Mysore
27
overcast clouds

Social Media

ಗುರುವಾರ, 13 ಆಗಸ್ಟ್ 2026
Light
Dark

ನಿಂತಿದ್ದ ಕಾರಿನಲ್ಲಿ ಪತ್ತೆಯಾಯಿತು ವೈದ್ಯನ ಶವ; ಭ್ರೂಣ ಹತ್ಯೆ ಪ್ರಕರಣದಲ್ಲಿ ಹೆಸರು ಕೇಳಿಬಂದಿದ್ದಕ್ಕೆ ಆತ್ಮಹತ್ಯೆ?

ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಸತೀಶ್ ವೈದ್ಯರಾಗಿ ಸೇವೆ ಸಲಿಸುತ್ತಿದ್ದರು.

ಮಂಡ್ಯದ ಭ್ರೂಣ ಹತ್ಯೆ ಕೇಸ್‌ನಲ್ಲಿ ಸತೀಶ್‌ ಅವರ ಹೆಸರು ಕೇಳಿಬಂದಿತ್ತು ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಭ್ರೂಣ ಹತ್ಯೆಗೆ ಸಂಬಂಧಿಸಿದ ಆಲೆಮನೆಗೆ ಆರೋಗ್ಯ ಸಚಿವರು ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯರು ಸತೀಶ್‌ ಅವರ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಅಲ್ಲದೇ ಸಚಿವರು ವೈದ್ಯನನ್ನು ವಿಚಾರಿಸುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೂ ಇದೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.

Tags:

ಸುದ್ದಿ ಬಗ್ಗೆ ನಿಮ್ಮ ಅಭಿಪ್ರಾಯ ತಿಳಿಸಿ

error: Content is protected !!