ಮೈಸೂರು : ಡಾ. ಬಿ.ಆರ್ ಅಂಬೇಡ್ಕರ್ ರವರ 133 ನೇ ಜಯಂತಿ ಪ್ರಯುಕ್ತ ಜಿಲ್ಲಾಡಳಿತ ,ಜಿಲ್ಲಾ ಪಂಚಾಯತಿ ವತಿಯಿಂದ ಪುರ ಭವನದ ಮುಂಭಾಗದಲ್ಲಿ ಇರುವ ಬಾಬಾ ಸಾಹೇಬರ ಪ್ರತಿಮೆಗೆ ಮಾಲಾರ್ಪಣೆ ಹಾಗೂ ಪುಷ್ಪಾರ್ಚನೆ ಮಾಡುವ ಮೂಲಕ ಆಚರಣೆ ಮಾಡಲಾಯಿತು.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿಕಾರಿಗಳಾದ ಡಾ. ಕೆ. ವಿ ರಾಜೇಂದ್ರ, ಜಿಲ್ಲಾ ಪೊಲೀಸ್ ಆಯುಕ್ತರಾದ ರಮೇಶ್ ಬನೋತ್, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಕೆ.ಎಂ ಗಾಯತ್ರಿ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳಾದ ಸೀಮಾ ಲಾಟ್ಕರ್, ಮಹಾನಗರ ಪಾಲಿಕೆಯ ಆಯುಕ್ತರಾದ ಎನ್ ಎನ್ ಮಧು, ಸಮಾಜ ಕಲ್ಯಾಣ ಇಲಾಖೆಯ ಜಂಟಿ ನಿರ್ದೇಶಕರಾದ ರಂಗೇಗೌಡ ಸೇರಿದಂತೆ ಇನ್ನಿತರ ಅಧಿಕಾರಿಗಳು ಭಾಗವಹಿಸಿದ್ದರು.