ಮೈಸೂರು : ಮೈಸೂರಿನ ಜಿಲ್ಲಾಸ್ಪತ್ರೆ ವೈದ್ಯರಾದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ರಾಷ್ಟ್ರಮಟ್ಟದ ವಿಚಾರ ಸಂಕಿರಣದಲ್ಲಿ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿಗೆ ಭಾಜನರಾಗಿದ್ದಾರೆ.
ಮೈಸೂರು ಜಿಲ್ಲಾಸ್ಪತ್ರೆಯ ಫೋರೆನ್ಸಿಕ್ ಮೆಡಿಸಿನ್ ಮತ್ತು ಟಾಕ್ಸಿಕಾಲಜಿ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ವಿಷ ಶಾಸ್ತ್ರ ವಿಷಯದಲ್ಲಿ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ.
ಇತ್ತೀಚಿಗೆ ಮಂಗಳೂರಿನ ಕಸ್ತೂರಬಾ ಮೆಡಿಕಲ್ ಕಾಲೇಜಿನಲ್ಲಿ ಅಂತಾರಾಷ್ಟ್ರೀಯ ವಿಚಾರ ಸಂಕಿರಣದಲ್ಲಿ ‘ದಿ ಇಂಡಿಯನ್ ಸೊಸೈಟಿ ಆಫ್ ಟಾಕ್ಸಿಕಾಲಜಿ’ ವತಿಯಿಂದ ಡಾ.ಡಿ.ಆರ್.ಮಹದೇಶ್ವರ ಪ್ರಸಾದ್ ಅವರಿಗೆ ’ಸೀನಿಯರ್ ರಿಸರ್ಚ್ ಸೈಂಟಿಸ್ಟ್’ ಪ್ರಶಸ್ತಿ ಪ್ರದಾನ ಮಾಡಿದೆ.
ಎಂಎಂಬಿಎಸ್, ಎಂಡಿ, ಪಿಎಚ್ ಡಿ ಪದವೀಧರರಾದ ಡಾ. ಡಿ.ಆರ್. ಮಹದೇಶ್ವರ ಪ್ರಸಾದ್ ಅವರು ಕಳೆದ 25 ವರ್ಷಗಳಿಂದ ಆರೋಗ್ಯ ಸೇವೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದಾರೆ. ಜತೆಗೆ ಕೋವಿಡ್ ಸಾಂಕ್ರಾಮಿಕದ ಸಮಯದಲ್ಲಿಯೂ ಸಕ್ರಿಯವಾಗಿ ಸೇವೆ ಸಲ್ಲಿಸಿ ಗಮನ ಸೆಳೆದಿದ್ದಾರೆ.
ಜಾಗತಿಕ ನೆಲೆಯಲ್ಲಿ ಕನ್ನಡ ಕಟ್ಟುವ ಬಗೆ ಕುರಿತ ಗೋಷ್ಠಿಯಲ್ಲಿ ಅಮೆರಿಕ ಕನ್ನಡ ಕೂಟ (ಅಕ್ಕ)ದ ಅಧ್ಯಕ್ಷ ಅಮರ್‌ನಾಥ್‌ಗೌಡ ಹೇಮಂತ್ ಕುಮಾರ್…
`ಹೊಸ ತಲೆಮಾರಿನ ಸಾಹಿತ್ಯ' ಕುರಿತ ವಿಚಾರಗೋಷ್ಠಿಯಲ್ಲಿ ವಿಮರ್ಶಕ ವಿಕ್ರಂ ವಿಸಾಜಿ ಅಭಿಮತ • ಜಿ.ತಂಗಂ ಗೋಪಿನಾಥಂ ಮಂಡ್ಯ: ಹೊಸ ತಲೆಮಾರಿನ…
ಮೈಸೂರು: ಮಾಗಿ ಉತ್ಸವದ ಅಂಗವಾಗಿ ಜಗತ್ಪ್ರಸಿದ್ಧ ಮೈಸೂರು ಅರಮನೆ ಆವರಣದಲ್ಲಿ ಇಂದು ಸಂಜೆ ಖ್ಯಾತ ಗಾಯಕ ವಿಜಯ್ ಪ್ರಕಾಶ್ ಅವರು…
ಚಾಮರಾಜನಗರ: ಬಿಆರ್‌ಟಿ ಹುಲಿ ಸಂರಕ್ಷಿತಾರಣ್ಯದಲ್ಲಿ ಪಶು ವೈದ್ಯರ ಕೊರತೆ ಎದ್ದು ಕಾಣುತ್ತಿದ್ದು, ಹೊರಗುತ್ತಿಗೆ ಆಧಾರದಲ್ಲಿ ವೈದ್ಯರ ಹುದ್ದೆಯ ನೇಮಕಾತಿಗೂ ಜಾಹೀರಾತು…
ಬೆಂಗಳೂರು: ರಾಜ್ಯದಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಣ್ಣುಗಳ ರಾಣಿ ಎಂದು ಕರೆಯಿಸಿಕೊಳ್ಳುವ ಮಾವಿಗೆ ಅನೇಕ ರೋಗಗಳು ಕಾಣಿಸಿಕೊಂಡಿದ್ದು, ರೈತರಿಗೆ ಇಳುವರಿ…