ಮೈಸೂರು: ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಸಿಂಡಿಕೇಟ್ ಸದಸ್ಯರಾಗಿ ಜಯಪುರ ಹೋಬಳಿಯ ಡಿ.ಸಾಲುಂಡಿ ಗ್ರಾಮದ ಡಾ.ಎಚ್ ಬೀರಪ್ಪ ಅವರು ಗುರುವಾರ(ಆ.29) ಅಧಿಕಾರಿ ಸ್ವೀಕರಿಸಿದರು.
ವಿವಿ ಕುಲಪತಿ ಲಿಂಗರಾಜ ಗಾಂಧಿ ಸಮ್ಮುಖದಲ್ಲಿ ರಾಜ್ಯ ಸರ್ಕಾರದ ಆದೇಶದನ್ವಯ ಅಧಿಕಾರ ಸ್ವೀಕರಿಸಿದ್ದು, ಮೂರು ವರ್ಷಗಳ ಅವಧಿಗೆ ಈ ಸದಸ್ಯತ್ವ ಜಾರಿಯಲ್ಲಿರಲಿದೆ.
ಬೀರಪ್ಪ ಮೈಸೂರು ವಿವಿಯ ಸಂವಹನ ಮತ್ತು ಪತ್ರಿಕೋದ್ಯಮ ವಿಷಯದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು, ಜೊತೆಗೆ ಸಿದ್ದರಾಮಯ್ಯನವರ ರಾಜಕೀಯ ಸಂವಹನ ಅಭಿವೃದ್ಧಿ ದೃಷ್ಠಿಕೋನ ಎಂಬ ವಿಷಯದಲ್ಲಿ ಪಿಎಚ್‌ಡಿ ಪದವಿ ಪಡೆದಿದ್ದಾರೆ. ಸುಮಾರು ಎರಡು ವರ್ಷದಿಂದ ಶಿಕ್ಷಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಜೊತೆಗೆ ಕಾವೇರಿ ಹೋರಾಟದಲ್ಲಿ ಏಕಾಂಗಿ ಪ್ರತಿಭಟನೆ ಮಾಡಿ ತನ್ನ ಸರ್ಕಾರಿ ಕೆಲಸಕ್ಕೆ ರಾಜೀನಾಮೆ ನೀಡಿದ್ದರು.
ಬೆಂಗಳೂರು ನಗರ ವಿವಿಯು ವಿಧಾನಸೌಧದ ಮೊಗ್ಗಲಲ್ಲೇ ಇದ್ದು, ವಿವಿಯಲ್ಲಿ ದೇಶಕ್ಕೆ ಮಾದರಿಯಾಗುವ ಅತ್ಯುತ್ತಮವಾದ ಶೈಕ್ಷಣಿಕ ನೀತಿ, ನಿರ್ಧಾರಗಳನ್ನು ಕೈಗೊಳ್ಳಲಾಗುವುದು. ಶಿಕ್ಷಣವು ಜನಸಾಮಾನ್ಯರಿಗೆ ಕೈಗೆಟುಕುವಂತೆ ವಿವಿಯಲ್ಲಿ ಆಡಳಿತ ನೀತಿ ರೂಪಿಸಲಾಗುವುದು ಎಂದು ಡಾ.ಎಚ್. ಬೀರಪ್ಪ ತಿಳಿಸಿದರು.
ಮಳವಳ್ಳಿ : ತಾಲೂಕಿನ ಹಲಗೂರು ಸಮೀಪದ ಜೂಗನಹಳ್ಳಿ ವ್ಯಾಪ್ತಿಯ ತೋಟದ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ಚಿನ್ನ ದೋಚಿ ಪರಾರಿಯಾಗಿದ್ದ…
ಮದ್ದೂರು : ಹಿಂದೂ ಪರ ಸಂಘಟನೆಗಳ ವತಿಯಿಂದ ಹಮ್ಮಿಕೊಂಡಿದ್ದ ಬಲಿದಾನ್ ದಿವಾಸ್ ಕಾರ್ಯಕ್ರಮದಲ್ಲಿ ಅನ್ಯ ಕೋಮಿನ ಭಾವನೆಗಳಿಗೆ ಧಕ್ಕೆ ತರುವ…
ಬೆಂಗಳೂರು : ಗ್ರಾಮಗಳಿಗೆ ನುಗ್ಗಿ ಬೆಳೆಹಾನಿ, ಜೀವಹಾನಿ ಮಾಡುತ್ತಿರುವ ಆನೆಗಳ ಸೆರೆಗೆ ಆದೇಶ ನೀಡಿದ್ದು, ಈಗಾಗಲೇ 2 ಆನೆ ಸೆರೆ…
ಬೆಂಗಳೂರು : ಭದ್ರಾ ಅಭಯಾರಣ್ಯದ ಪರಿಸರ ಸೂಕ್ಷ್ಮ ವಲಯ ಪ್ರದೇಶವನ್ನು ನಿಗದಿ ಪಡಿಸುವ ಕುರಿತಂತೆ ಚಿಕ್ಕಮಗಳೂರು ಜಿಲ್ಲೆಯ ಜನಪ್ರತಿನಿಧಿಗಳೊಂದಿಗೆ ಸಭೆ…
ಹೊಸದಿಲ್ಲಿ : ಎಲ್‌ಪಿಜಿ ಸಿಲಿಂಡರ್ ರಿಫಿಲಿಂಗ್ ಸಮಯ ಮಿತಿ ಬದಲಾವಣೆ ಬಗ್ಗೆ ಹಲವು ಊಹಾಪೋಹಗಳು ಹರಡಿದ್ದು, ಇದೀಗ ಪೆಟ್ರೋಲಿಯಂ ಮತ್ತು…
ನಾಪೋಕ್ಲು : ದ್ವಿಚಕ್ರ ವಾಹನವೊಂದಕ್ಕೆ ಆಕಸ್ಮಿಕ ಬೆಂಕಿ ತಗುಲಿ ಹೊತ್ತಿ ಉರಿದ ಘಟನೆ ಚೈಯಂಡಾಣೆಯ ನರಿಯಂದಡ ಗ್ರಾಮದಲ್ಲಿ ಜರುಗಿದೆ. ಸ್ಥಳೀಯ…