ಮೈಸೂರು : ಬೆಳಕಿನ ಹಬ್ಬ ದೀಪಾವಳಿಯ ಸಂಭ್ರಮದ ನಡುವೆ ವಿದ್ಯುತ್ ಸುರಕ್ಷತಾ ಕ್ರಮಗಳನ್ನು ಅನುಸರಿಸುವಂತೆ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮ ನಿಯಮಿತ(ಸೆಸ್ಕ್) ಮನವಿ ಮಾಡಿದೆ.
ದೀಪಾವಳಿ ಹಬ್ಬದ ಆಚರಣೆಯ ಸಂದರ್ಭದಲ್ಲಿ ಅನೇಕರು ತಮ್ಮ ಮನೆ ಹಾಗೂ ಅಂಗಡಿಗಳಿಗೆ ವಿದ್ಯುತ್ ದೀಪಗಳಿಂದ ಅಲಂಕೃತಗೊಳಿಸುತ್ತಾರೆ. ಈ ಹಿನ್ನೆಲೆಯಲ್ಲಿ ಸಾರ್ವಜನಿಕರು ಸೀರಿಯಲ್ ಲೈಟ್‌ಗಳನ್ನು ಮತ್ತು ವಿದ್ಯುತ್ ತಂತಿಗಳನ್ನು ನೀರಿನಿಂದ ದೂರವಿರಿಸಬೇಕು. ಪ್ಲಗ್ ಪಾಯಿಂಟ್‌ಗಳಲ್ಲಿ ಅತಿಯಾದ ಲೋಡ್ ಹಾಕಬೇಡಿ, ಇದು ಶಾರ್ಟ್ ಸರ್ಕ್ಯೂಟ್ ಉಂಟಾಗುವ ಸಾಧ್ಯತೆ ಇರಲಿದೆ. ಹಣತೆ, ದೀಪಗಳನ್ನು ಕೇಬಲ್‌ಗಳು, ವಿದ್ಯುತ್ ತಂತಿಗಳು ಹಾಗೂ ಪ್ಲಗ್‌ಗಳಿಂದ ದೂರವಿರಿಸಿ.
ಇದನ್ನು ಓದಿ: ಚಾಮರಾಜನಗರ| ಮಲೆ ಮಹದೇಶ್ವರ ಬೆಟ್ಟದಲ್ಲಿ ದೀಪಾವಳಿ ಜಾತ್ರೆಯ ಸಂಭ್ರಮ
ಮುಖ್ಯವಾಗಿ ಪಟಾಕಿ ಹಚ್ಚುವ ಸಂದರ್ಭದಲ್ಲಿ ವಿದ್ಯುತ್ ಕಂಬಗಳು ಅಥವಾ ಟ್ರಾನ್ಸ್ ಫಾರ್ಮರ್‌ಗಳು ಇರುವ ಸ್ಥಳಗಳ ಬಗ್ಗೆ ನಿಗಾವಹಿಸಿ ಮತ್ತು ಇಂತಹ ಸ್ಥಳಗಳಲ್ಲಿ ಪಟಾಕಿ ಹಚ್ಚುವುದನ್ನು ತಪ್ಪಿಸಿ. ವಿದ್ಯುತ್ ಉಪಕರಣಗಳಿಂದ ಮಕ್ಕಳನ್ನು ದೂರವಿರಿಸಿ ಹಾಗೂ ಹಿರಿಯ ಸಮ್ಮುಖದಲ್ಲಿ ಪಟಾಕಿ ಹಚ್ಚುವ ಹಾಗೂ ದೀಪಗಳನ್ನು ಇರಿಸುವಂತೆ ಗಮನವಹಿಸಿ. ವಿದ್ಯುತ್ ಸಮಸ್ಯೆಗಳು ಅಥವಾ ಅವಘಡಗಳು ಸಂಭವಿಸಿದಲ್ಲಿ ಗ್ರಾಹಕ ಸಹಾಯವಾಣಿ 1912ಗೆ ಮಾಹಿತಿ ನೀಡಬೇಕಿದೆ. ಸೆಸ್ಕ್ ವತಿಯಿಂದ ನೀಡಿರುವ ಸುರಕ್ಷತಾ ಕ್ರಮಗಳನ್ನು ತಪ್ಪದೇ ಅನುಸರಿಸುವಂತೆ ಸೆಸ್ಕ್ ವ್ಯವಸ್ಥಾಪಕ ನಿರ್ದೇಶಕರಾದ ಕೆ.ಎಂ. ಮುನಿಗೋಪಾಲ್ ರಾಜು ಅವರು ಪತ್ರಿಕಾ ಪ್ರಕಟಣೆಯಲ್ಲಿ ಕೋರಿದ್ದಾರೆ.
ಪ್ರಶಾಂತ್ ಎನ್ ಮಲ್ಲಿಕ್ ಮೈಸೂರು: ಸುತ್ತೂರು ಜಾತ್ರೆ ವೇಳೆ ರಾತ್ರಿ ಗದ್ದೆಯಲ್ಲಿ ಮಲಗಿದ್ದ ವ್ಯಕ್ತಿಗಳ ಮೇಲೆ ಕಾರು ಹರಿದ ಪರಿಣಾಮ…
ಸಿದ್ದಾಪುರ: ವಿರಾಜಪೇಟೆ ರಸ್ತೆಯಲ್ಲಿರುವ ಎಸ್‌ವೈಎಸ್ ಕಾಫಿ ಅಂಗಡಿಯಲ್ಲಿ ನಡೆದ ನಗದು ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಸಿದ್ದಾಪುರ ಪೊಲೀಸರು ಕೇರಳ ಮೂಲದ…
ಮಹಾದೇಶ್ ಎಂ ಗೌಡ ಹನೂರು: ತಾಲ್ಲೂಕಿನ ಕೆವಿಎನ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಕಾಡಾನೆ ಲಗ್ಗೆ ಇಟ್ಟು ಅಪಾರ ಪ್ರಮಾಣದ ಬೆಳೆ…
ಬೆಂಗಳೂರು: ಕಾಲ್ತುಳಿತ ಪ್ರಕರಣದಿಂದಾಗಿ ಈ ಬಾರಿಯ ಬಹು ನಿರೀಕ್ಷಿತ ಇಂಡಿಯನ್ ಪ್ರೀಮಿಯರ್ ಲೀಗ್(ಐಪಿಎಲ್) ಪಂದ್ಯಗಳು ನಡುವುದೇ ಡೋಲಾಯಮಾನ ಸ್ಥಿತಿಯಲ್ಲಿರುವಾಗಲೇ ಉದ್ಘಾಟನಾ…
ಬೆಂಗಳೂರು: ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಅವರಿಗೆ ಜೀವ ಬೆದರಿಕೆ ಹಾಕಿದ್ದ ಪ್ರಕರಣ ಸಂಬಂಧ ಕಾಂಗ್ರೆಸ್ ಮುಖಂಡ ರಾಜೀವ್‌ಗೌಡಗೆ ಹೈಕೋರ್ಟ್ ತೀವ್ರ…
ಬೆಂಗಳೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜೈಲು ಸೇರಿರುವ ಪ್ರಮುಖ ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆ ಊಟ…