Mysore
26
scattered clouds

Social Media

ಭಾನುವಾರ, 22 ಡಿಸೆಂಬರ್ 2024
Light
Dark

ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ; ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟನೆ

ಮೈಸೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ವಿಧಾನಪರಿಷತ್‌ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.

ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ರಾಜ್ಯದಲ್ಲಿ ಸರ್ಕಾರ ಇದ್ದೂ ಇಲ್ಲದಂತಾಗಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಎಲ್ಲಾ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.

ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಗ್ಯಾರಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗೆದ್ದಿದೆ, ಆದರೆ ಈ ಬಾರಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಸಿಗಲಿಲ್ಲ. ಗ್ಯಾರಂಟಿ ಯೋಜನೆಗಳಿಂದಲೇ ನಾವು ರಾಜ್ಯದಲ್ಲಿ 9 ಸ್ಥಾನಗಳನ್ನು ಗೆದ್ದಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ಬದುಕು ಹಸನಾಗಲಿದೆ. ಹಾಗಾಗಿ ಯೋಜನೆಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದರು.

ಇನ್ನೂ ಮುಂದುವರಿದು ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ತಂದೆಗೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ಆದ ಕಾರಣ ನನಗೆ ಪಕ್ಷದ ವರಿಷ್ಠರು ಪರಿಷತ್‌ ಸ್ಥಾನ ನೀಡಿದ್ದಾರೆ. ಪಕ್ಷದ ತೀರ್ಮಾನವೇ ಅಂತಿಮ ತೀರ್ಮಾನ ಎಂದರು.

 

Tags: