Mysore
34
clear sky

Social Media

ಮಂಗಳವಾರ, 07 ಏಪ್ರಿಲ 2026
Light
Dark

ಯದುವೀರರ ವಿರುದ್ಧ ಯಾರು ಮಾತನಾಡಬೇಡಿ: ಸಿಎಂ ಸ್ಪಷ್ಟ ನಿರ್ದೇಶನ

ಬೆಂಗಳೂರು: ಯಾರು ಸಹಾ ಯದುವೀರ​ರ​ ವಿರುದ್ಧ ಟೀಕಿಸದಂತೆ ತಮ್ಮ ಪಕ್ಷದ ನಾಯಕರಿಗೆ ಸಿಎಂ ಸಿದ್ದರಾಮಯ್ಯ ಕಿವಿಮಾತು ಹೇಳಿದ್ದಾರೆ.

ಯದುವೀರ್ ವಿರುದ್ದ ತುಟಿ ಬಿಚ್ಚಬೇಡಿ. ಬಿಜೆಪಿ ವಿರುದ್ದ ಮಾತಾಡಿ ಯದುವೀರ್ ರನ್ನು ಯಾವುದೇ ಕಾರಣಕ್ಕೂ ಟೀಕಿಸಲು ಮುಂದಾಗಬೇಡಿ. ಯದುವಂಶದ ವಿಚಾರ ಮೈಸೂರು ಭಾಗದಲ್ಲಿ ಭಾವನಾತ್ಮಕವಾಗಿದೆ. ಸ್ವಲ್ಪ ಹೆಚ್ಚು ಕಡಿಮೆ ಆದ್ರೂ ನಮ್ಮ ಮಾತೇ ನಮಗೆ ಮುಳ್ಳಾಗುತ್ತದೆ ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ಗ್ಯಾರಂಟಿಗಳು, ಬಿಜೆಪಿ ಹೇಳಿರುವ ಸುಳ್ಳುಗಳ ಮೇಲೆ ಪ್ರಚಾರ ಮಾಡಿ. ಯದುವೀರ್ ವಿಚಾರಕ್ಕೆ ಅಪ್ಪಿತಪ್ಪಿಯೂ ಹೋಗಬೇಡಿ. ಯದುವೀರ್ ವಿಚಾರದಲ್ಲಿ ಟೀಕೆ ಮಾಡಿದರೆ ಅದರ ಎಫೆಕ್ಟ್ ಮೈಸೂರು ಮಾತ್ರವಲ್ಲ ಬೇರೆ ಕ್ಷೇತ್ರದ ಮೇಲೂ ಆಗುತ್ತೆ ಎಚ್ಚರ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಸ್ಪಷ್ಟ ನಿರ್ದೇಶನ ನೀಡಿದ್ದಾರೆ.

Tags:
error: Content is protected !!