ಕುಶಾಲನಗರ: ಪಿರಿಯಾಪಟ್ಟಣದ ಸರ್ಕಾರಿ ಆಯುರ್ವೇದಿಕ್ ಚಿಕಿತ್ಸಾಲಯ ವೈದ್ಯಾಧಿಕಾರಿ ಮೃತದೇಹ ಕಾರಿನಲ್ಲಿ ಶಂಶಯಾಸ್ಪದ ರೀತಿಯಲ್ಲಿ ಪತ್ತೆಯಾದ ಘಟನೆ ಕುಶಾಲನಗರ ಸಮೀಪದ ಆನೆಕಾಡಿನಲ್ಲಿ ನಡೆದಿದೆ.
ಮೂಲತಃ ಮಂಡ್ಯ ಪಾಂಡವಪುರದ ದಿ.ಗಿರಿಗೌಡ ಎಂಬವರ ಪುತ್ರ ಡಾ.ಸತೀಶ್ (48) ಮೃತ ದುರ್ದೈವಿ.
ಕಳೆದ ಒಂದು ವರ್ಷದಿಂದ ಪಿರಿಯಾಪಟ್ಟಣ ಮತ್ತು ಬೆಟ್ಟದಪುರ ಸಮೀಪದ ಕೊಣಸೂರು ಆಯುರ್ವೇದಿಕ್ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಎಂದಿನಂತೆ ಶುಕ್ರವಾರ ಕೂಡ ಕೊಣಸೂರು ಆಸ್ಪತ್ರೆಗೆ ಆಗಮಿಸಿದ್ದು ಅಲ್ಲಿಂದ ಪಿರಿಯಾಪಟ್ಟಣಕ್ಕೆ ಆಗಮಿಸಿದ್ದಾರೆ.
ಅಲ್ಲಿಂದ ಮಡಿಕೇರಿಯತ್ತ ತಮ್ಮ ಕಾರಿನಲ್ಲಿ ಆಗಮಿಸಿರುವ ವೈದ್ಯರ ಮೃತದೇಹ ಕಾರಿನಲ್ಲಿ ಕಂಡುಬಂದಿದೆ. ಎಡಗೈಗೆ ಸಿರಂಜ್ ಚುಚ್ಚಿದ ಸ್ಥಿತಿಯಲ್ಲಿ ಮೃತದೇಹ ಪತ್ತೆಯಾಗಿದ್ದು ವಿಷ ತೆಗೆದುಕೊಂಡಿರುವ ಶಂಕೆ ವ್ಯಕ್ತಗೊಂಡಿದೆ.
ಹೆದ್ದಾರಿಯ ಒಂದು ಭಾಗದಲ್ಲಿ ಮಾರುತಿ ಸೆಲೆರಿಯೋ ಕಾರು ನಿಲುಗಡೆ ಸ್ಥಿತಿಯಲ್ಲಿ ತುಂಬಾ ಹೊತ್ತಿನಿಂದ ನಿಂತಿರುವುದು ಕಂಡ ಸ್ಥಳೀಯರು ಪರಿಶೀಲಿಸಿದ ಸಂದರ್ಭ ಚಾಲನೆ ಸೀಟ್ ನಲ್ಲಿ ವೈದ್ಯರು ಮೃತಪಟ್ಟ ಸ್ಥಿತಿಯಲ್ಲಿ ಕಂಡುಬಂದಿದ್ದಾರೆ.
ಸ್ಥಳಕ್ಕೆ ಕುಶಾಲನಗರ ಗ್ರಾಮಾಂತರ ಠಾಣಾ ವೃತ್ತ ನಿರೀಕ್ಷಕ ರಾಜೇಶ್ ಕೋಟ್ಯಾನ್, ಠಾಣಾಧಿಕಾರಿ ಮೋಹನ್ ರಾಜ್ ಸೇರಿದಂತೆ ವಿಧಿವಿಜ್ಞಾನ ಪ್ರಯೋಗಾಲದವರು ಆಗಮಿಸಿ ಪರಿಶೀಲನೆ ನಡೆಸಿ ತನಿಖೆ ಕೈಗೊಂಡಿದ್ದಾರೆ.
ಮೃತರ ಪತ್ನಿ ಕುಸುಮ ಕೂಡ ವೈದ್ಯರಾಗಿದ್ದು ಮಂಡ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಪಿರಿಯಾಪಟ್ಟಣ ಆಸ್ಪತ್ರೆ ಸಹಾಯಕ ಸಿಬ್ಬಂದಿಯ ಹೇಳಿಕೆ ಪ್ರಕಾರ, ಸ್ನೇಹಜೀವಿಯಾಗಿದ್ದ ವೈದ್ಯರು ಎಂದಿನಂತೆ ಬೆಳಗ್ಗೆ ಕರ್ತವ್ಯಕ್ಕೆ ಹಾಜರಾದ ಸಂದರ್ಭ ಕೊಂಚ ಬಳಲಿದಂತೆ ಕಂಡು ಬಂದಿದ್ದಾರೆ. ಒಂದು ಬಾರಿ ವಾಂತಿ ಕೂಡ ಮಾಡಿಕೊಂಡು ಬಳಿಕ ಕಾರಿನಲ್ಲಿ ವಿಶ್ರಮಿಸುವುದಾಗಿ ಹೇಳಿ ತೆರಳಿದ್ದಾರೆ. ಮಡಿಕೇರಿ ಬಗ್ಗೆ ಅಷ್ಟಾಗಿ ಮಾಹಿತಿಯಿಲ್ಲದ ವೈದ್ಯರು ಇತ್ತ ಯಾಕೆ ಬಂದರು ತಿಳಿದಿಲ್ಲ ಎಂದಿದ್ದಾರೆ.
ಮೈಸೂರು : ಪ್ರವಾಸಿಗರ ದಂಡೇ ನೆರೆಯುತ್ತಿದ್ದ ಸ್ಥಳದಲ್ಲೇ ಹೀಲಿಯಂ ಬಲೂನ್‌ಗಾಗಿ ಬಳಸುತ್ತಿದ್ದ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿ,…
ಕೆ.ಆರ್.ಪೇಟೆ : ರಸ್ತೆಯಲ್ಲಿ ರಾಗಿ ಒಕ್ಕಣೆ ಮಾಡುತ್ತಿದ್ದ ಸಂದರ್ಭದಲ್ಲಿ ರಾಗಿಯ ಮೇಲೆ ಕಾರು ಚಲಿಸಿದಾಗ ಕಾರು ಮಗುಚಿ ಬಿದ್ದ ಪರಿಣಾಮ…
ಮೈಸೂರು : ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, ಅದೃಷ್ಟವಶಾತ್ ಯಾವುದೇ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ವಿಜಯನಗರದ ಕೊಡವ…
ಮೈಸೂರು : ಮೈಸೂರು ಜಿಲ್ಲೆಯಾದ್ಯಂತ ಕ್ರೈಸ್ತ ಭಾಂದವರು ಕ್ರಿಸ್‌ಮಸ್ ಹಬ್ಬವನ್ನು ಸಡಗರ, ಸಂಭ್ರಮದಿಂದ ಆಚರಿಸಿದರು. ಕ್ರಿಸ್‌ಮಸ್ ಹಿನ್ನೆಲೆಯಲ್ಲಿ ನಗರದ ಐತಿಹಾಸಿಕ…
ಕೆ.ಆರ್.ಪೇಟೆ : ತಾಲ್ಲೂಕಿನ ತೆಂಡೇಕೆರೆ ಸರ್ಕಾರಿ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಬಿ.ಎಸ್.ರಾಜು ಅವರು ತಮ್ಮ ಒಂದು ತಿಂಗಳ ವೇತನದಲ್ಲಿ…
ಬೆಂಗಳೂರು : ಸಾರ್ವಜನಿಕ ಸಾರಿಗೆಗಾಗಿ ಬಳಸುವ ವಾಹನಗಳಿಗೆ ತುರ್ತು ನಿರ್ಗಮನದ ಬಾಗಿಲುಗಳು ಇಲ್ಲದೆ ಇದ್ದರೆ ಭೌತಿಕ ಕ್ಷಮತೆಯ ದೃಢೀಕರಣ ಪತ್ರ…