ಮೈಸೂರು: ಯಾವುದೇ ಕಾರಣಕ್ಕೂ ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ನಿಲ್ಲಲ್ಲ ಎಂದು ವಿಧಾನಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
ಗ್ಯಾರಂಟಿ ಯೋಜನೆಯಿಂದ ರಾಜ್ಯದಲ್ಲಿ ಅಭಿವೃದ್ಧಿ ಕೆಲಸಗಳು ನಿಂತು ಹೋಗಿವೆ. ರಾಜ್ಯದಲ್ಲಿ ಸರ್ಕಾರ ಇದ್ದೂ ಇಲ್ಲದಂತಾಗಿದೆ. ಗ್ಯಾರಂಟಿ ಯೋಜನೆಗೆ ಹಣ ಹೊಂದಿಸಲು ಎಲ್ಲಾ ವಸ್ತುಗಳ ಬೆಲೆಗಳನ್ನು ಏರಿಕೆ ಮಾಡಲಾಗುತ್ತಿದೆ ಎಂದು ಬಿಜೆಪಿ ನಾಯಕರು ರಾಜ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸುತ್ತಿದ್ದಾರೆ.
ಈ ಬಗ್ಗೆ ಮೈಸೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಎಂಎಲ್‌ಸಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರು, ಗ್ಯಾರಂಟಿಗಳಿಂದ ರಾಜ್ಯದಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನ ಗೆದ್ದಿದೆ, ಆದರೆ ಈ ಬಾರಿ ನಾವು ನಿರೀಕ್ಷೆ ಮಾಡಿದಷ್ಟು ಸ್ಥಾನಗಳು ಸಿಗಲಿಲ್ಲ. ಗ್ಯಾರಂಟಿ ಯೋಜನೆಗಳಿಂದಲೇ ನಾವು ರಾಜ್ಯದಲ್ಲಿ 9 ಸ್ಥಾನಗಳನ್ನು ಗೆದ್ದಿದ್ದೇವೆ. ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆ ನಿಲ್ಲಲ್ಲ. ಗ್ಯಾರಂಟಿ ಯೋಜನೆಗಳಿಂದ ಜನಸಾಮಾನ್ಯರ ಬದುಕು ಹಸನಾಗಲಿದೆ. ಹಾಗಾಗಿ ಯೋಜನೆಗಳು ಮುಂದುವರಿಯಲಿವೆ ಎಂದು ಸ್ಪಷ್ಟಪಡಿಸಿದರು.
ಇನ್ನೂ ಮುಂದುವರಿದು ಮಾತನಾಡಿದ ಅವರು, ವಿಧಾನಸಭೆ ಚುನಾವಣೆಯಲ್ಲಿ ತಂದೆಗೆ ವರುಣಾ ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದೆ. ಆದ ಕಾರಣ ನನಗೆ ಪಕ್ಷದ ವರಿಷ್ಠರು ಪರಿಷತ್ ಸ್ಥಾನ ನೀಡಿದ್ದಾರೆ. ಪಕ್ಷದ ತೀರ್ಮಾನವೇ ಅಂತಿಮ ತೀರ್ಮಾನ ಎಂದರು.
ಬೆಂಗಳೂರು : 2026-31ನೇ ಸಾಲಿನ ಗ್ರಾಮ ಪಂಚಾಯ್ತಿಗಳ ಚುನಾವಣೆಗೆ ಪೂರ್ವ ಸಿದ್ಧತೆ ಮಾಡಿಕೊಳ್ಳುವಂತೆ ರಾಜ್ಯದ ಎಲ್ಲಾ ಜಿಲ್ಲಾಧಿಕಾರಿಗಳಿಗೆ ಗ್ರಾಮೀಣಾಭಿವೃದ್ಧಿ ಹಾಗೂ…
ಬೆಂಗಳೂರು : ಹಳ್ಳಿಯಿಂದ ದಿಲ್ಲಿಯೇ ಹೊರತು, ದಿಲ್ಲಿಯಿಂದ ಹಳ್ಳಿ ಅಲ್ಲ ಎಂದು ಪ್ರತಿಪಾದಿಸಿದ ಮಹಾತ್ಮಾ ಗಾಂಧೀಜಿಯವರು ಗ್ರಾಮ ಸ್ವರಾಜ್ಯದ ಕಲ್ಪನೆಗೆ…
ಕೊಳ್ಳೇಗಾಲ : ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ಪಟ್ಟಣದಲ್ಲಿ ಮದುವೆಯ ಆರತಕ್ಷತೆಗೆ ತೆರಳುತ್ತಿದ್ದ ವರನ ಮೇಲೆ ದುಷ್ಕರ್ಮಿಗಳು ಚಾಕುವಿನಿಂದ ಏಕಾಏಕಿ ದಾಳಿ…
ಗುಂಡ್ಲುಪೇಟೆ : ತಾಲ್ಲೂಕಿನ ಬೊಮ್ಮನಹಳ್ಳಿ ಗ್ರಾಮದ ರಾಜಶೇಖರ ಮೂರ್ತಿ ಎಂಬುವವರ ಮೇಲೆ ಚಿರತೆ ದಾಳಿ ನಡೆಸಿ ಗಾಯಗೊಳಿಸಿದ್ದು, ಅದೃಷ್ಟವಶಾತ್ ರೈತ…
ಹೊಸದಿಲ್ಲಿ : ರಾಷ್ಟ್ರಪಿತಿ ಮಹಾತ್ಮ ಗಾಂಧಿ ಅವರ 78ನೇ ಪುಣ್ಯತಿಥಿ ಹಿನ್ನೆಲೆಯಲ್ಲಿ ಇಂದು ರಾಷ್ಟ್ರಪತಿ ಮುರ್ಮು, ಪ್ರಧಾನಮಂತ್ರಿ ನರೇಂದ್ರ ಮೋದಿ…
ಮೈಸೂರು : ಮೈಸೂರಿನಲ್ಲಿ ಡ್ರಗ್ಸ್ ತಯಾರು ಮಾಡುವ ಯಾವ ವಸ್ತುಗಳ ಸಹ ಸಿಕ್ಕಿಲ್ಲ. ಎನ್.ಸಿ.ಬಿ ಅಧಿಕಾರಿಗಳು ದಾಳಿ ಮಾಡಿರುವುದು ಫಾಲೋಅಪ್…