ಮೈಸೂರು : ಕಾಂಗ್ರೆಸ್ ಹೈಕಮಾಂಡ್ ಹಾಗೂ ಸಿದ್ದರಾಮಯ್ಯ ಮನಸ್ಸು ಮಾಡಬೇಕು ಅವರು ಮನಸ್ಸು ಮಾಡಿದರೆ ಡಿಕೆ ಶಿವಕುಮಾರ್ ಸಿಎಂ ಆಗುತ್ತಾರೆ ಎಂದು ನಗರದಲ್ಲಿ ಶಾಸಕ ಜಿ.ಟಿ ದೇವೇಗೌಡರು ಹೇಳಿದ್ದಾರೆ.
ಮುಖ್ಯಮಂತ್ರಿ ಬದಲಾವಣೆ ವಿಚಾರಕ್ಕೆ ಸಂಬಂಧಪಟ್ಟಂತೆ ಪ್ರತಿಕ್ರಿಯೆ ನೀಡಿದ ಜಿಟಿಡಿ, ಮೊದಲು ಕಾಂಗ್ರೆಸ್ ವೀಕ್ ಆಗಿತ್ತು ಅವಾಗ ಸಿದ್ದರಾಮಯ್ಯ ಸ್ಟ್ರಾಂಗ್ ಆಗಿದ್ದರು. ಸದ್ಯ ಕಾಂಗ್ರೆಸ್ ಸ್ಟ್ರಾಂಗ್ ಇದ್ದಾರೆ. ಸಿದ್ದರಾಮಯ್ಯ ಕೂಡ ಹೈಕಮಾಂಡ್ ಹೇಳಿದ್ರೆ ಅಂಥ ಹೇಳಿದ್ದಾರೆ. ಈಗ ಹೈಕಮಾಂಡ್ ಮನಸ್ಸು ಮಾಡಬೇಕು. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಎಲ್ಲೂ ಹೇಳಿಲ್ಲ. ಅವರ ಶಾಸಕರೂ ಕೂಡ ಹೇಳಿಲ್ಲ . ಒಕ್ಕಲಿಗ ಸ್ವಾಮೀಜಿಗಳು ಬಹಿರಂಗವಾಗಿ ಹೇಳಿದ್ದಾರೆ. ಮೊದಲು ಸಿದ್ದರಾಮಯ್ಯ ಸಿಎಂ ಆಗಬೇಕು ಅಂತಾ ಕುರುಬ ಸಮುದಾಯದ ಸ್ವಾಮೀಜಿ ಘರ್ಜನೆ ಮಾಡಿರಲಿಲ್ವಾ ಎಂದು ಪ್ರಶ್ನೆ ಮಾಡಿದರು.
ಅಲ್ಲದೆ ಪವರ್ ಶೇರಿಂಗ್ ಬಗ್ಗೆ ಮಾಧ್ಯಮದವರೇ ಹೇಳಿದ್ದೀರಿ. ಅದರ ಆಧಾರದ ಮೇಲೆ ಸಿದ್ದರಾಮಯ್ಯ ಆದ ಮೇಲೆ ಡಿಕೆ ಶಿವಕುಮಾರ್ ಸಿಎಂ ಆಗಲಿ ಎಂದು ಹೇಳಿದ್ದಾರೆ. ಇದು ದೊಡ್ಡ ಅಪರಾಧವೇನು ಅಲ್ಲ. ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್ ಹೈಕಮಾಂಡ್ ಮನಸ್ಸು ಮಾಡಬೇಕು. ಮನಸ್ಸು ಮಾಡಿದ್ರೆ ಎಷ್ಟು ವರ್ಷ ಅಂತ ಗೊತ್ತಿಲ್ಲ ಎಂದರು.