ಮೈಸೂರು

ಜಾತಿ ಟಮಟೆ ಬಾರಿಸುವವರಿಗೆ ಕಿವಿ ಕೊಡಬೇಡಿ, ಎಚ್ಚರದಿಂದಿರಿ : ಪ್ರತಾಪ್‌ ಸಿಂಹ

ಮೈಸೂರು : ಕಾಂಗ್ರೆಸ್‌ ಅಭ್ಯರ್ಥಿ ಯಾವಾಗ ಒಕ್ಕಲಿಗನಾದನೋ ನನಗಂತು ಗೊತ್ತಿಲ ಎಂದು ಸಂಸದ ಪ್ರತಾಪ್‌ ಸಿಂಹ ಕಾಂಗ್ರೆಸ್‌ ಲೋಕಸಭಾ ಅಭ್ಯರ್ಥಿ ಲಕ್ಷ್ಮಣ್‌ ಅವರಿಗೆ ಪರೋಕ್ಷವಾಗಿ ಟೀಕೆ ಮಾಡಿದ್ದಾರೆ.

ಬಿಜೆಪಿ ಮೈಸೂರು ಮಹಾನಗರ ಮತ್ತು ಗ್ರಾಮಾಂತರ ವತಿಯಿಂದ ಏರ್ಪಡಿಸಲಾಗಿದ್ದ ಹಿಂದುಳಿದ ವರ್ಗಗಳ ಮೋರ್ಚಾ ಸಾಮಾಜಿಕ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಾಂಗ್ರೆಸ್‌ನ ಮೈಸೂರು-ಲೋಕಸಭಾ ಅಭ್ಯರ್ಥಿ ಇಂದು ಜಾತಿಯ ಟಮಟೆ ಬಾರಿಸಿಕೊಂಡು ಓಡಾಡುತ್ತಿದ್ದಾನೆ. ನಮಗೆ ದೇಶ ಮುಖ್ಯವೆ ಹೊರತು ಜಾತಿ ಅಲ್ಲ ಎಂದು ಕಿಡಿ ಕಾರಿದ್ದಾರೆ.

ಕಾಂಗ್ರೆಸ್‌ ಅಭ್ಯರ್ಥಿ ಸಭೆ ಸಮಾರಂಭದಲ್ಲಿ ಮಾತು ಮಾತಿಗೆ ಯಾವೆಲ್ಲಾ ಒಕ್ಕಲಿಗ ನಾಯಕರಿದ್ದಾರೋ ಎಲ್ಲರನ್ನು ಸದಾ ನಿಂದಿಸುವ ಕೆಲಸ ಮಾಡಿಕೊಂಡು ಬಂದಿದ್ದಾನೆ. ಈತ ಯಾವಾಗ ಒಕ್ಕಲಿಗನಾದನೋ ನನಗಂತೂ ಗೊತ್ತಿಲ್ಲ ಎಂದು ವ್ಯಂಗ್ಯ ಮಾಡಿದರು.

ಇಂಥ ವ್ಯಕ್ತಿಗಳು ಬಂದು ಜಾತಿಯ ಟಮಟೆ ಬಾರಿಸುತ್ತಿದ್ದಾರೆ. ಯಾವುದೇ ಕಾರಣಕ್ಕು ಕಿವಿಕೊಡಬೇಡಿ. ನಮಗೆ ದೇಶ ಮುಖ್ಯ, ಮೈಸೂರಿನ ಅಭಿವೃದ್ದಿ ಮುಖ್ಯ. ಈ ಎಲ್ಲಾ ಕೆಲಸಗಳು ಬಿಜೆಪಿಯಿಂದ ಮಾತ್ರ ಮಾಡಲು ಸಾಧ್ಯ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.

ಎನ್‌ ಎಂ ಪ್ರದ್ಯುಮ್ನ

ಮೈಸೂರು ಜಿಲ್ಲೆಯ ನಂಜನಗೂಡಿನವನಾದ ನಾನು, ಸದ್ಯ ಮೈಸೂರಿನಲ್ಲಿ ನೆಲೆಸಿದ್ದೇನೆ. 2011 ಮೈಸೂರಿನ ಮಹಾರಾಜಾ ಕಾಲೇಜಿನಲ್ಲಿ ಬಿಎ ಪತ್ರಿಕೋದ್ಯಮ ಮುಗಿಸಿದ ಬಳಿಕ ಪತ್ರಿಕೋದ್ಯಮ ಕ್ಷೇತ್ರದಲ್ಲಿ 8 ವರ್ಷಗಳ ಕಾಲ ಅನುಭವ ಪಡೆದಿದ್ದೇನೆ. ಮೈಸೂರಿನ ಪಾದೇಶಿಕ ಪತ್ರಿಕೆ ʼಹಲೋ ಮೈಸೂರುʼಯಿಂದ ಪ್ರಾರಂಭಿಸಿ, ಜನಶ್ರೀ(ಟಿವಿ), ಸಿರಿ(ಟಿವಿ), ವಿಶ್ವವಾಣಿ ಪತ್ರಿಕೆ, ಟಿವಿ-೯(ಟಿವಿ) ಸಂಸ್ಥೆಗಳಲ್ಲಿ ವರದಿಗಾರ, ಮುಖ್ಯ ವರದಿಗಾರ ಹಾಗೂ ಉಪ ಸಂಪಾದಕನಾಗಿ ಕೆಲಸ ಮಾಡಿದ್ದೇನೆ. ಪ್ರಿಂಟ್‌ ಮೀಡಿಯಾದಲ್ಲಿ 6 ವರ್ಷ ಹಾಗೂ ಎಲೆಕ್ಟ್ರಾನಿಕ್‌ ಮೀಡಿಯಾದಲ್ಲಿ 2 ವರ್ಷಗಳ ಕಾಲ ಅನುಭವ ಹೊಂದಿದ್ದು, ಸದ್ಯ ಮೈಸೂರಿನ ʼಆಂದೋಲನ ದಿನಪತ್ರಿಕೆʼಯ ಭಾಗವಾದ ʼಆಂದೋಲನ ಡಿಜಿಟಲ್‌ʼನಲ್ಲಿ ಕಾರ್ಯನಿರ್ವಹಿಸುತ್ತಿದ್ದೇನೆ. ವೈಲ್ಡ್‌ಲೈಫ್‌ ಫೋಟೋಗ್ರಫಿ, ಪುಸ್ತಕ ಓದುವುದು ನನ್ನ ನೆಚ್ಚಿನ ಹವ್ಯಾಸಗಳಾಗಿವೆ.

Recent Posts

ಮಂಡ್ಯ | ಕೊಬ್ಬರಿ ಶೆಡ್‌ಗೆ ಬೆಂಕಿ : ಲಕ್ಷಾಂತರ ರೂ.ಮೌಲ್ಯದ ಕೊಬ್ಬರಿ ನಾಶ

ಮಂಡ್ಯ : ಕೊಬ್ಬರಿ ಶೆಡ್ ಗೆ ಬೆಂಕಿ ಬಿದ್ದು ಲಕ್ಷಾಂತರ ರೂ. ಮೌಲ್ಯದ ಕೊಬ್ಬರಿ ನಾಶವಾಗಿರುವ ಘಟನೆ ತಾಲೂಕಿನ ಗುನ್ನಾಯಕನಹಳ್ಳಿಯಲ್ಲಿ…

15 mins ago

ಹನೂರು | ಅಲಗುಮೂಲೆ ಅರಣ್ಯದಲ್ಲಿ ಬೆಂಕಿ ; ಧಗಧಗಿಸಿದ ಕಾಡು

ಹನೂರು : ತಾಲೂಕಿನ ಕಾವೇರಿ ವನ್ಯಜೀವಿಧಾಮ ವ್ಯಾಪ್ತಿಯ ಅಲಗುಮೂಲೆ ಅರಣ್ಯ ಪ್ರದೇಶದಲ್ಲಿ ಬುಧವಾರ ರಾತ್ರಿ ಏಕಾಏಕಿ ಎರಡು ಮೂರು ಕಡೆ…

56 mins ago

ತಂಬಾಕು ಮುಕ್ತ ಗ್ರಾಮಕ್ಕಾಗಿ ಗುಲಾಬಿ ಚಳುವಳಿ

ಶ್ರೀರಂಗಪಟ್ಟಣ : ಸಿಗರೇಟ್ ಮತ್ತು ತಂಬಾಕು ಉತ್ಪನ್ನಗಳ ಸೇವನೆಯಿಂದ ಕ್ಯಾನ್ಸರ್, ಹೃದಯ, ಶ್ವಾಸಕೋಶ ಸಂಬಂಧಿತ ಮಾರಣಾಂತಿಕ ಕಾಯಿಲೆಗಳು ಬರುತ್ತವೆಂದು ಕ್ಷೇತ್ರ…

2 hours ago

ಆಂಬುಲೆನ್ಸ್‌ ತುರ್ತು ಮೀಸಲು ಮಾರ್ಗಕ್ಕೆ ಜಯಾ ಬಚ್ಚನ್‌ ಒತ್ತಾಯ

ಹೊಸದಿಲ್ಲಿ : ದೇಶದ ಎಲ್ಲ ನಗರಗಳ ರಸ್ತೆಗಳಲ್ಲಿ ಆಂಬ್ಯುಲೆನ್ಸ್‌ಗಳ ಸಂಚಾರಕ್ಕಾಗಿ ಪ್ರತ್ಯೇಕ ಮೀಸಲು ಮಾರ್ಗಗಳನ್ನು ಒದಗಿಸುವಂತೆ ಸಮಾಜವಾದಿ ಪಕ್ಷದ ಸಂಸದೆ…

2 hours ago

ಗುಂಡ್ಲುಪೇಟೆ | ದನಗಾಹಿ ಮೇಲೆ ಹುಲಿ ದಾಳಿ ; ಪ್ರಾಣಾಪಾಯದಿಂದ ಪಾರು

ಗುಂಡ್ಲುಪೇಟೆ : ಜಾನುವಾರು ಹಾಗೂ ಜಾನುವಾರು ಮೇಯಿಸುತ್ತಿದ್ದ ರೈತರೊಬ್ಬರ ಮೇಲೆ ಹುಲಿ ದಾಳಿ ನಡೆಸಿದೆ. ಪರಿಣಾಮ ರೈತ ಗಾಯಗೊಂಡಿದ್ದಾನೆ. ಘಟನೆ…

2 hours ago

ಏಕತಾ ಮಾಲ್‌ ನಿರ್ಮಾಣಕ್ಕೆ ಹೈಕೋರ್ಟ್ ತಡೆ‌

ಮೈಸೂರು : ರಾಜ್ಯದ ಪ್ರತಿಯೊಂದೂ ಜಿಲ್ಲೆಗಳ ವಿಶೇಷ ಉತ್ಪನ್ನಗಳ ಪರಿಚಯ, ಮಾರಾಟಕ್ಕೆ ಅವಕಾಶ ಕಲ್ಪಿಸಿಕೊಡುವ ಉದ್ದೇಶದಿಂದ ಕೇಂದ್ರ ಸರ್ಕಾರ ನಿರ್ಮಿಸುತ್ತಿರುವ…

2 hours ago