ಮೈಸೂರು: ರಾಜ್ಯದಲ್ಲಿ ವರುಣನ ಆರ್ಭಟ ಕೊಂಚ ಕಡಿಮೆಯಾದ ಪರಿಣಾಮ ಕೆಆರ್‌ಎಸ್ ಹಾಗೂ ಕಬಿನಿ ಜಲಾಶಯಗಳ ಒಳಹರಿವಿನ ಪ್ರಮಾಣದಲ್ಲಿ ಇಳಿಕೆಯಾಗಿದೆ.
ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್‌ಎಸ್ ಜಲಾಶಯದ ಇಂದಿನ ನೀರಿನ ಮಟ್ಟ 124.30 ಅಡಿಗಳಾಗಿದ್ದು, ಜಲಾಶಯದ ಗರಿಷ್ಠ ನೀರಿನ ಮಟ್ಟ 124.80 ಅಡಿಗಳಾಗಿದೆ. ಜಲಾಶಯಕ್ಕೆ 13,173 ಕ್ಯೂಸೆಕ್ಸ್ ಒಳಹರಿವಿದ್ದು, ಜಲಾಶಯದಿಂದ 9733 ಕ್ಯೂಸೆಕ್ಸ್ ನೀರನ್ನು ಹೊರಗೆ ಬಿಡಲಾಗುತ್ತಿದೆ.
ಇದನ್ನು ಓದಿ: ಕೆಆರ್‌ಎಸ್ ಅಣೆಕಟ್ಟೆ ನಿರ್ಮಾತೃ ವಿವಾದ : ಸಚಿವ ಎಚ್‌ಸಿಎಂ ಹೇಳಿಕೆ ತಿರುಚುವು ಹುನ್ನಾರ ನಡೆದಿದೆ ; ಪುರುಷೊತ್ತಮ್ ಆರೋಪ
ಇನ್ನು ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಬಳಿಯಿರುವ ಕಬಿನಿ ಜಲಾಶಯವು ಕೂಡ ಕಳೆದ ಎರಡು ತಿಂಗಳಿನಿಂದ ತುಂಬಿ ತುಳುಕುತ್ತಿದೆ. 84 ಅಡಿ ಸಾಮರ್ಥ್ಯ ಜಲಾಶಯದಲ್ಲಿ ಇಂದು 83.50 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 4820 ಕ್ಯೂಸೆಕ್ಸ್ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 5 ಸಾವಿರ ಕ್ಯೂಸೆಕ್ಸ್ ನೀರನ್ನು ಹೊರ ಬಿಡಲಾಗುತ್ತಿದೆ.
ಇನ್ನು ಹವಾಮಾನ ಇಲಾಖೆ ಮಾಹಿತಿ ಪ್ರಕಾರ ಸೆಪ್ಟೆಂಬರ್ ಅಂತ್ಯದವರೆಗೂ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಜಲಾಶಯಕ್ಕೆ ಮತ್ತಷ್ಟು ನೀರು ಹರಿದು ಬರುವ ಸಾಧ್ಯತೆಯಿದೆ. ಈ ಹಿನ್ನೆಲೆಯಲ್ಲಿ ಒಳಹರಿವಿನ ಪ್ರಮಾಣ ನೋಡಿಕೊಂಡು ಜಲಾಶಯಗಳಿಂದ ಹೊರಹರಿವಿನ ಪ್ರಮಾಣವನ್ನು ಸಹ ಏರಿಕೆ ಮಾಡಲಾಗುತ್ತದೆ.





