ಮೈಸೂರು

ಕೆಆರ್‌ಎಸ್‌ ಹಾಗೂ ಕಬಿನಿ ಜಲಾಶಯಗಳ ಇಂದಿನ ನೀರಿನ ಮಟ್ಟ ಎಷ್ಟಿದೆ ಗೊತ್ತಾ?

ಮೈಸೂರು: ಮುಂಗಾರು ಮಳೆ ಆರ್ಭಟದಿಂದ ಈಗಾಗಲೇ ಹಳೇ ಮೈಸೂರು ಭಾಗದ ಜಲಾಶಯಗಳು ಸಂಪೂರ್ಣ ಭರ್ತಿಯಾಗಿದ್ದು, ರೈತರ ಮೊಗದಲ್ಲಿ ಸಂತಸ ಮನೆಮಾಡಿದೆ.

ಹೀಗಿರುವಾಗಲೇ ಹಿಂಗಾರು ಮಳೆಯೂ ಕೂಡ ರಾಜ್ಯದಲ್ಲಿ ಚುರುಕು ಪಡೆದುಕೊಂಡಿದ್ದು, ಮತ್ತೆ ಜಲಾಶಯಗಳು ಭರ್ತಿಯಾಗಿವೆ.

ಕೆಆರ್‌ಎಸ್‌ ಜಲಾಶಯದ ಇಂದಿನ ನೀರಿನ ಮಟ್ಟ: ಹಳೆ ಮೈಸೂರು ಭಾಗದ ಜೀವನಾಡಿಯಾಗಿರುವ ಕೆಆರ್‌ಎಸ್‌ ಜಲಾಶಯ ಕಳೆದ ನಾಲ್ಕೈದು ತಿಂಗಳುಗಳಿಂದ ತುಂಬಿ ತುಳುಕುತ್ತಿದೆ. 124.80 ಅಡಿಗಳಸ ಸಂಗ್ರಹ ಸಾಮರ್ಥ್ಯದ ಜಲಾಶಯದಲ್ಲಿ ಇಂದು 124.80 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯಕ್ಕೆ 6392 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದ್ದು, ಜಲಾಶಯದಿಂದ 6135 ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದೆ.

ಇದನ್ನು ಓದಿ: ಕಾವೇರಿ ಜಲಾನಯನ ಪ್ರದೇಶದಲ್ಲಿ ಧಾರಾಕಾರ ಮಳೆ: ಕೆಆರ್‌ಎಸ್‌ ಹೊರಹರಿವು ಭಾರೀ ಹೆಚ್ಚಳ

ಕಬಿನಿ ಜಲಾಶಯದ ನೀರಿನ ಮಟ್ಟ: ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನ ಬೀಚನಹಳ್ಳಿ ಗ್ರಾಮದಲ್ಲಿರುವ ಕಬಿನಿ ಜಲಾಶಯವು ಇಲ್ಲಿಯವರೆಗೂ ಭರ್ತಿಯಾಗಿಯೇ ಉಳಿದಿದೆ. ಆದರೆ ಜಲಾಶಯಕ್ಕೆ ನೀರಿನ ಒಳಹರಿವು ಕೊಂಚ ಕಡಿಮೆಯಾಗಿದೆ. 84 ಅಡಿಗಳ ಸಾಮರ್ಥ್ಯದ ಜಲಾಶಯದಲ್ಲಿ ಇಂದು 83.82 ಅಡಿಗಳಷ್ಟು ನೀರು ಸಂಗ್ರಹವಾಗಿದೆ. ಜಲಾಶಯದಿಂದ 1 ಸಾವಿರ ಕ್ಯೂಸೆಕ್ಸ್‌ ನೀರನ್ನು ಹೊರಗೆ ಬಿಡಲಾಗುತ್ತಿದ್ದು, ಸದ್ಯ ಜಲಾಶಯಕ್ಕೆ 1278 ಕ್ಯೂಸೆಕ್ಸ್‌ ನೀರು ಹರಿದು ಬರುತ್ತಿದೆ.

ಇನ್ನು ಮೊಂತಾ ಚಂಡಮಾರುತದ ಪರಿಣಾಮ ಹವಾಮಾನ ಇಲಾಖೆ ರಾಜ್ಯದಲ್ಲೂ ಭಾರೀ ಮಳೆಯಾಗುವ ಎಚ್ಚರಿಕೆ ನೀಡಿರುವ ಹಿನ್ನೆಲೆಯಲ್ಲಿ ಮಳೆ ಹೆಚ್ಚಾದರೆ ಜಲಾಶಯಗಳ ಒಳಹರಿವಿನ ಪ್ರಮಾಣ ಹೆಚ್ಚಾಗುವ ಸಾಧ್ಯತೆಯಿದೆ.

ಈ ಹಿನ್ನೆಲೆಯಲ್ಲಿ ಈಗಾಗಲೇ ಭರ್ತಿಯಾಗಿರುವ ಜಲಾಶಯಗಳಿಂದ ಒಳಹರಿವನ್ನು ನೋಡಿಕೊಂಡು ಹೊರಹರಿವನ್ನು ಹೆಚ್ಚಳ ಮಾಡಲಾಗುತ್ತದೆ.

ಆಂದೋಲನ ಡೆಸ್ಕ್

Recent Posts

ನಟಿ ಕಾವ್ಯಾ ಗೌಡಗೆ ಪತಿ ಸಂಬಂಧಿಕರಿಂದ ಹಲ್ಲೆ: ಪತಿಗೂ ಚಾಕು ಇರಿತ

ಬೆಂಗಳೂರು: ನಟಿ ಕಾವ್ಯಾಗೌಡ ಹಾಗೂ ಆಕೆಯ ಪತಿ ಸೋಮಶೇಖರ್‌ ಮೇಲೆ ಪತಿ ಸಂಬಂಧಿಕರೇ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ರಾಮಮೂರ್ತಿ…

21 mins ago

ರಾಜ್ಯದ ಹಲವೆಡೆ ಮಳೆ ಮುನ್ಸೂಚನೆ ನೀಡಿದ ಹವಾಮಾನ ಇಲಾಖೆ

ಬೆಂಗಳೂರು: ಅರಬ್ಬಿ ಸಮುದ್ರದ ಮೇಲೆ ತೇವಾಂಶ ಭರಿತ ಮೋಡಗಳು ಹಾದು ಹೋಗಿರುವ ಹಿನ್ನೆಲೆಯಲ್ಲಿ ರಾಜ್ಯದ ಹಲವೆಡೆ ಸೋಮವಾರ ಮಳೆಯಾಗಿದೆ. ರಾಜಧಾನಿ…

4 hours ago

2028ಕ್ಕೆ ಸಿಎಂ ವಿಚಾರ: ಎಚ್‌ಡಿಕೆ ಹಗಲು ಕನಸು ಕಾಣುತ್ತಿದ್ದಾರೆ ಎಂದ ಜಮೀರ್‌ ಅಹಮ್ಮದ್‌ ಖಾನ್‌

ದಾವಣಗೆರೆ: 2028ಕ್ಕೆ ಎಚ್.ಡಿ.ಕುಮಾರಸ್ವಾಮಿ ಸಿಎಂ ಎಂಬ ಹೇಳಿಕೆ ವಿಚಾರಕ್ಕೆ ಸಂಬಂಧಿಸಿದಂತೆ ಸಚಿವ ಜಮೀರ್‌ ಅಹಮ್ಮದ್‌ ಖಾನ್‌ ವ್ಯಂಗ್ಯವಾಡಿದ್ದಾರೆ. ಈ ಕುರಿತು…

4 hours ago

ಲಕ್ಕುಂಡಿ| ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ ಸರ್ಕಾರದಿಂದ ಬಿಗ್‌ ಗಿಫ್ಟ್‌

ಗದಗ: ಲಕ್ಕುಂಡಿಯಲ್ಲಿ ಮನೆ ಪಾಯ ಅಗೆಯುವ ವೇಳೆ ಚಿನ್ನದ ನಿಧಿ ಪತ್ತೆಹಚ್ಚಿ ಪ್ರಾಮಾಣಿಕವಾಗಿ ಸರ್ಕಾರಕ್ಕೆ ಒಪ್ಪಿಸಿದ ಪ್ರಜ್ವಲ್‌ ರಿತ್ತಿ ಕುಟುಂಬಕ್ಕೆ…

4 hours ago

ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಸಾವು ಪ್ರಕರಣ: ತನಿಖೆಗೆ ಸೂಚಿಸಿದ ಲಕ್ಷ್ಮೀ ಹೆಬ್ಬಾಳ್ಕರ್‌

ಉಡುಪಿ: ಅರಬ್ಬಿ ಸಮುದ್ರದಲ್ಲಿ ಟೂರಿಸ್ಟ್‌ ಬೋಟ್‌ ಮುಳುಗಿ ಇಬ್ಬರು ಪ್ರವಾಸಿಗರು ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಅವರು…

4 hours ago

ವಾರಕ್ಕೆ 5 ದಿನ ಮಾತ್ರ ಕೆಲಸಕ್ಕೆ ಆಗ್ರಹಿಸಿ ಇಂದು ಬ್ಯಾಂಕ್‌ ನೌಕರರ ಮುಷ್ಕರ

ಬೆಂಗಳೂರು: ಬ್ಯಾಂಕಿಂಗ್‌ ಕ್ಷೇತ್ರದ ನೌಕರರಿಗೆ ವಾರಕ್ಕೆ ಐದು ದಿನ ಮಾತ್ರ ಕೆಲಸದ ದಿನವಾಗಿಸಬೇಕೆಂಬುದು ಸೇರಿದಂತೆ ತಮ್ಮ ವಿವಿಧ ಬೇಡಿಕೆಗಳ ಈಡೇರಿಕೆಗೆ…

4 hours ago