ʼಕೈʼ ಸಮಾವೇಶದಲ್ಲಿ ಬಿಜೆಪಿ-ಜೆಡಿಎಸ್ ನಾಯಕರ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕು ಪ್ರದರ್ಶನ…
ಮೈಸೂರು: ದೋಸ್ತಿ ಪಕ್ಷಗಳ ಪಾದಯಾತ್ರೆಗೆ ಟಕ್ಕರ್ ಕೊಡಲು ಶುಕ್ರವಾರ ನಗರದಲ್ಲಿ ಕಾಂಗ್ರೆಸ್ ಆಯೋಜಿಸಿದ್ದ ಜನಾಂದೋಲದ ಸಭೆಯಲ್ಲಿ ಮೈತ್ರಿ ಪಕ್ಷವಾದ ಬಿಜೆಪಿ-ಜೆಡಿಎಸ್‌ನ ಆರೋಪ-ಪ್ರತ್ಯಾರೋಪಗಳ ವಿಡಿಯೋ ತುಣುಕುಗಳನ್ನು ಪ್ರದರ್ಶಿಸಲಾಯಿತು.
ಮೊದಲಿಗೆ ಮೈಸೂರು ಚಲೋ ಪಾದಯಾತ್ರೆಗೆ ಅಪಸ್ವರ ವ್ಯಕ್ತಪಡಿಸಿದ ಎಚ್.ಡಿ ಕುಮಾರಸ್ವಾಮಿ ಹಾಗೂ ಜೆಡಿಎಸ್ ಶಾಸಕ ಜಿ.ಟಿ ದೇವೇಗೌಡ ವಿಡಿಯೊಗಳನ್ನು ಪ್ರದರ್ಶಿಸಿದರು.
ಹೆಚ್.ಡಿ ದೇವೇಗೌಡರು ಬಿಜೆಪಿ ವಿರುದ್ಧ ಹಾಗೂ ಬಿಎಸ್ ಯಡಿಯೂರಪ್ಪ ಅವರು ಜೆಡಿಎಸ್ ಹಾಗೂ ಆ ಪಕ್ಷದ ನಾಯಕರನ್ನು ಟೀಕಿಸಿದ್ದ ವಿಡಿಯೊಗಳನ್ನು ಪ್ರದರ್ಶಿಸಲಾಯಿತು.
ಇನ್ನು ಬಿಎಸ್ ಯಡಿಯೂರಪ್ಪ ಹಾಗೂ ಬಿ.ವೈ ವಿಜಯೇಂದ್ರ ಅವರ ವಿರುದ್ಧ ಬಿಜೆಪಿ ಶಾಸಕ ಯತ್ನಾಳ್ ನೀಡಿದ್ದ ವಿಡಿಯೋ ಹೇಳಿಕೆಗಳನ್ನು ಪ್ರಸಾರ ಸಹ ಪ್ರದರ್ಶಿಸಿದರು.
ಎಚ್.ಡಿ ಕುಮಾರಸ್ವಾಮಿ ಹಾಗೂ ಬಿಜೆಪಿಯ ಸಿಪಿ ಯೋಗೇಶ್ವರ್ ಅವರು ಪರಸ್ಪರ ಟೀಕಿಸಿದ್ದ ವಿಡಿಯೋ ಹಾಗೂ ಎಚ್ ಡಿ ಕೆ ವಿರುದ್ಧ ಬಿಜೆಪಿ ಶಾಸಕ ಅಶ್ವಥ್ ನಾರಾಯಣ್ ಮಾಡಿದ್ದ ಆರೋಪಗಳ ವಿಡಿಯೋ ತುಣುಕುಗಳನ್ನು ಎಲ್‌ಇಡಿ ಪರದೆಯಲ್ಲಿ ಪ್ರದರ್ಶಿಸಲಾಯಿತು.
ಮಂಡ್ಯ : ಜಿಲ್ಲೆಯ ನಾಲ್ಕು ಪೊಲೀಸ್ ಉಪ ವಿಭಾಗಗಳಲ್ಲಿ ನಡೆದಿದ್ದ ಕಳ್ಳತನ ಪ್ರಕರಣಗಳನ್ನು ಪೊಲೀಸರು ಬೇಧಿಸಿದ್ದಾರೆ. 28 ಮಂದಿ ಆರೋಪಿಗಳನ್ನು…
ಬಾಗಲಕೋಟೆ : ಕಾಂಗ್ರೆಸ್ ಸರ್ಕಾರ ಮಹಿಳೆಯರು, ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತರು ಸೇರಿದಂತೆ ಶೋಷಿತ ವರ್ಗಗಳ ಏಳಿಗೆಗೆ ಶ್ರಮಿಸುತ್ತಿದೆ. ತಳಸಮುದಾಯದವರಿಗೆ ಆರ್ಥಿಕ…
ರಾಯಚೂರು : ಜಿಲ್ಲೆಯ ಸಿಂಧನೂರು ಪಟ್ಟಣದ ಶ್ರೀ ಕೃಷ್ಣದೇವರಾಯ ವಿದ್ಯಾಸಂಸ್ಥೆಯಲ್ಲಿ ನೂತನವಾಗಿ ಸ್ಥಾಪಿಸಲಾಗಿರುವ ಸೈನಿಕ ಶಾಲೆಯನ್ನು ಕೇಂದ್ರದ ಬೃಹತ್ ಕೈಗಾರಿಕೆ…
ನವದೆಹಲಿ : ಸಮೀರ್ ರಿಜ್ವಿ ಸ್ಫೋಟಕ ಬ್ಯಾಟಿಂಗ್ ಜತೆಗೆ ಸಂಘಟಿತ ಬೌಲಿಂಗ್ ನೆರವಿನಿಂದ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್…
ಟೆಹ್ರಾನ್ : ಅಮೆರಿಕದ ಮಿತ್ರರಾಷ್ಟ್ರಗಳಲ್ಲಿನ ಸೇನಾ ನೆಲೆಗಳ ಮೇಲೆ ಇರಾನ್ ಕ್ಷಿಪಣಿ ದಾಳಿ ಮುಂದುವರಿದಿರುವಂತೆಯೇ ಇತ್ತ ಇರಾನ್ ಮೇಲೆ ಮುಗಿಬಿದ್ದಿರುವ…
ಬೆಂಗಳೂರು : ಯುದ್ಧದ ಪರಿಣಾಮ ಕೆಲ ಉದ್ಯಮಗಳಿಗೆ ಹೊಡೆತ ನೀಡಿದರೆ, ಇನ್ನೂ ಕೆಲವು ಕ್ಷೇತ್ರಗಳಿಗೆ ಅದೇ ಅವಕಾಶವಾಗಿ ಪರಿಣಮಿಸಿದೆ. ಅದರಲ್ಲೂ…