ಮೈಸೂರು: ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ ಗ್ರಾಮಗಳಲ್ಲಿ ನೀರನ್ನು ಸರಬರಾಜು ಮಾಡುವ ಮುನ್ನ ಪ್ರತಿ ನೀರಿನ ಮೂಲ, ನೀರಿನ ಸಂಗ್ರಹಣೆ ಹಾಗೂ ನೀರು ಪೂರೈಕೆ ಮಾಡುವ ಸ್ಥಳಕ್ಕೆ ಅಧಿಕಾರಿಗಳ ತಂಡ ರಚಿಸಿ ಖುದ್ದಾಗಿ ಭೇಟಿ ನೀಡಿ ನೀರಿನ ಗುಣಮಟ್ಟವನ್ನು ಪರಿಶೀಲಿಸಿ ವರದಿ ನೀಡಬೇಕು ಎಂದು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಕೆ. ಎಂ. ಗಾಯಿತ್ರಿ ಅಧಿಕಾರಿಗಳಿಗೆ ಸೂಚಿಸಿದರು.
ಇಂದು ಜಿಲ್ಲಾ ಪಂಚಾಯತ್‌ನ ಮಿನಿ ಸಭಾಂಗಣದಲ್ಲಿ ಆಯಾ ತಾಲೂಕಿನ ಕಾರ್ಯನಿರ್ವಾಹಕ ಅಧಿಕಾರಿಗಳು, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಅಧಿಕಾರಿಗಳೊಂದಿಗೆ ಕುಡಿಯುವ ನೀರು ಪೂರೈಕೆ ಸಂಬಂಧ ಸಭೆ ನಡೆಸಿ ಮಾತನಾಡಿದರು.
ಗ್ರಾಮೀಣ ಪ್ರದೇಶದಲ್ಲಿನ ಕುಡಿಯುವ ನೀರಿನ ಪೈಪುಗಳು ರಸ್ತೆ, ಚರಂಡಿಗಳ ಮೂಲಕ ಹಾದು ಹೊಗಿ ಒಡೆದಿದ್ದರೆ, ತಕ್ಷಣ ಸರಿಪಡಿಸಿ, ಇಲ್ಲದಿದ್ದರೆ ಒಡೆದ ಪೈಪ್‌ನಿಂದ ಸೋರಿಕೆಯಾದ ನೀರು ಕಲುಷಿತ ನೀರಿನೊಂದಿಗೆ ಬೆರೆಯುವ ಸಂಭವವಿರುವುದರಿಂದ ಇದರ ಬಗ್ಗೆ ಮುನ್ನಚ್ಚರಿಕೆ ವಹಿಸಿ ಎಂದರು.
ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಗ್ರಾಮದ ಸ್ವಚ್ಛತೆ, ಚರಂಡಿ ಸ್ವಚ್ಛತೆ, OHT tank, ತೊಂಬೆ ಹಾಗೂ ಬೋರ್ವೆಲ್ ಗಳ ಸ್ವಚ್ಛತೆ ಬಗ್ಗೆ ಅಧಿಕಾರಿಗಳು ಅಗತ್ಯವಾಗಿ ಕ್ರಮವಹಿಸಬೇಕು ಎಂದು ಅವರು ತಿಳಿಸಿದರು.
ಜಿಲ್ಲೆಯ ತಗ್ಗು ಪ್ರದೇಶಗಳಲ್ಲಿರುವ ನೀರಿನ ಮೂಲಗಳ ದುರಸ್ಥಿ ಕೈಗೊಂಡು ಕಲುಷಿತ ನೀರು ಸೇರ್ಪಡೆಯಾಗದಂತೆ ಕ್ರಮವಹಿಸಬೇಕು. FTK ಟೆಸ್ಟ್ ಮೂಲಕ ಪ್ರತಿ ನೀರಿನ ಮೂಲಗಳ sample ಟೆಸ್ಟ್ ಮಾಡಲು ಕ್ರಮವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನವದೆಹಲಿ : ಹೆಚ್ಚುತ್ತಿರುವ ಭೌಗೋಳಿಕ ರಾಜಕೀಯ ಉದ್ವಿಗ್ನತೆಗಳು ಜಾಗತಿಕವಾಗಿ ಸಾಮಾನ್ಯ ಜೀವನದ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತಿದೆ ಎಂದು ಪ್ರಧಾನಿ…
ಮೇಘನ ಕೆ.ಆರ್ ಕೇರಳಿಗಳಾದ ನನಗೆ ವರ್ಷಕ್ಕೆರಡು ಹಬ್ಬ-ಓಣಂ, ವಿಶು ಮಾತ್ರ ತಿಳಿದಿತ್ತು. ದೀಪಾವಳಿಗೆ ದನಗಳಿಗೆ ಪೂಜೆ ಮಾಡಿ ಅಮ್ಮ ಕೆಲಸಕ್ಕೆ…
ಡಾ. ಶಿಲಿನಾ ಕೋಟೆ ಎನ್. ಭಾರತೀಯ ಸಂಸ್ಕೃತಿಯಲ್ಲಿ ಹಬ್ಬಗಳು ಕೇವಲ ಧಾರ್ಮಿಕ ಆಚರಣೆ ಗಳಲ್ಲ; ಅವು ಪ್ರಕೃತಿ, ಕೃಷಿ, ಮಳೆ,…
ಶುಭಮಂಗಳ ರಾಮಾಪುರ ಗೌರಿಹಬ್ಬವೆಂದ ಕೂಡಲೇ ಸಂಭ್ರಮದ ನೆನಪು ಒಂದೆಡೆಯಾದರೆ ಕೆಲಸದ ಹೊರೆ ಮತ್ತೊಂದೆಡೆ. ನನ್ನೂರಿನಲ್ಲಂತೂ ಗೌರಿಹಬ್ಬಕ್ಕೆ ಮಡಿ ಮಾಡುವುದೇ ದೊಡ್ಡ…
ನಾಳಿನ ಗೌರಿ ಗಣೇಶ ಸಂಭ್ರಮಕ್ಕೆ ಬರಹಗಳ ಬಾಗಿನ ಡಾ.ಶುಭಶ್ರೀ ಪ್ರಸಾದ್, ಮಂಡ್ಯ ‘ಮಗಳು’ಎಂದ ಕ್ಷಣ ಕಣ್ಮುಂದೆ ಬರುವುದು ಜರಿ ಲಂಗ,…
ಅರಮನೆ ನಗರಿಯ ಮಾರುಕಟ್ಟೆಗಳಲ್ಲಿ ಖರೀದಿ ಭರಾಟೆ ಜೋರು ಸೇವಂತಿಗೆ ಹೂವು, ಏಲಕ್ಕಿ ಬಾಳೆಹಣ್ಣು ಸೇರಿ ಇನ್ನಿತರೆ ಹಣ್ಣುಗಳ ಬೆಲೆ ಹೆಚ್ಚಳ…