ಕಳೆದ ರಾತ್ರಿ ಬಳ್ಳಾರಿ ನಗರದಲ್ಲಿ ನಡೆದ ಘಟನೆಯ ಕುರಿತು ಉಚ್ಚ ನ್ಯಾಯಾಲಯದ ಹಾಲಿ…
ಬೆಂಗಳೂರು : ಬಳ್ಳಾರಿಯಲ್ಲಿ ಗುರುವಾರ ರಾತ್ರಿ ವಾಲ್ಮೀಕಿ ಬ್ಯಾನರ್ ವಿಚಾರದಲ್ಲಿ ನಡೆದ ಎರಡು ಗುಂಪುಗಳ ಘರ್ಷಣೆ ವೇಳೆ ಫೈರಿಂಗ್ ಆಗಿ…
ಬೆಂಗಳೂರು : ಬಾಲಗಂಗಾಧರನಾಥ ಶ್ರೀಗಳ ಧಾರ್ಮಿಕ ಗದ್ದುಗೆ ಲೋಕಾರ್ಪಣೆ ಹಾಗೂ ಡಾ.ನಿರ್ಮಲಾನಂದನಾಥ ಶ್ರೀಗಳ ವಾರ್ಷಿಕ ಪಟ್ಟಾಭಿಷೇಕದಲ್ಲಿ ಭಾಗಿಯಾಗಲು ಪ್ರಧಾನಿ ನರೇಂದ್ರ…
ಬೆಂಗಳೂರು : ಎಲ್ಲಾ ಅಧಿಕಾರಿಗಳು ಜಾತ್ಯಾತೀತ ದೃಷ್ಠಿಕೋನದಿಂದ ಕಾರ್ಯ ನಿರ್ವಹಿಸಬೇಕು. ಆಗಮಾತ್ರ ಸಮಸಮಾಜ ನಿರ್ಮಾಣ ಸಾಧ್ಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ…
ಬಳ್ಳಾರಿ : ವಾಲ್ಮೀಕಿ ಬ್ಯಾನರ್ ಅಳವಡಿಕೆ ವಿಚಾರದಲ್ಲಿ ಶಾಸಕ ಜನಾರ್ದನ ರೆಡ್ಡಿ ಮನೆ ಬಳಿ ಗುರುವಾರ ಸಂಜೆ ನಡೆದ ಘರ್ಷಣೆ…