ಕುಶಾಲನಗರ: ತಾಲ್ಲೂಕಿನ ಆನೆಕಾಡು ಬಳಿ ರಾಷ್ಟ್ರೀಯ ಹೆದ್ದಾರಿ 275ರ ಬಳಿ ನಿಂತಿದ್ದ ಕಾರಿನಲ್ಲಿ ವೈದ್ಯರೊಬ್ಬರ ಮೃತದೇಹ ಪತ್ತೆಯಾಗಿದೆ. ಮಂಡ್ಯ ಜಿಲ್ಲೆ ಪಾಂಡವಪುರ ಬಳಿಯ ಶಿವಳ್ಳಿ ಗ್ರಾಮದ ಸತೀಶ್ (47) ಮೃತ ವೈದ್ಯ. ಮೈಸೂರು ಜಿಲ್ಲೆ ಹುಣಸೂರು ತಾಲ್ಲೂಕಿನ ಕೊಣಸೂರು ಆಸ್ಪತ್ರೆಯಲ್ಲಿ ಸತೀಶ್ ವೈದ್ಯರಾಗಿ ಸೇವೆ ಸಲಿಸುತ್ತಿದ್ದರು.
ಮಂಡ್ಯದ ಭ್ರೂಣ ಹತ್ಯೆ ಕೇಸ್‌ನಲ್ಲಿ ಸತೀಶ್ ಅವರ ಹೆಸರು ಕೇಳಿಬಂದಿತ್ತು ಈ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಭ್ರೂಣ ಹತ್ಯೆಗೆ ಸಂಬಂಧಿಸಿದ ಆಲೆಮನೆಗೆ ಆರೋಗ್ಯ ಸಚಿವರು ಭೇಟಿ ನೀಡಿದಾಗ ಅಲ್ಲಿನ ಸ್ಥಳೀಯರು ಸತೀಶ್ ಅವರ ಬಗ್ಗೆ ಮಾಹಿತಿ ನೀಡಿದ್ದರು ಎನ್ನಲಾಗಿದೆ. ಅಲ್ಲದೇ ಸಚಿವರು ವೈದ್ಯನನ್ನು ವಿಚಾರಿಸುವಂತೆ ಸೂಚನೆ ನೀಡಿದ್ದಾರೆ ಎಂಬ ಮಾಹಿತಿಯೂ ಇದೆ. ಸ್ಥಳಕ್ಕೆ ಕುಶಾಲನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತನಿಖೆ ಕೈಗೊಂಡಿದ್ದಾರೆ.
ಪುನೀತ್ ಮಡಿಕೇರಿ ಮಡಿಕೇರಿ ದಸರಾ ಸಮೀಪಿಸುತ್ತಿದ್ದರೂ ಗುಂಡಿಗಳಿಗೆ ಸಿಗದ ಮುಕ್ತಿ ಮಡಿಕೇರಿ ದಸರಾ ಜನೋತ್ಸವಕ್ಕೆ ದಿನಗಣನೆ ಆರಂಭವಾಗಿದೆ. ಆದರೆ, ದಸರಾ…
ಮಹೇಂದ್ರ ಹಸಗೂಲಿ ದೇಪಾಪುರದಲ್ಲಿ ಗುಡಿಸಲಿನಲ್ಲಿ ಆರಂಭವಾದ ಅನ್ನ ದಾಸೋಹಕ್ಕೆ ಈಗ ದಾಸೋಹ ಭವನದ ರೂಪ ಗುಂಡ್ಲುಪೇಟೆ: ಸಣ್ಣ ಗುಡಿಸಲಿನಲ್ಲಿ ಆರಂಭಗೊಂಡ…
ಕೊಡಗು: ಕೊಡಗು ಜಿಲ್ಲೆ ಶನಿವಾರಸಂತೆ ಬಳಿಯ ಗುಡುಗಳಲೆಯಲ್ಲಿ ಸಿಮೆಂಟ್ ತುಂಬಿದ್ದ ಲಾರಿ ಉರುಳಿಬಿದ್ದಿದೆ. ಶನಿವಾರಸಂತೆ–ಅರಕಲಗೂಡು ರಸ್ತೆಯ ಗುಡುಗಳಲೆ ತಿರುವಿನಲ್ಲಿ ಘಟನೆ…
ಕುಶಾಲನಗರ: ದುಬಾರೆ ಆನೆ ಶಿಬಿರದಲ್ಲಿದ್ದ ಸುಮಾರು 19 ವರ್ಷ ಪ್ರಾಯದ ಗಂಡಾನೆಯೊಂದು ಐದು ತಿಂಗಳಿಗೂ ಹೆಚ್ಚು ಕಾಲ ನಿರಂತರ ಚಿಕಿತ್ಸೆ…
ಮೈಸೂರು: ಪ್ರೀತಿಗೆ ನಿರಾಕರಿಸಿದ ಪರಿಣಾಮ ಯುವಕನೋರ್ವ ಯುವತಿಯನ್ನು ತಬ್ಬಿಕೊಂಡು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮೈಸೂರಿನ ವಿಜಯನಗರದ ಬಳಿ…
ಮಂಡ್ಯ: ಮನ್ಮುಲ್ ಹಾಲಿನ ಪುಡಿ ಕಲಬೆರಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಮನ್ ಮುಲ್ ಅಧ್ಯಕ್ಷ ಶಿವಕುಮಾರ್(ಶಿವಪ್ಪ)…