ಸರಗೂರು: ಮೈಸೂರು ಜಿಲ್ಲೆ ಸರಗೂರು ತಾಲ್ಲೂಕಿನ ಹಳೆಯೂರು ಗ್ರಾಮದಲ್ಲಿ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಅನಾವರಣಗೊಳಿಸಲಾಯಿತು.
ಹಳೆಯೂರು ಗ್ರಾಮಸ್ಥರು ನಿರ್ಮಿಸಿರುವ ಬಾಬಾ ಸಾಹೇಬ್ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಯನ್ನು ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದ ಶಾಸಕ ಅನಿಲ್ ಚಿಕ್ಕಮಾದು ಅವರು ಲೋಕಾಪರ್ಣೆಗೊಳಿಸಿದರು.
ಪುತ್ಥಳಿ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ನಂಜನಗೂಡು ಶಾಸಕ ದರ್ಶನ್ ಧ್ರುವನಾರಾಯಣ್ ಸೇರಿದಂತೆ ಅನೇಕ ಕಾಂಗ್ರೆಸ್ ಕಾರ್ಯಕರ್ತರು ಹಾಗೂ ಮುಖಂಡರು ಭಾಗಿಯಾಗಿದ್ದರು.
ಹೆಚ್.ಡಿ.ಕೋಟೆ ವಿಧಾನಸಭಾ ಕ್ಷೇತ್ರದಲ್ಲಿ ಭರ್ಜರಿ ಗೆಲುವು ಸಾಧಿಸಿದ ಶಾಸಕ ಅನಿಲ್ ಚಿಕ್ಕಮಾದು ಅವರು, ಕಾರ್ಯಕ್ರಮವನ್ನುದ್ದೇಶಿಸಿ ಮಾತನಾಡಿ, ಕ್ಷೇತ್ರದ ಜನತೆಯ ಬಗ್ಗೆ ಒಳ್ಳೆಯ ಮಾತುಗಳನ್ನಾಡಿದರು. ಇದಲ್ಲದೇ ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಂದ ಜನತೆಗೆ ಆಗುತ್ತಿರುವ ಲಾಭದ ಬಗ್ಗೆ ಖುಷಿಪಟ್ಟರು.
ಕಾರ್ಯಕ್ರಮದಲ್ಲಿ ಶಾಸಕ ಅನಿಲ್ ಚಿಕ್ಕಮಾದು ಹಾಗೂ ದರ್ಶನ್ ಧ್ರುವನಾರಾಯಣ್ ಅವರನ್ನು ಗ್ರಾಮಸ್ಥರು ಸನ್ಮಾನಿಸಿ ಗೌರವಿಸಿದರು.
ಈ ವೇಳೆ ಗ್ರಾಮಸ್ಥರುಗಳೆಲ್ಲಾ ಸೇರಿ ಅಲ್ಲಿ ನೆರೆದಿದ್ದ ಜನರಿಗೆ ಭೋಜನದ ವ್ಯವಸ್ಥೆಯನ್ನು ಸಹ ಮಾಡಿದ್ದರು.
ಉತ್ತರ ಪ್ರದೇಶ: ಲೋಕಸಭಾ ಚುನಾವಣಾ ಸಂದರ್ಭದಲ್ಲಿ ಶ್ರೀಮಂತರು ಹಾಗೂ ಬಡವರ ನಡುವಿನ ಆರ್ಥಿಕತೆ, ಅಸಮಾನ ಆಸ್ತಿಗೆ ಸಂಬಂಧಿಸಿದಂತೆ ಹೇಳಿಕೆ ನೀಡಿದ್ದ…
ಬೆಂಗಳೂರು: ಪ್ರಸಕ್ತ ವರ್ಷದಲ್ಲಿ ಚಳಿ ತುಂಬಾ ಜಾಸ್ತಿಯಿದ್ದು, ಶೀತಗಾಳಿ ಹೆಚ್ಚಾಗಲು ಕರಾವಳಿ ತೀರ ಪ್ರದೇಶದಲ್ಲಾದ ವಾತಾವರಣ ಬದಲಾವಣೆ ಕಾರಣ ಎಂದು…
ಮಂಡ್ಯ: ಸಕ್ಕರೆ ನಾಡು ಮಂಡ್ಯದಲ್ಲಿ ನಡೆಯುತ್ತಿರುವ 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಮಾಂಸಾಹಾರ ವಿತರಣೆ ಮಾಡಿರುವ ವಿಚಾರ ಭಾರೀ ವಿವಾದಕ್ಕೆ…
ಕುವೈತ್/ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಎರಡು ದಿನಗಳ ಕಾಲ ಕುವೈತ್ ಪ್ರವಾಸದಲ್ಲಿದ್ದು, ಇಲ್ಲಿನ ರಾಜ ಶೇಕ್ ಮಿಶಾಲ್ ಅಲ್…
ಕಲಬುರ್ಗಿ: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಒತ್ತು ನೀಡುತ್ತಿದ್ದು, 371 ಜೆ ಜಾರಿಯಾದ ದಶಮಾನೋತ್ಸವದ ಪ್ರಯುಕ್ತ 371 ಹಾಸಿಗೆಗಳ…
ಬೆಂಗಳೂರು: ವಿಧಾನ ಪರಿಷತ್ ಶಾಸಕ ಸಿ.ಟಿ.ರವಿ ಬಂಧನ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನೀಡಿರುವ ಹೇಳಿಕೆ ಅಮಿತ್…